ಹೊಸ ವರ್ಷಾಚರಣೆ: ನಿಷೇಧಾಜ್ಞೆ ಜಾರಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗುವ ಭೀತಿ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ ಹೊಸ ನಿಯಮವನ್ನು ಜಾರಿಗೊಳಿಸಿದೆ. ಡಿ. 31ರ ಸಂಜೆ 6 ಗಂಟೆಯಿಂದ ಜ. 1ರ ಬೆಳಿಗ್ಗೆ 6 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಂದು ರಾತ್ರಿ ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ರಸ್ತೆ, ಉದ್ಯಾನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ […]
ಉಡುಪಿ: ಮಲಬಾರ್ ಗೋಲ್ಡ್ ನಿಂದ 9 ವಸತಿರಹಿತ ಕುಟುಂಬಗಳಿಗೆ ₹ 7 ಲಕ್ಷ ಸಹಾಯಧನ ವಿತರಣೆ
ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಸಿಎಸ್ ಆರ್ ಯೋಜನೆಯಡಿಯಲ್ಲಿ ಒಂಭತ್ತು ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು ₹ 7 ಲಕ್ಷ ಮೊತ್ತದ ಸಹಾಯಧನವನ್ನು ಇಂದು ಸಂಸ್ಥೆಯ ಉಡುಪಿ ಶಾಖೆಯಲ್ಲಿ ವಿತರಣೆ ಮಾಡಲಾಯಿತು. ಫಲಾನುಭವಿಗಳಿಗೆ ಚೆಕ್ ವಿತರಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಮನುಷ್ಯ ಹಣ, ಶ್ರೀಮಂತಿಕೆಯ ಒಟ್ಟಿಗೆ ಹೃದಯ ಶ್ರೀಮಂತಿಕೆಯನ್ನು ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಶಾಂತಿ, ನೆಮ್ಮದಿ ಬಹಳ ಮುಖ್ಯ. ಇದು ಮನುಷ್ಯನನ್ನು ಬಹಳ […]
ಉಡುಪಿXPRESS “ಅಮ್ಮ with ಕಂದಮ್ಮ ಫೋಟೋ ಸ್ಪರ್ಧೆಯ ಬಹುಮಾನ ವಿತರಣೆ
ಉಡುಪಿ: ಕರಾವಳಿಯ ಜನಪ್ರಿಯ ಸುದ್ದಿ ಜಾಲತಾಣ ಉಡುಪಿXPRESS ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಅಮ್ಮ with ಕಂದಮ್ಮ ಫೋಟೋ ಸ್ಪರ್ಧೆ 2020 ಸೀಸನ್-2 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಇಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನ ಉಡುಪಿ ಶೋರೂಂ ನಲ್ಲಿ ನೆರವೇರಿತು. ಉಡುಪಿ ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯೆ ಡಾ. ಸುನೀತಾ ಶೆಟ್ಟಿ […]
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಬಂಧನ
ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಕಲ್ಮಡ್ಕ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಲ್ಮಡ್ಕ ಗ್ರಾಮದ ವಾರ್ಡ್-1ರಿಂದ ಸ್ಪರ್ಧಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಎಂದು ಗುರುತಿಸಲಾಗಿದೆ. ಈತ ತನ್ನ ಚಿಕ್ಕಪ್ಪನ ಮಗಳಾದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಮನೆಯವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಜ. 1ರಿಂದಲೇ ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ ಕಾಲೇಜು ಆರಂಭವಾಗಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದರು. ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು. ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ ಎಂಬುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ. ಜನವರಿ 1ರಿಂದಲೇ ನಿಗದಿಯಂತೆ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಲಾ […]