ಕೊಡಗು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ: ಕೊಡಗು ಜಿಲ್ಲಾ ಅಯೋಧ್ಯಾ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಇಂದು ಚಾಲನೆ ನೀಡಿದರು. ಪೊನ್ನಂಪೇಟೆ ಶ್ರೀರಾಮಕೃಷ್ಣ ಆಶ್ರಮದ ಶ್ರೀ ಬೋಧಸ್ವರೂಪಾನಂದ ಸ್ವಾಮೀಜಿ, ಅರಮೇರಿ ಶ್ರೀ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಮೈಸೂರು ರಾಮಕೃಷ್ಣ ಆಶ್ರಮದ ವಿಶ್ವವಿಧಾನಂದ ಸ್ವಾಮೀಜಿ ಮತ್ತು ಆರ್ ಎಸ್ಎಸ್ ಮುಖಂಡ ಸೀತಾರಾಮ, ಕೊಡಗು ಜಿಲ್ಲಾ ವಿಹಿಂಪ ಬಜರಂಗದಳದ ಮುಖಂಡರು ಉಪಸ್ಥಿತರಿದ್ದರು.

ಡಾ. ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ಪ್ರಧಾನಿ

ಉಡುಪಿ: ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಬರೆದ ಪತ್ರ ಇಂದು ಕುಟುಂಬಕ್ಕೆ ತಲುಪಿದೆ. ಗೋವಿಂದಾಚಾರ್ಯರ ಪುತ್ರ ವಿನಯಭೂಷಣ ಆಚಾರ್ಯರ ಹೆಸರಿಗೆ ಪ್ರಧಾನಿ ಪತ್ರ ಬರೆದಿದ್ದರು. ಆ ಪತ್ರ ಇಂದು ಅವರ ಮನೆಗೆ ತಲುಪಿದೆ.

ಉಡುಪಿ: ಭೀಕರ ರಸ್ತೆ ಅಪಘಾತ; ಸ್ಕೂಟರ್ ಸವಾರ ಗಂಭೀರ

ಉಡುಪಿ: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಸಮೀಪ ಇಂದು ಸಂಜೆ ಸಂಭವಿಸಿದೆ.‌ ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಹಿತ ರಸ್ತೆಗೆ ಅಪ್ಪಳಿಸಿದ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅವರನ್ನು ಕೂಡಲೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.

ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ ನೇಮಕ

ಉಡುಪಿ: ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರಕೋಷ್ಠದ ಸಂಚಾಲಕರು ಆಗಿರುವ ಸಂಸದ ಭಗವಂತ ಖೂಬಾ ಅವರು ನೇಮಕಗೊಳಿಸಿ ಆದೇಶ ನೀಡಿದ್ದಾರೆ. ಸದಸ್ಯರನ್ನಾಗಿ ಮಾಡಲು ಸಹಕಾರ ನೀಡಿದ ಎಲ್ಲ ಬಿಜೆಪಿ ನಾಯಕರಿಗೆ ಅಂಡಾರು ದೇವಿಪ್ರಸಾದ್ ಶೆಟ್ಟಿ ಕೃತಜ್ಞತೆ ‌ಸಲ್ಲಿಸಿದ್ದಾರೆ.

ಟಿಆರ್ ಪಿ ತಿರುಚಲು ಲಕ್ಷಗಟ್ಟಲೆ ಹಣಕೊಟ್ಟ ಅರ್ನಬ್ ಗೋಸ್ವಾಮಿ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬಾರ್ಕ್​ ಮಾಜಿ ಸಿಇಒ

ಮುಂಬೈ: ಟಿಆರ್​ಪಿ ತಿರುಚಿದ ಪ್ರಕರಣಕ್ಕೆ ಇದೀಗ ಬಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದಲ್ಲಿ ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಸೋಮವಾರದಂದು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು ಬಾರ್ಕ್​ ಸಂಸ್ಥೆಯ ಮಾಜಿ ಸಿಇಓ ಪಾರ್ಥೋ ದಾಸ್​ಗುಪ್ತಾ ಅವರಿಗೆ ಲಕ್ಷಗಟ್ಟಲೆ ಹಣ ಪಾವತಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಅರ್ನಬ್​ ಗೋಸ್ವಾಮಿ ಹೆಸರು ನೇರವಾಗಿ ಪ್ರಸ್ತಾಪವಾಗಿಲ್ಲವಾದರೂ ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು […]