ಬೈಂದೂರು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಬೈಂದೂರು: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಬೈಂದೂರು ಸಮೀಪದ ನಾಗೂರು ನಿವಾಸಿ ಬುದ್ದಿವಂತ ನಾಯರಿ (60) ಮೃತಪಟ್ಟ ವ್ಯಕ್ತಿ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನವರಿ ಕೊನೆಯಲ್ಲಿ ಕಂಬಳ ಆಯೋಜನೆ: ಸಮಿತಿಯ ಮಹಾಸಭೆಯಲ್ಲಿ ನಿರ್ಣಯ; ರಾತ್ರಿ ನಡೆಯಲ್ಲ ಕಂಬಳ

ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯು ಜನವರಿ ತಿಂಗಳ ಕೊನೆಯಲ್ಲಿ ಹಾಗೂ ಫೆಬ್ರವರಿ ತಿಂಗಳಲ್ಲಿ ಕಂಬಳ ಆಯೋಜಿಸಲು ತೀರ್ಮಾನಿಸಿದೆ. ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಶನಿವಾರ ಸಮಿತಿಯ ಅಧ್ಯಕ್ಷ ಕೂಳೂರು ಪೊಯ್ಯೇಲು ಪಿ.ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಕೊರೋನ‌ ಹಿನ್ನೆಲೆಯಲ್ಲಿ ಸರಕಾರದ ಕಾನೂನಿನ‌ ಎಲ್ಲ ಮಾರ್ಗಸೂಚಿ ಅನುಕರಣೆ ಮಾಡಿಯೇ ನಡೆಸಲು‌ ತೀರ್ಮಾನಿಸಲಾಗಿದೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿ ಅವರಿಗೆ ಮನವಿ‌ ಮಾಡಲಾಗುವುದು. […]

ಉಡುಪಿ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಉಡುಪಿ: ಮೈಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಇಂದು ರಾತ್ರಿ 9ಗಂಟೆ ಸುಮಾರಿಗೆ ಸಂಭವಿಸಿದೆ. ಬಡಗುಬೆಟ್ಟು ನಿವಾಸಿ ಶ್ರೀವಾತ್ಸವ (30) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕದ ಸಿಬ್ಬಂದಿ ಬೆಂಕಿ ನಂದಿಸಿ, ತಕ್ಷಣವೇ ವ್ಯಕ್ತಿಯನ್ನು ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿಗೆ ತೀವ್ರ ಸುಟ್ಟ ಗಾಯವಾಗಿದ್ದು, ಗಂಭೀರ ಸ್ಥಿತಿಯಲ್ಲಿ ಇದ್ದ ಕಾರಣ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನಾ […]

ಮಣಿಪಾಲ: ಅತ್ಯಂತ ಕ್ಲಿಷ್ಟ, ಸಂಕೀರ್ಣವಾದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾದ ಕೆಎಂಸಿ ಆಸ್ಪತ್ರೆಯ ವೈದ್ಯರು

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗವು ಸಂಕೀರ್ಣವಾದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದ್ದು, ಇದನ್ನು ಭಾರತದ ಕೆಲವೇ ಪ್ರತಿಷ್ಠಿತ ಕ್ಯಾನ್ಸರ್ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ. ಶ್ವಾಸ ನಾಳದ (ವಿಂಡ್‌ಪೈಪ್) ಕ್ಯಾನ್ಸರ್ ಶಸ್ತ್ರಚಿಕಿತ್ಸೆಯು ಒಂದು ಕ್ಲಿಷ್ಟವಾದ ಮತ್ತು ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳಲ್ಲಿ ಒಂದಾಗಿದ್ದು, ಅಲ್ಲಿ ಕ್ಯಾನ್ಸರ್ ಗೆಡ್ಡೆಯ ಜೊತೆಗೆ ಶ್ವಾಸ ನಾಳದ ಭಾಗವನ್ನು ತೆಗೆದುಹಾಕಲಾಗುತ್ತದೆ. ಉಳಿದ ಶ್ವಾಸ ನಾಳವನ್ನು ಕೆಳಗಿನ ಭಾಗ ಅಥವಾ ಶಾಖೆಗಳಿಗೆ (ಮುಖ್ಯ ಬ್ರಾಂಕಸ್) ಸಂಪರ್ಕಿಸಲಾಗುತ್ತದೆ. ಶ್ವಾಸ ನಾಳದ ಕ್ಯಾನ್ಸರ್, […]

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಭಾರತಿ ಸತೀಶ್ ಆಯ್ಕೆ

ಮಂಗಳೂರು: ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಂಜೇಶ್ವರದ ವರ್ಕಾಡಿ ಪಂಚಾಯತ್ ನ ತಲಕ್ಕಿ ವಾರ್ಡ್ ನಲ್ಲಿ ಮೂರನೇ ಬಾರಿಗೆ ಎಲ್ ಡಿಎಫ್ ಅಭ್ಯರ್ಥಿಯಾಗಿ ಅತ್ಯಧಿಕ ಮತಗಳಿಂದ ಗೆದ್ದ ಭಾರತಿ ಸತೀಶ್ ಇದೀಗ ಆ ಪಂಚಾಯತ್ ನ ಅಧ್ಯಕ್ಷೆಯಾಗಿ ಆಯ್ಕೆಯಾಗಿ ಗಮನಸೆಳೆದಿದ್ದಾರೆ. ಮೂಲತಃ ಬಂಟ್ವಾಳದವರಾಗಿರುವ ಭಾರತಿ ಕಡುಬಡತನದಲ್ಲಿ ಬೆಳೆದು ಉತ್ತಮ ಶಿಕ್ಷಣ ಪಡೆದವರು. ಬಡವರ ಏಳಿಗೆಯ ಬಗ್ಗೆ ಶ್ರಮಿಸಬೇಕೆಂಬ ಆಸಕ್ತಿಯಿಂದ ಸಾಮಾಜಿಕ ಕಾರ್ಯಗಳಲ್ಲಿ ಮಹಿಳಾ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ವಿವಾಹದ ಬಳಿಕ ಮಂಜೇಶ್ವರದಲ್ಲೂ ಸಮಾಜಮುಖಿ ಕಾರ್ಯಗಳಲ್ಲಿ […]