ಕರ್ಣಾಟಕ ಬ್ಯಾಂಕ್ ನಿಂದ ಜಿಲ್ಲಾಡಳಿತಕ್ಕೆ ₹ 22 ಲಕ್ಷ ಮೌಲ್ಯದ ಆಂಬ್ಯುಲೆನ್ಸ್ ಹಸ್ತಾಂತರ

ಉಡುಪಿ: ಕರ್ಣಾಟಕ ಬ್ಯಾಂಕ್ ವತಿಯಿಂದ ಜಿಲ್ಲಾಡಳಿತದ ಉಪಯೋಗಕ್ಕಾಗಿ ₹ 22 ಲಕ್ಷ ಮೌಲ್ಯದ ಸುಸಜ್ಜಿತ ಆಂಬ್ಯುಲೆನ್ಸ್ ಅನ್ನು ಹಸ್ತಾಂತರ ಮಾಡಲಾಯಿತು. ಬ್ಯಾಂಕ್ ನ ಮುಖ್ಯ ಪ್ರಬಂಧಕ ಮಂಜುನಾಥ್ ಭಟ್ ಅವರು ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ, ಡಾ. ಪ್ರಶಾಂತ್ ಭಟ್, ಡಾ. ಪ್ರೇಮಾನಂದ, ಕರ್ಣಾಟಕ ಬ್ಯಾಂಕ್ ನ ಕೇಂದ್ರ ಕಚೇರಿಯ ಮುಖ್ಯ ವ್ಯವಹಾರ ಅಧಿಕಾರಿ ಗೋಕುಲ್ ದಾಸ್ ಪೈ, ಉಡುಪಿ ವಿಭಾಗದ […]

ವಾಹನ ಡಿಕ್ಕಿ ಹೊಡೆದು ಮಹಿಳೆ ಮೃತ್ಯು

ಅರಂತೋಡು: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ಇಂದು ಸಂಭವಿಸಿದೆ. ಮೃತರನ್ನು ಬಿಳಿಯಾರಿನ ರಾಘವ ಎಂಬವರ ಪತ್ನಿ ಅಮ್ಮಣ್ಣಿ(48) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಅಮ್ಮಣ್ಣಿ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವಾಹನವೊಂದು ಢಿಕ್ಕಿ ಹೊಡೆದಿದ್ದು, ಇದರಿಂದ ಅಮ್ಮಣ್ಣಿ ಗಂಭೀರವಾಗಿ ಗಾಯಗೊಂಡಿದ್ದರು. ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಎಸ್ಸೆಸ್ಸೆಲ್ಸಿ ಪರೀಕ್ಷೆ – ಫೋನ್ ಇನ್ ಕಾರ್ಯಕ್ರಮ

ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗಾಗಿ ಜನವರಿ 8 ರಂದು ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ಗಣಿತ ವಿಷಯದ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ. ಸದರಿ ಫೋನ್-ಇನ್ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಕರೆಮಾಡಿ, ತಮ್ಮ ಪ್ರಶ್ನೆಗಳನ್ನು, ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್. ನಾಗೂರ ಮೊ.ನಂ.: 94489 99353 ಮತ್ತು ಗಣಿತ ವಿಷಯದ ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ್ ಭಟ್ ಎಂ ಮೊ.ನಂ: 82776 14690, ಹರೀಶ್ […]

ನೆಲ್ಯಾಡಿ: ಉದ್ಯಮಿಯ ಪುತ್ರಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ

ನೆಲ್ಯಾಡಿ: ನೆಲ್ಯಾಡಿಯ ನವೀನ್ ಇಂಟರ್ ಲಾಕ್ ನ ಮಾಲೀಕ, ಉದ್ಯಮಿ ವಿ.ಜೆ. ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನೆಲ್ಯಾಡಿಯಲ್ಲಿ ನಡೆದಿದೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನವ್ಯ ಸದ್ಯ ಮನೆಯಲ್ಲಿದ್ದರು. ನವ್ಯಾ ನಿನ್ನೆ ರಾತ್ರಿ 10-30ಕ್ಕೆ ವೇಳೆಗೆ ತನ್ನ ರೂಮಿನಲ್ಲಿ ಮಲಗಿದ್ದಳು. ಇಂದು ಬೆಳಿಗ್ಗೆ 8 ಗಂಟೆಯಾದರೂ ಎದ್ದಿರಲಿಲ್ಲ. ಅವರ ತಾಯಿ ಕರೆದು ಪ್ರತಿಕ್ರಿಯೆ ನೀಡಿರಲಿಲ್ಲ. ಕೊನೆಗೆ ಮೊಬೈಲ್ ಗೆ ಕರೆ […]