ಡ್ರಗ್ಸ್ ದಂಧೆ: ಕನ್ನಡದ ಖ್ಯಾತ ನಟಿಯ ಬಂಧನ

ಮುಂಬಯಿ: ಡ್ರಗ್ಸ್ ದಂಧೆಯೊಂದಿಗೆ ಸಂಪರ್ಕ ಹೊಂದಿದ ಆರೋಪದಡಿ ಕನ್ನಡದ ನಟಿ ಶ್ವೇತಾ ಕುಮಾರಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ರಿಂಗ್ ಮಾಸ್ಟರ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಶ್ವೇತಾ ಕುಮಾರಿ ಮುಂಬಯಿನ ಹೋಟೆಲ್ ನಲ್ಲಿ ತಂಗಿದ್ದರು. ಡ್ರಗ್ ಪೆಡ್ಲರ್ ಜತೆ ತಂಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ 400 ಗ್ರಾಂ ಡ್ರಗ್ ಸಮೇತ ಡ್ರಗ್ ಪೆಡ್ಲರ್ ಚಾಂದ್ ಶೇಖ್ ಮತ್ತು ಶ್ವೇತಾ ಅವರನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಆರೋಪಿ ನೀಡಿದ ಮಾಹಿತಿ […]

ಜ. 8ರಂದು ಆರ್ ಬಿಐ ನಿರ್ದೇಶಕ ಸತೀಶ್ ಮರಾಠೆ ಅವರೊಂದಿಗೆ ಸಂವಾದ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಆಶ್ರಯದಲ್ಲಿ ‘ಭಾರತದಲ್ಲಿ ಪ್ರಸ್ತುತ ಆರ್ಥಿಕತೆ ಮತ್ತು ಬ್ಯಾಂಕಿಂಗ್ ಸನ್ನಿವೇಶ’ (Present Economy and Banking Scenario in India) ವಿಷಯದ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕ ಸತೀಶ್ ಮರಾಠೆ ಅವರೊಂದಿಗೆ ಸಂವಾದ ಕಾರ್ಯಕ್ರಮ ಉಡುಪಿ ಡಯಾನ ಹೋಟೆಲ್ ಸಭಾಂಗಣದಲ್ಲಿ ಜನವರಿ 8ರಂದು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ. ಈ ಸಂವಾದದಲ್ಲಿ ಸತೀಶ್ ಮರಾಠೆ ಅವರು ಕೊರೊನಾ ಮಹಾಮಾರಿಯ […]

ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ನಿರ್ದೇಶಕ ಅಭಯಸಿಂಹ ಅವರಿಗೆ ‘ಕಲಕ’ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲೆ 317-ಡಿಯ ಪ್ರತಿಷ್ಠಿತ ಕ್ಲಬ್ ಗಳಲ್ಲೊಂದಾದ ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಪ್ರತಿವರ್ಷ ಕನ್ನಡ ನಾಡು ನುಡಿಯ ಸೇವೆಗಾಗಿ ದುಡಿದ ಸಾಧಕರಿಗೆ ನೀಡುವ ‘ಕದ್ರಿ ಲಯನ್ಸ್ ಕನ್ನಡ ರತ್ನ (ಕಲಕ) ಪ್ರಶಸ್ತಿ’ಯ 2019-20ನೆಯ ಸಾಲಿಗೆ ಚಲನಚಿತ್ರ ನಿರ್ದೇಶಕ ಅಭಯಸಿಂಹ ಹಾಗೂ 2020-21ನೆಯ ಸಾಲಿಗೆ ಕವಯತ್ರಿ, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ. 2010ರಲ್ಲಿ ನಡೆದ ಸಿಂಹಗಳ ನಡುವೆ ಕನ್ನಡದ ಕಲರವ ಎಂಬ ಲಯನ್ಸ್ […]

ಜ.9ಕ್ಕೆ ‘ಹಲ್ಲಾಬೋಲ್- ಸಪ್ದರ್ ಹಾಶ್ಮಿ ನೆನಪುಗಳು’ ಸಂವಾದ ಕಾರ್ಯಕ್ರಮ

ಉಡುಪಿ: ಉಡುಪಿ ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು ಸಂಸ್ಥೆಯ ಆಶ್ರಯದಲ್ಲಿ ‘ಹಲ್ಲಾಬೋಲ್ – ಸಪ್ದರ್ ಹಾಶ್ಮಿ ನೆನಪುಗಳು’ ಸಂವಾದ ಕಾರ್ಯಕ್ರಮ ಜನವರಿ 9ರಂದು ಮಧ್ಯಾಹ್ನ 2.30ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ನಡೆಯಲಿದೆ. ರಂಗನಟಿ, ಸಾಹಿತಿ ಡಾ. ಮಾಧವಿ ಎಸ್. ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಬೈಂದೂರಿನ ಶಿಕ್ಷಕ ರಾಘವೇಂದ್ರ ಕೆ. ಸಪ್ದರ್ ನೆನಪುಗಳನ್ನು ಹಂಚಿಕೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡಕ ಅಧ್ಯಕ್ಷತೆ ವಹಿಸಲಿದ್ದಾರೆ. ಆ ಬಳಿಕ ‘ಬೀದಿ ನಾಟಕಗಳ ಪರಂಪರೆ, ಪ್ರಯೋಗ ಮತ್ತು […]

ಕೋಟ: ಹೃದಯಾಘಾತದಿಂದ ರಂಗಸ್ಥಳದಲ್ಲೇ ಯಕ್ಷಗಾನ ವೇಷಧಾರಿ ಮೃತ್ಯು

ಕೋಟ: ರಂಗಸ್ಥಳದಲ್ಲೇ ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಮೃತಪಟ್ಟ ಕಲಾವಿದ. ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭ ರಂಗದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡರು. ಅನಂತರ ತತ್‍ಕ್ಷಣ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ […]