ಮಣಿಪಾಲ: ಆಂಗ್ಲ ಭಾಷಾ ಕಲಿಕಾ ತರಬೇತಿಗೆ ಚಾಲನೆ
ಮಣಿಪಾಲ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಯುಕ್ತ ಆಶ್ರಯದಲ್ಲಿ ಭಾರತ ಸರ್ಕಾರದ ನ್ಯಾಷನಲ್ ರೂರಲ್ ಲಿವ್ಲೀಹುಡ್ ಮಿಷನ್ ಅಡಿಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಗೆ ಆಂಗ್ಲ ಭಾಷಾ ಕಲಿಕೆ ತರಬೇತಿಗೆ ಗುರುವಾರ ಚಾಲನೆ ನೀಡಲಾಯಿತು. ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್ ಮಾತನಾಡುತ್ತಾ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಯುವಜನತೆಯನ್ನು ಸಮಾಜದ ಆಸ್ತಿಯಾಗಿ ನಿರ್ಮಿಸುವಲ್ಲಿ ಬಹುದೊಡ್ಡ ಕೊಡುಗೆ […]
ಹಕ್ಕಿಜ್ವರದ ಭೀತಿ: ಬಾಯ್ಲರ್ ಕೋಳಿ ಮಾಂಸದ ಬೆಲೆಯಲ್ಲಿ ಭಾರಿ ಇಳಿಕೆ
ನವದೆಹಲಿ: ದೇಶದಾದ್ಯಂತ ಹಕ್ಕಿಜ್ವರದ ಭೀತಿ ಎದುರಾಗಿದ್ದು, ಕೇರಳ, ಹರಿಯಾಣ ಹಿಮಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಹಕ್ಕಿಜ್ವರ ಪ್ರಕರಣಗಳು ದಾಖಲಾಗಿವೆ. ನೆರೆಯ ಕೇರಳದಲ್ಲಿ ರೋಗ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಹಕ್ಕಿಜ್ವರವು ಕೋಳಿ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದ್ದು, ಕೋಳಿಗಳ ಬೆಲೆಯಲ್ಲಿ ಭಾರೀ ಕುಸಿತ ಉಂಟಾಗಿದೆ. ಇದರಿಂದ ವ್ಯಾಪಾರಸ್ಥರು ಭಾರಿ ನಷ್ಟ ಅನುಭವಿಸುವಂತಾಗಿದೆ. ಚಿಕನ್ ಅನ್ನು ಚೆನ್ನಾಗಿ ಬೇಯಿಸಿ ತಿನ್ನುವುದರಿಂದ ಯಾವುದೇ ಸೋಂಕು ಅಥವಾ ರೋಗ ಹರಡುವುದಿಲ್ಲ ಎಂದು ವೈದ್ಯರು ಹೇಳಿದರೂ, ಹಕ್ಕಿ ಜ್ವರದ ಭೀತಿಯಿಂದ […]
ಅಂಬಲಪಾಡಿ ಯಕ್ಷಗಾನ ಮಂಡಳಿಯ ನೂತನ ರಂಗಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ₹5 ಲಕ್ಷ ದೇಣಿಗೆ ಹಸ್ತಾಂತರ
ಉಡುಪಿ: 63 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ನಿರ್ಮಿಸುತ್ತಿರುವ ನೂತನ ರಂಗಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ₹ 5 ಲಕ್ಷ ದೇಣಿಗೆ ನೀಡಿ ಆಶೀರ್ವಾದಿಸಿದ್ದಾರೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಬಿ. ಗಣೇಶ್ ಅವರು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್ ಅವರಿಗೆ ದೇಣಿಗೆಯ ಡಿಡಿ.ಯನ್ನು ಬುಧವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಅಂಬಲಪಾಡಿ ಒಕ್ಕೂಟದ ಅಧ್ಯಕ್ಷ […]
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಹಾಸನ: ರೈಲಿನ ಹಳಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಳೆನರಸೀಪುರ ತಾಲ್ಲೂಕಿನ ಪೆದ್ದನಹಳ್ಳಿ ಬಳಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ಇರಿತಳಲು ಗ್ರಾಮದ ಸದಾ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ರೈಲ್ವೆ ಹಳಿ ಬಳಿ ಬೈಕ್ ನಿಲ್ಲಿಸಿ, ಬಳಿಕ ರೈಲಿಗೆ ತಲೆಕೊಟ್ಟಿದ್ದಾನೆ. ಸದಾ ಚಿಕ್ಕಮಗಳೂರಿನ ಖಾಸಗಿ ಫೈನಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದನು. ಮನೆಗೆ ಹೋಗುತ್ತೇನೆಂದು ಚಿಕ್ಕಮಗಳೂರಿನಿಂದ ಬಂದಿದ್ದನು ಎನ್ನಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಣ ವರ್ಗಾವಣೆ ಪ್ರಕರಣ: ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ಜಾರಿ
ಬೆಂಗಳೂರು: ಯುವರಾಜ್ ಸ್ವಾಮಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಸೂಚನೆ ನೀಡಿದೆ. ಯುವರಾಜ್ ಸ್ವಾಮಿ ಅಕೌಂಟ್ ನಿಂದ ₹15 ಲಕ್ಷ ಹಾಗೂ ಆತನ ಸಂಬಂಧಿಕನ ಅಕೌಂಟ್ ನಿಂದ ₹ 60 ಲಕ್ಷ ಸೇರಿ ರಾಧಿಕಾ ಅಕೌಂಟ್ ಗೆ ಬರೋಬ್ಬರಿ ₹75 ಲಕ್ಷ ಜಮೆಯಾಗಿತ್ತು. ಈ ಹಣ ವರ್ಗಾವಣೆ ಇದೀಗ ರಾಧಿಕಾಗೆ ಉರುಳಾಗುವ ಸಾಧ್ಯತೆ ಇದೆ. ಇದೇ ಪ್ರಕರಣಕ್ಕೆ […]