ಕಾರ್ಕಳ: ಜ. 10ಕ್ಕೆ ಅಯ್ಯಪ್ಪನಗರದ ವಿಶೇಷ ಶಾಲೆಯಲ್ಲಿ ‘ಚಕ್ಷುಶ’ ಕಿರುಚಿತ್ರ ಪ್ರದರ್ಶನ

ಕಾರ್ಕಳ: ಆರ್.ಕೆ. ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಮೂಡಿಬಂದಿರುವ ಯುವ ಮನಸ್ಸುಗಳ ಮನಗೆದ್ದಿರುವ ತ್ರಿಕೋನ ಪ್ರೇಮಕಥಾ ಹಂದರ ಹೊಂದಿರುವಂತಹ “ಚಕ್ಷುಶ” ಜನವರಿ 10ರಂದು ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ಪ್ರದರ್ಶನಗೊಳ್ಳಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ, 12 ಗಂಟೆಗೆ, 1 ಗಂಟೆಗೆ ಹಾಗೂ 2.30ಕ್ಕೆ ಪ್ರದರ್ಶನ ಕಾಣಲಿದೆ. ಸಿನಿಮಾ ಪ್ರದರ್ಶನದಿಂದ ಬರುವ ಹಣವನ್ನು ವಿಶೇಷ ಮಕ್ಕಳ ಶಾಲೆಗೆ ನೀಡಲಾಗುವುದು ಎಂದು ನಿರ್ದೇಶಕ ರಂಜಿತ್ ಕಾರ್ಕಳ ತಿಳಿಸಿದ್ದಾರೆ. ಚಿತ್ರಕ್ಕೆ ಸುಪ್ರೀತ್ ಬಿ.ಕೆ, ಪುನೀತ್ ರಾಜ್ ಸಾಹಿತ್ಯ ಒದಗಿಸಿದ್ದಾರೆ. ಆದಿಲ್ […]
ಟಿಆರ್ ಪಿ ಹಗರಣ: ಇಂಡಿಯಾ ಟುಡೇ ಗ್ರೂಪ್‌ನ ಹಣಕಾಸು ಅಧಿಕಾರಿಗೆ ಇಡಿಯಿಂದ ಸಮನ್ಸ್ ಜಾರಿ

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣಕ್ಕೆ ಸಂಬಂಧಿಸಿದಂತೆ ಇಂಡಿಯಾ ಟುಡೇ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ಜಾರಿ ಮಾಡಿದೆ. ಈ ವಿಚಾರವಾಗಿ ಪಿಟಿಐಗೆ ಮಾಹಿತಿ ನೀಡಿರುವ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು, ‘ಅಕ್ರಮ ಹಣ ವರ್ಗಾವಣೆಯ ಆರೋಪದ ಅಡಿಯಲ್ಲಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಸಂಸ್ಥೆಯು ಇಸಿಐಆರ್ (ಜಾರಿ ಪ್ರಕರಣ ಮಾಹಿತಿ ವರದಿ) ಅನ್ನು ದಾಖಲಿಸಿಕೊಂಡಿದೆ. ಇಸಿಐಆರ್ ಎಂಬುದು ಪೊಲೀಸ್ ಎಫ್‌ಐಆರ್‌ಗೆ ಸಮನಾಗಿರುತ್ತದೆ ಎಂದು ತಿಳಿಸಿದ್ದಾರೆ. […]
ಕಾರ್ಕಳ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ: ಲಾಂಗ್ ಮಚ್ಚುಗಳನ್ನು ಹಿಡಿದುಕೊಂಡು ಬಡಿದಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಕಾರ್ಕಳ: ಯುವ ಕಾಂಗ್ರೆಸ್ ಹುದ್ದೆಗಾಗಿ ಕಾಂಗ್ರೆಸ್ ಕಾರ್ಯಕರ್ತರು ಮಚ್ಚು ಲಾಂಗ್ ಗಳನ್ನು ಹಿಡಿದುಕೊಂಡು ಬಡಿದಾಡಿಕೊಂಡ ಘಟನೆ ಕಾರ್ಕಳ ಕಾಂಗ್ರೆಸ್ ಘಟಕದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಕಾರ್ಯಕರ್ತರ ಗಲಾಟೆ ಪ್ರಕರಣ ಪೊಲೀಸ್ ಠಾಣೆ ಮಟ್ಟಿಲೇರಿದ್ದು, ರಾಜಿ ಸಂಧಾನದ ಮೂಲಕ ಬಗೆಹರಿದಿದೆ. ಆದರೆ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಕಾರ್ಯಕರ್ತನೊಬ್ಬ ಅಸಹಾಯಕನಾಗಿದ್ದು, ಆತನ ಬೆಂಬಲಕ್ಕೆ ಯಾರು ಮುಂದಾಗಿಲ್ಲ ಎನ್ನಲಾಗಿದೆ. ಕಾರ್ಕಳದ ಬಜಗೋಳಿಯಲ್ಲಿ ಕಾರ್ಯಕರ್ತರು ಲಾಂಗ್ ನಿಂದ ಹೊಡೆದಾಡಿಕೊಂಡಿದ್ದು, ಪಕ್ಷದ ಆಂತರಿಕ ಹುದ್ದೆಗಾಗಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು ಅತ್ಯಂತ ಹೀನಾ ಕೃತ್ಯ. ರೌಡಿಗಳಂತೆ ವರ್ತಿಸುವ ಕಾಂಗ್ರೆಸ್ […]
ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡಲು ಸಂಪೂರ್ಣ ಸಿದ್ದತೆ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಕೋವಿಡ್-19 ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಈ ಕುರಿತಂತೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಶುಕ್ರವಾರ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಕೋವಿಡ್-19 ಲಸಿಕಾ ಡ್ರೈ ರನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಇದಕ್ಕಾಗಿ ಜಿಲ್ಲೆಯ 105 ಸರಕಾರಿ ಮತ್ತು 762 […]
ಹಕ್ಕಿಜ್ವರ ಭಯಬೇಡ, ಎಚ್ಚರವಿರಲಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಯಾವುದೇ ರೀತಿಯ ಪಕ್ಷಿಗಳಲ್ಲಿ ಇದುವರೆಗೆ ಹಕ್ಕಿಜ್ವರದ ಸೋಂಕು ಕಂಡು ಬಂದಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಹಕ್ಕಿಜ್ವರದ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಆದರೆ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಕ್ಕಿ ಜ್ವರದ ಕುರಿತು ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯಲ್ಲಿ ಮಾತನಾಡಿದರು. ಹಕ್ಕಿ ಜ್ವರವು ಕೇರಳ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಕಂಡುಬಂದಿದೆ ಎಂದು ವರದಿಯಾದ ಹಿನ್ನಲೆಯಲ್ಲಿ ಸಾರ್ವಜನಿಕರು […]