ಉಜಿರೆಯ ಬಾಲಕನ ಅಪಹರಣ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಬೆಳ್ತಂಗಡಿ: ಉಜಿರೆಯ ಬಾಲಕ ಅನುಭವ್ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಬೆಳ್ತಂಗಡಿ ಪೋಲೀಸರು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಚಾಮರಾಜನಗರ ನಿವಾಸಿ ನವೀನ್(28) ಬಂಧಿತ ಆರೋಪಿ. ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ ಅನುಭವ್( 8) ಅವರನ್ನು ದುಷ್ಕರ್ಮಿಗಳ ತಂಡವೊಂದು ಅಪಹರಣ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿತ್ತು. ಬೆಳ್ತಂಗಡಿ ಪೊಲೀಸರು ಎರಡು ದಿನಗಳೊಳಗೆ ಕೋಲಾರದ ಮನೆಯೊಂದರಲ್ಲಿ ಮಗುವನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ರಕ್ಷಿಸಿ, 6 ಮಂದಿ ಅಪಹರಣಕಾರರನ್ನು ಬಂಧಿಸಿದ್ದರು. ಈ […]

ಬೆಳ್ತಂಗಡಿ: ಎರಡು ಹದ್ದುಗಳ ಮೃತದೇಹ ಪತ್ತೆ; ಹಕ್ಕಿಜ್ವರದ ಭೀತಿ

ಬೆಳ್ತಂಗಡಿ: ತಾಲ್ಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಎಂಬಲ್ಲಿ ಇಂದು ಎರಡು ಹದ್ದುಗಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಕ್ಕಿಜ್ವರದ ಭೀತಿ ಹುಟ್ಟಿಸಿದೆ. ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಕೊಳೆತ ಸ್ಥಿತಿಯಲಿದ್ದ ಹದ್ದುಗಳ ಶವ ಪತ್ತೆಯಾಗಿದೆ. ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಹಕ್ಕಿಜ್ವರದ ಆತಂಕ ಸೃಷ್ಟಿಯಾಗಿರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹದ್ದುಗಳ ಮೃತದೇಹದ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವರದಿ ಬಂದ ಬಳಿಕವೇ […]

ಕಟ್ಟಿಗೆಯ ತುಂಡಿನಿಂದ ಹೊಡೆದು ಪತ್ನಿಯನ್ನು ಕೊಲೆಗೈದ ಪತಿ

ಬೆಳ್ತಂಗಡಿ: ಪತಿಯೇ ತನ್ನ ಪತ್ನಿಯ ತಲೆಗೆ ಕಟ್ಟಿಗೆಯ ತುಂಡಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ಗುರುವಾರ ರಾತ್ರಿ ನಡೆದಿದೆ. ಆರೋಪಿ ಪತಿಯನ್ನು ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ಸನ್(47)‌ ಎಂದು ಗುರುತಿಸಲಾಗಿದೆ. ಈತನ ಪತ್ನಿ ಸೌಮ್ಯಾ ಫ್ರಾನ್ಸಿಸ್(40)‌ ಕೊಲೆಯಾದ ಮಹಿಳೆ. ಪತಿ ಪ್ರತಿದಿನ ಕುಡಿದು ಬಂದು ಪತ್ನಿಯ ಜತೆಗೆ ಜಗಳವಾಡುತ್ತಿದ್ದ. ಆದರೆ ಗುರುವಾರ ಜಗಳ ವಿಕೋಪಕ್ಕೆ ತಿರುಗಿದ್ದು, ಜಾನ್ಸನ್‌ ಕುಡಿದ ಮತ್ತಿನಲ್ಲಿ ಕಟ್ಟಿಗೆಯ ತುಂಡಿನಿಂದ ಸೌಮ್ಯಳಿಗೆ ಮಾರಣಾಂತಿಕವಾಗಿ ಹಲ್ಲೆ […]

ಗೋಹತ್ಯೆ ಕಂಡುಬಂದರೆ ‘1962’ ಕರೆ ಮಾಡಿ ದೂರು ದಾಖಲಿಸಿ: ಸಚಿವ ಪ್ರಭು ಚೌವ್ಹಾಣ್

ಬೆಂಗಳೂರು: ರಾಜ್ಯದ ಯಾವುದೇ ಭಾಗದಲ್ಲಿ ಅಥವಾ ಗ್ರಾಮದಲ್ಲಿಯೇ ಆದರೂ ಗೋಹತ್ಯೆ ಕಂಡುಬಂದಲ್ಲಿ ಕೂಡಲೇ ‘1962’ ಕ್ಕೆ ಕರೆ ಮಾಡಿ ದೂರು ದಾಖಲಿಸುವಂತೆ ಸಚಿವ ಪ್ರಭು ಚೌವ್ಹಾಣ್ ಮನವಿ ಮಾಡಿಕೊಂಡಿದ್ದಾರೆ. ಈ ಕಾಯ್ದೆಗೆ ಸಂಬಂಧಪಟ್ಟ ನಿಯಮಗಳನ್ನು ರಚಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚಿಸ ಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದರು. ಗೋವುಗಳ ರಕ್ಷಣೆಗಾಗಿ ಈಗಾಗಲೇ ಪಶು ಸಂಜೀವಿನ ಸಹಾಯವಾಣಿ (1962) ಇದ್ದು, ರಾಜ್ಯದಲ್ಲಿ ಗೋಹತ್ಯೆ ಕಂಡು ಬಂದ […]

ಆಕೃತಿ ಪ್ರಿಂಟರ್ಸ್ ಗೆ ಪುಸ್ತಕ ಸೊಗಸು ಬಹುಮಾನ

ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು,  ಇದರ ವತಿಯಿಂದ ನೀಡಲಾಗುವ ಕನ್ನಡ ಪುಸ್ತಕ ಸೊಗಸು ಪ್ರಶಸ್ತಿಗೆ ಮಂಗಳೂರಿನ ಖ್ಯಾತ ಮುದ್ರಣ ಸಂಸ್ಥೆ ಆಕೃತಿ ಆಶಯ ಮುದ್ರಣದ ಕಲ್ಲೂರು ನಾಗೇಶ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ  ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚಿ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್ ರಂಗಪ್ಪ, ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ರಶ್ಮಿ ವಿ ರಮೇಶ್ ,ಖ್ಯಾತ ವಿಮರ್ಶಕ ಡಾ| ನರಹಳ್ಳಿ ಬಾಲಸುಬ್ರಮಣ್ಯ […]