ಉಡುಪಿ: ಜ. 12ಕ್ಕೆ ಜಿಲ್ಲಾಮಟ್ಟದ ಬಿಜೆಪಿ ಜನಸೇವಕ ಸಮಾವೇಶ
ಉಡುಪಿ: ಮುಂಬರುವ ಜಿಪಂ, ತಾಪಂ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ‘ಜನ ಸೇವಕ ಸಮಾವೇಶ’ ಜನವರಿ 12ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಪುತ್ತೂರು-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಬಗ್ಗೆ ಶನಿವಾರ ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ […]
ಇಂಡೋನೇಷ್ಯಾದ ಡೊಮೆಸ್ಟಿಕ್ ವಿಮಾನ ನಾಪತ್ತೆ
ನವದೆಹಲಿ: ಇಂಡೋನೇಷ್ಯಾದ ಶ್ರೀವಿಜಯ ಏರ್ ಎಸ್ ಜಿ 182 ಎಂಬ ಡೊಮೆಸ್ಟಿಕ್ ವಿಮಾನ ನಾಪತ್ತೆಯಾಗಿದೆ. ಜಕಾರ್ತದಿಂದ ಹೊರಟಿದ್ದ ವಿಮಾನವು ಟೇಕ್ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನ ಸಂಪರ್ಕ ಕಳೆದುಕೊಂಡಿದೆ. ಈ ವಿಮಾನದಲ್ಲಿ ಆರು ಮಕ್ಕಳು ಸಹಿತ 59 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವಿಮಾನ ಶನಿವಾರ ಸೂಕರ್ನೊ-ಹಟ್ಟಾ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆಗಿತ್ತು. ಈ ವಿಮಾನ ಸಂಪರ್ಕ ಕಳೆದುಕೊಂಡು ಸಮುದ್ರಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ವಿಮಾನಕ್ಕಾಗಿ ರಕ್ಷಣಾಪಡೆ ಹುಡುಕಾಟ ಆರಂಭಿಸಿದೆ. ಜಕಾರ್ತದಿಂದ ಹೊರಟ ವಿಮಾನ ನಾಲ್ಕು ನಿಮಿಷಗಳಲ್ಲಿ […]
ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ಸುಬ್ರಾಯ ಭಟ್ ಗುಂಡಿಬೈಲ್ ನಿಧನ
ಉಡುಪಿ: ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ಸುಬ್ರಾಯ ಭಟ್ ಗುಂಡಿಬೈಲ್ (71) ಶುಕ್ರವಾರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಗುಂಡುಬಾಳ, ಇಡಗುಂಜಿ, ಕೊಳಗಿಬೀಸ್, ಅಮೃತೇಶ್ವರೀ, ಸಾಲಿಗ್ರಾಮ, ಬಚ್ಚಗಾರು ಮತ್ತು ಶಿರಸಿ ಮೇಳಗಳಲ್ಲಿ ಐದು ದಶಕಗಳ ಕಾಲ ಕಲಾಸೇವೆಗೈದಿದ್ದರು. ಬಬ್ರುವಾಹನ, ಅತಿಕಾಯ, ಇಂದ್ರಜಿತು, ಸುಗ್ರೀವ ಹೀಗೆ ಅನೇಕ ಪೌರಾಣಿಕ ಪಾತ್ರಗಳನ್ನು ರಂಗದಲ್ಲಿ ಮೆರೆಸಿದ್ದರು. ಯಕ್ಷಗಾನ ಗುರುಗಳಾಗಿ, ಪ್ರಸಂಗ ಕರ್ತರಾಗಿ, ಅರ್ಥಧಾರಿಯಾಗಿಯೂ ಈ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಉಡುಪಿಯ ಯಕ್ಷಗಾನ ಕಲಾರಂಗ 2016ರಲ್ಲಿ ಶಿರಿಯಾರ ಮಂಜುನಾಥ […]
ಪಕ್ಷವನ್ನು ಗ್ರಾಮಮಟ್ಟದಲ್ಲಿ ಸದೃಢಗೊಳಿಸಲು ‘ಜನಸೇವಕ್ ಸಮಾವೇಶ’: ಕುಯಿಲಾಡಿ
ಉಡುಪಿ: ರಾಜ್ಯದಲ್ಲಿ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗ ಅಭ್ಯರ್ಥಿಗಳು ಅಭೂತಪೂರ್ವ ಜಯಗಳಿಸಿದ ಹಿನ್ನೆಲೆಯಲ್ಲಿ ಪಕ್ಷವನ್ನು ಗ್ರಾಮ ಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬಿಜೆಪಿಯು ಪ್ರತಿ ಜಿಲ್ಲೆಯಲ್ಲಿಯೂ ‘ಗ್ರಾಮಸೇವಕ್ ಸಮಾವೇಶ’ವನ್ನು ಆಯೋಜಿಸುತ್ತಿದೆ. ಈ ಮೂಲಕ ಪಕ್ಷದಲ್ಲಿ ಜವಾಬ್ದಾರಿ ಹೊತ್ತಿರುವ ಎಲ್ಲಾ ಕಾರ್ಯಕರ್ತರನ್ನು ಸಕ್ರಿಯ ಗೊಳಿಸುವಲ್ಲಿ ಪ್ರಯತ್ನಗಳಾಗುತ್ತಿವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಉಡುಪಿ ನಗರ ಇದರ ಆಶ್ರಯದಲ್ಲಿ ನಗರ ಬಿಜೆಪಿ ಕಚೇರಿಯಲ್ಲಿ ನಡೆದ ಜನವರಿ 12ರಂದು ನಡೆಯುವ […]
ಮಂಗಳೂರು: ಬೈಕಂಪಾಡಿ ಕೈಗಾರಿಕಾ ಘಟಕದಲ್ಲಿ ಅಗ್ನಿ ದುರಂತ; ಅಪಾರ ನಷ್ಟ
ಮಂಗಳೂರು: ಇಲ್ಲಿನ ಬೈಕಂಪಾಡಿ ಕೈಗಾರಿಕಾ ವಲಯದ ಲೆಮಿನಾ ಬಿಡಿ ಉಪಕರಣಗಳ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಇದರಿಂದ ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಕಾರ್ಖಾನೆಯಲ್ಲಿದ್ದ ಆಯಿಲ್ ಟ್ಯಾಂಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದು ಇಡೀ ಕಾರ್ಖಾನೆಯನ್ನು ವ್ಯಾಪಿಸಿದೆ. ಇದರ ಪರಿಣಾಮ ಅಪಾರ ಪ್ರಮಾಣ ಉಪಕರಣಗಳಿಗೆ ಹಾನಿ ಉಂಟಾಗಿದೆ. ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಎಂಸಿಎಫ್ ಹಾಗೂ ಎಂಆರ್‌ಪಿಎಲ್‌ನ ಸಿಬ್ಬಂದಿ ತೆರಳಿ ಎರಡು ತಾಸಿನ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ಹತೋಟಿಗೆ ತರುವಲ್ಲಿ […]