ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳ ಸಜೀವದಹನ
ಮುಂಬೈ: ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ 10 ಮಕ್ಕಳು ಮೃತಪಟ್ಟ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಮುಂಜಾನೆ 2 ಗಂಟೆ ಸುಮಾರಿಗೆ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಇಡೀ ವಾರ್ಡ್ ಅನ್ನು ವ್ಯಾಪಿಸಿದೆ. ಇದರಿಂದ 10 ಮಕ್ಕಳು ಮೃತಪಟ್ಟಿದ್ದು, 7 ಮಕ್ಕಳನ್ನು ರಕ್ಷಿಸಲಾಗಿದೆ. ಮೃತಪಟ್ಟ ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಮಂಗಳೂರು: ವಿವಾದಿತ ಮಾಂಸದ ಅಂಗಡಿಗಳಿಗೆ ಬೆಂಕಿ
ಮಂಗಳೂರು: ಮಾಂಸದ ಅಂಗಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಒಳಪೇಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿವೆ. ಸ್ಥಳಕ್ಕೆ ಉಳ್ಳಾಲ ನಗರಸಭೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಾತ್ಕಾಲಿಕ ಅಂಗಡಿ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ. ಈ ಸ್ಟಾಲ್ ಗಳಲ್ಲಿ ಅಕ್ರಮ ಬೀಫ್ ಮಾರುತ್ತಿದ್ದಾರೆ. ಇವುಗಳನ್ನು ತೆರವು ಮಾಡಬೇಕೆಂದು ಆಗ್ರಹಿಸಿಉಳ್ಳಾಲದ ಬಜರಂಗದಳ- ವಿಹಿಂಪ ಕಾರ್ಯಕರ್ತರು ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದರು. […]
ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕಿನ ನವೀಕೃತ ಉಚ್ಚಿಲ ಶಾಖೆ, ನೂತನ ಎಟಿಎಂ ಉದ್ಘಾಟನಾ ಸಮಾರಂಭ ಇಂದು
ಉಡುಪಿ: ಕಳೆದ 43 ವರ್ಷಗಳಿಂದ ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಜನಸ್ನೇಹಿ ಸಹಕಾರಿ ಸಂಸ್ಥೆಯಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೂಪುಗೊಂಡಿರುವ ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕಿನ ನವೀಕೃತ ಉಚ್ಚಿಲ ಶಾಖೆ ಹಾಗೂ ನೂತನ ಎಟಿಎಂ ಉದ್ಘಾಟನಾ ಸಮಾರಂಭ ಇಂದು (ಜ.9) ಮಧ್ಯಾಹ್ನ 3ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಇದರ ಪ್ರವರ್ತಕ ಡಾ. ಜಿ. ಶಂಕರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕ ಸತೀಶ್ […]