ಮಣಿಪಾಲ: ಜ. 12ರಿಂದ ‘ಕೆನರಾ ಉತ್ಸವ’; ಆಕರ್ಷಕ ದರದಲ್ಲಿ ಗೃಹ ಉತ್ಪನ್ನಗಳ ಮಾರಾಟ ಮೇಳ

ಮಣಿಪಾಲ: ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ವತಿಯಿಂದ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ‘ಕೆನರಾ ಉತ್ಸವ’ ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಆವರಣದಲ್ಲಿ (ಈ ಹಿಂದಿನ ಸಿಂಡಿಕೇಟ್ ಬ್ಯಾಂಕ್ ಪ್ರಧಾನ ಕಚೇರಿ) ಜನವರಿ 12 ಮತ್ತು 13ರಂದು ನಡೆಯಲಿದೆ. ಈ ಮೇಳದಲ್ಲಿ ಜಿಲ್ಲೆಯ 25ಕ್ಕೂ ಹೆಚ್ಚಿನ ಮಹಿಳಾ ತಂಡದ ಉದ್ಯಮಿಗಳು ಪಾಲ್ಗೊಳ್ಳಲಿದ್ದು, ಅವರು ತಯಾರಿಸಿದ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕೆ ಬ್ಯಾಂಕ್ ವತಿಯಿಂದ ಮಳಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳೆಯರು […]

ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳು ಉಚಿತ ಇಂಟರ್ ನೆಟ್

ಚೆನ್ನೈ: ಏಪ್ರಿಲ್ ನಲ್ಲಿ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಗೆ ಅನುಕೂಲವಾಗುವ ಸಲುವಾಗಿ ತಮಿಳುನಾಡು ಸರ್ಕಾರ ಉಚಿತ ಇಂಟರ್ ನೆಟ್ ಸೌಲಭ್ಯ ಘೋಷಿಸಿದೆ. ಈ ಯೋಜನೆಯಂತೆ ಪ್ರತಿದಿನ ವಿದ್ಯಾರ್ಥಿಗಳಿಗೆ ಉಚಿತವಾಗಿ 2ಜಿಬಿ ಡಾಟಾ ಲಭ್ಯವಾಗಲಿದೆ. ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳ ಕಾಲ ಉಚಿತ ಇಂಟರ್ ನೆಟ್ ಸೇವೆ ದೊರೆಯಲಿದೆ.    

ಕಾರ್ಕಳ: ಜ. 14ಕ್ಕೆ ಸ್ವಾಮಿ ವಿವೇಕಾನಂದ ಜಯಂತಿ

ಕಾರ್ಕಳ: ಬಿಜೆಪಿ ಯುವಮೋರ್ಚಾ ಕಾರ್ಕಳ ಇದರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಕಾರ್ಕಳ ಶ್ರೀ ಮಂಜುನಾಥ ಪೈ ಸಭಾಂಗಣದಲ್ಲಿ ಜನವರಿ 14ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಬಿಜೆಪಿ ಕಾರ್ಕಳ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಿಜೆಪಿ ಕಾರ್ಕಳ ಯುವಮೋರ್ಚಾದ ಅಧ್ಯಕ್ಷ […]

ಪಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ನೀಡಲಿರುವ ಹಿನ್ನೆಲೆಯಲ್ಲಿ ಜನವರಿ 17ರಂದು ನಿಗದಿಯಾಗಿದ್ದ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರವು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದೆ. ಕೊರೊನಾ ಲಸಿಕೆ ನೀಡಲಿರುವ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳು ಮನವಿ ಮಾಡಿದ್ದವು. ಹೀಗಾಗಿ ಕೇಂದ್ರ ಸರ್ಕಾರ ಪಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದೆ. ಈ ಬಗ್ಗೆ ಕೇಂದ್ರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದೆ.