ಸಿದ್ದರಾಮಯ್ಯ ಟೀಕೆ ಮಾಡುವ ಬದಲು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲಿ: ಈಶ್ವರಪ್ಪ ಟಾಂಗ್

ಉಡುಪಿ: ಸಿದ್ದರಾಮಯ್ಯನವರು ಮೊದಲು ತಮ್ಮ ವಿಪಕ್ಷ ನಾಯಕ ಸ್ಥಾನ ಭದ್ರಪಡಿಸಿಕೊಳ್ಳಲಿ. ಆ ಬಳಿಕ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಉಡುಪಿಯ ಮಣಿಪಾಲ್ ಇನ್ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಿಎಂ ಬದಲಾಗುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. ಡಿ.ಕೆ. ಶಿವಕುಮಾರ್ ವಿಪಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯನವರ ಸ್ಥಾನ ಯಾವಾಗ ಬೇಕಾದ್ರೂ ಹೋಗಬಹುದು. ಹಾಗಾಗಿ […]
₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೇಡಿ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ ಸ್ಟೆಬಲ್

ಬೆಂಗಳೂರು: ಪ್ರಕರಣವೊಂದರಲ್ಲಿ ಎಫ್ಐಆರ್ ದಾಖಲಿಸುವ ವಿಚಾರಕ್ಕೆ ಸಂಬಂಧಿಸಿ ದೂರುದಾರರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೇಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಹೆಡ್ ಕಾನ್ ಸ್ಟೆಬಲ್ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸೌಮ್ಯಾ ಮತ್ತು ಹೆಡ್ ಕಾನ್ ಸ್ಟೆಬಲ್ ಜೆ.ಪಿ. ರೆಡ್ಡಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಠಾಣೆಯಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ […]
ಹೊಸ ನಿಯಮದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ತೆರೆಎಳೆದ ವಾಟ್ಸಾಪ್

ನವದೆಹಲಿ: ವಾಟ್ಸಾಪ್ ಕಂಪೆನಿ ತನ್ನ ಹೊಸ ನಿಯಮಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದೆ. ನಿಮ್ಮ ಯಾವುದೇ ಖಾಸಗಿ ಮಾಹಿತಿಗಳನ್ನು ನಾವು ಫೇಸ್ಬುಕ್ ಜೊತೆ ಹಂಚಿಕೊಳ್ಳುವುದಿಲ್ಲ. ನೀವು ಕಳಿಸಿರುವ ಖಾಸಗಿ ಮೆಸೇಜ್ ಗಳನ್ನು ವೀಕ್ಷಿಸಲು ಯಾರಿಗೂ ಸಾಧ್ಯವಿಲ್ಲ ಎಂದು ವಾಟ್ಸಾಪ್ ಇಂದು ಬೆಳಿಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಸ್ಪಷ್ಟೀಕರಣ ನೀಡಿದೆ. ಕಂಪೆಯು ಈ ಮೊದಲು ತನ್ನ ನೂತನ ಗೌಪ್ಯತಾ ನಿಯಮಗಳನ್ನು ಬಳಕೆದಾರರು ಒಪ್ಪದಿದ್ದಲ್ಲಿ ಫೆಬ್ರವರಿಯಿಂದ ಅವರ ಖಾತೆಗಳನ್ನು ಬ್ಲಾಕ್ ಮಾಡಲಾಗುತ್ತದೆ ಎಂದು ಹೇಳಿತ್ತು. […]
ಕೇಂದ್ರ ಸರ್ಕಾರಕ್ಕೆ ಹಿನ್ನಡೆ: ಮೂರು ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ನಿಂದ ತಡೆ

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಸಮಸ್ಯೆಯ ಬಗೆಹರಿಸಲು ಸಮಿತಿಯೊಂದನ್ನು ರಚಿಸಿ ಮಂಗಳವಾರ ಆದೇಶ ನೀಡಿದೆ. ಈ ಮೂಲಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ 48 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಕೃಷಿ ಮಸೂದೆ ಕುರಿತು ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ಕುರಿತು ವಿಚಾರಣೆ ನಡೆಸಿರುವ ಕೋರ್ಟ್, ಯಾವುದೇ ಶಕ್ತಿಗೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಈಗಿರುವ ಸಮಸ್ಯೆಯನ್ನು ನಾವು ಇತ್ಯರ್ಥಪಡಿಸಲೇಬೇಕಾಗಿದೆ. ಅದ್ದರಿಂದ ನಾವು ಸಮಿತಿಯೊಂದನ್ನು […]
ನಕಲಿ ಮದ್ಯ ಸೇವನೆ: 10 ಮಂದಿ ಸಾವು, ಹಲವು ಮಂದಿ ಅಸ್ವಸ್ಥ

ಭೋಪಾಲ್: ನಕಲಿ ಮದ್ಯ ಸೇವಿಸಿ 10 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚುಮಂದಿ ಅಸ್ವಸ್ಥರಾದ ಘಟನೆ ಮಧ್ಯಪ್ರದೇಶದ ಮೊರೋನಾ ಜಿಲ್ಲೆಯ ಮಾನ್ಪುರಿ ಪೃಥ್ವಿ ಮತ್ತು ಪಹಾವಾಲಿ ಗ್ರಾಮಗಳಲ್ಲಿ ಸೋಮವಾರ ಸಂಭವಿಸಿದೆ. ಮನ್ಪುರಿ ಪೃಥ್ವಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಕಲಿ ಮದ್ಯ ಸೇವನೆ ಮಾಡಿದ್ದ ಹಲವರು ಇದ್ದಿಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, 10 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 10 ಮಂದಿಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೂವರನ್ನು ಬಂಟಿ, ಜಿತೇಂದ್ರ […]