ಹೆಬ್ರಿ: ಕೂಲಿಕಾರ್ಮಿಕನ ಮೇಲೆ ಕರಡಿ ದಾಳಿ
ಕಾರ್ಕಳ: ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿದ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಮತ್ತಾವು ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮತ್ತಾವು ರಾಮಕೃಷ್ಣ ಗೌಡ (39) ಎಂಬವರು ಕರಡಿ ದಾಳಿಗೊಳಗಾದ ವ್ಯಕ್ತಿ. ಕರಡಿ ದಾಳಿಯಿಂದ ರಾಮಕೃಷ್ಣರ ಕಾಲು, ಪಾದಕ್ಕೆ ಗಂಭೀರ ಗಾಯವಾಗಿದೆ. ಅವರನ್ನು ಕೂಡಲೇ ಹೆಬ್ರಿ ರಾಘವೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡೆಕಾರು ಗ್ರಾಪಂ ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್ ಸೇರ್ಪಡೆ
ಉಡುಪಿ: ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆಗುಡ್ಡೆ-ಕುತ್ಪಾಡಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವೀಣಾ ಪ್ರಕಾಶ್ ಹಾಗೂ ಅವರ ಪತಿ ಪ್ರಕಾಶ್ ಬಂಗೇರ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್‌ನ ತತ್ವ ಸಿದ್ದಾಂತ ಹಾಗೂ ನಾಯಕತ್ವವನ್ನು ಒಪ್ಪಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ದಿವಾಕರ್ ಎ. ಕುಂದರ್ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್ […]
ಬಸ್ ನಲ್ಲಿ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಜಾಲತಾಣದಲ್ಲಿ ಫೋಟೋ ಹಾಕಿ ತಕ್ಕಶಾಸ್ತಿ ಮಾಡಿದ ಯುವತಿ
ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕನೊಬ್ಬ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಯುವತಿಯೊಬ್ಬಳು ತನ್ನ ಇನ್‌ಸ್ಟಾಗ್ರಾಂನಲ್ಲಿ ಆತನ ಪೋಟೊ ಸಹಿತ ಪೋಸ್ಟ್ ಹಾಕಿ ತಕ್ಕಶಾಸ್ತಿ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಯುವತಿಯು ಜ. 14 ರಂದು ಮಂಗಳೂರಿನ ಕೆ.ಎಸ್.ಹೆಗ್ಡೆಯಿಂದ ಖಾಸಗಿ ಬಸ್‌ನಲ್ಲಿ ಪಂಪ್‌ವೆಲ್‌ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲಿನ ಚಿತ್ರದಲ್ಲಿರುವ ವ್ಯಕ್ತಿ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ನಿಲ್ದಾಣದಿಂದ ಬಸ್‌ಗೆ ಹತ್ತಿಕೊಂಡು ಯುವತಿಯ ಪಕ್ಕದಲ್ಲಿ ಬಂದು ಕುಳಿತುಕೊಂಡಿದ್ದಾನೆ. ಬಳಿಕ ಫೋನ್‌ನಲ್ಲಿ ಮಾತನಾಡುವ ಹಾಗೆ ನಟಿಸಿ […]
ಬೆಳ್ಮಣ್: ಜ.17ಕ್ಕೆ ಬೃಹತ್ ರಕ್ತದಾನ ಶಿಬಿರ
ಬೆಳ್ಮಣ್: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಲಯನ್ಸ್ ಕ್ಲಬ್ ಬೆಳ್ಮಣ್, ಲಯನ್ಸ್ ಕ್ಲಬ್ ಬೆಳ್ಮಣ್ ಸೆಂಚುರಿ, ರಾಜಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ., ಬೆಳ್ಮಣ್ ಮತ್ತು ಇತರ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೆಗಾ ರಕ್ತದಾನ ಶಿಬಿರವನ್ನು ಬೆಳ್ಮಣ್ ನ ಬಸ್ ನಿಲ್ದಾಣದ ಬಳಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಜನವರಿ 17ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದೆ. ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಕಸ್ತೂರ್ಬಾ ಆಸ್ಪತ್ರೆಯ ರಕ್ತ ನಿಧಿಯಲ್ಲಿ ರಕ್ತದ ತೀವ್ರ […]
ಉಡುಪಿ: ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ
ಉಡುಪಿ: ಇಲ್ಲಿನ 76 ಬಡಗಬೆಟ್ಟು ಪರಿಸರದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (52 ) ಎಂದು ಗುರುತಿಸಲಾಗಿದೆ. ಹಳೆ ಮನೆಯೊಂದರ ಜಂತಿಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯು ನಾಲ್ಕು ದಿನಗಳ ಹಿಂದೆ ಮೃತಪಟ್ಟಿದ್ದು, ಮೃತದೇಹ ಕೊಳತೆ ಸ್ಥಿತಿಯಲ್ಲಿ ಕಂಡುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.