ಬೈಂದೂರು: ಕೊಡೇರಿಯ ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಡುಮನೆ ಕೊಡೇರಿ ನಿವಾಸಿ ಸುಮತಿ (20) ಎಂಬ ಯುವತಿಯು ಜನವರಿ 8 ರಿಂದ ಕಾಣೆಯಾಗಿದ್ದಾರೆ. ಚಹರೆ: 5 ಅಡಿ 1 ಇಂಚು ಎತ್ತರವಿದ್ದು, ಕಪ್ಪು ಮೈ ಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂರವಾಣಿ ಸಂಖ್ಯೆ: 2561966 ಅನ್ನು ಸಂಪರ್ಕಿಸುವAತೆ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ […]

ಕಾರ್ಕಳದ ‘ಕಾರ್ಲ ಕಜೆ’ ಭತ್ತ ತಳಿಯನ್ನು ಸಂಶೋಧನೆಗೆ ಒಳಪಡಿಸಲಾಗುವುದು: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಾರ್ಕಳ: ಕಾರ್ಕಳ ತಾಲ್ಲೂಕಿನಲ್ಲಿ ಹೆಚ್ಚಾಗಿ ಬೆಳೆಯುವ ‘ಕಾರ್ಲ ಕಜೆ’ ಭತ್ತವನ್ನು ಸಂಶೋಧನೆಗೊಳಪಡಿಸಿ ಅದರಲ್ಲಿರುವ ಖನಿಜಾಂಶವನ್ನು ಪತ್ತೆಹಚ್ಚಿ, ಭತ್ತದ ವೈಶಿಷ್ಟತೆಯ ಆಧಾರದ ಮೇಲೆ ಮಾನ್ಯತೆ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿವಿ ಕುಲಪತಿಗೆ ಸೂಚನೆ ನೀಡಿದರು. ಸೋಮವಾರ ಕಾರ್ಕಳದಲ್ಲಿ ‘ಕಾರ್ಲ ಕಜೆ’ ಕುಚ್ಚಲಕ್ಕಿ ಬ್ರಾಂಡ್‌ ಬಿಡುಗಡೆ ಮಾಡಿ ಮಾತನಾಡಿದರು. ಕಾರ್ಲ ಕಜೆ ಭತ್ತದ ತಳಿಯನ್ನು ಸರ್ಕಾರದ ಎಂಎಸ್‌ಪಿ ಯೋಜನೆಯಡಿ ಸೇರ್ಪಡೆಗೊಳಿಸಬೇಕು ಎಂದು ಹೇಳಿದರು. ರೈತರು ಇಸ್ರೇಲ್ ತಂತ್ರಜ್ಞಾನವನ್ನು ಬದಲಾಗಿ ಸ್ವದೇಶಿಯ ಕೋಲಾರ […]

ಉದ್ಧವ್ ಠಾಕ್ರೆ ಹೇಳಿಕೆ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ: ಸಿಎಂ ಯಡಿಯೂರಪ್ಪ

ಉಡುಪಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಇದಕ್ಕೆ ಯಾರು ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಲುವು. ಮಹಾಜನ್ ವರದಿ ಅಂತಿಮ ಅಂಥಾ ಗೊತ್ತಿದ್ದರೂ ಸಹ ಇಂತಹ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ […]

ಅಕ್ರಮ ಆಸ್ತಿ ಗಳಿಕೆ ಆರೋಪ: ಕೆಎಎಸ್ ಅಧಿಕಾರಿ ಡಾ. ಬಿ.ಸುಧಾ ಅಮಾನತು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ. ಬಿ.ಸುಧಾ (ಕೆ.ಎ.ಎಸ್) ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಭೂ ಒತ್ತುವರಿ ಅಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರು ಭ್ರಷ್ಟಾಚಾರ, ಅವ್ಯಹಾರಗಳಲ್ಲಿ ಭಾಗಿಯಾದ ಸಂಬಂಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು. ಅದರಂತೆ 2020ರ ನವೆಂಬರ್ 7ರಂದು ಬೆಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಸಹಿತ ಒಟ್ಟು 7 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ […]

ಉಡುಪಿ: ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ

ಉಡುಪಿ: ಇತಿಹಾಸ ಪ್ರಸಿದ್ಧ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸೋಮವಾರ ಅದ್ಧೂರಿಯಾಗಿ ನೆರವೇರಿತು. ಪಾಡಿಗಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಹತ್ತಾರು ವೈದಿಕರ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ದೇಗುಲದಲ್ಲಿ ಬೆಳಿಗ್ಗೆಯಿಂದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಶ್ರೀದೇವರಿಗೆ ವಿವಿಧ ಪೂಜಾಕೈಂಕರ್ಯಗಳನ್ನು ನಡೆಸಲಾಯಿತು‌. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಬಾರಿ ಸುಮಾರು ₹ 90 ಲಕ್ಷ ವೆಚ್ಚದಲ್ಲಿ ಪರಿವಾರ ದೇವರುಗಳಾದ ಶ್ರೀಗಣಪತಿ, ಶ್ರೀಉಮಾಮಹೇಶ್ವರ, ಆಂಜನೇಯ ಗುಡಿಗಳು ಹಾಗೂ ಪರಿವಾರ ದೈವಗಳಾದ ರಕ್ತೇಶ್ವರಿ, ನಂದಿಗೋಣ ಬೊಬ್ಬರ್ಯ, ಪಂಜುರ್ಲಿ, ಬೈಕಾಡ್ತಿ […]