ಕಾರ್ಕಳ: ಎ.ಕೆ. ಸೋಮಯಾಜಿಗೆ ಪಿಎಚ್.ಡಿ. ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಯಾಂತ್ರಿಕ ವಿಭಾಗದ ಸಹ ಪ್ರಾಧ್ಯಾಪಕ ಅನಂತಕೃಷ್ಣ ಸೋಮಯಾಜಿ ಅವರು ಹೊನ್ನು (ಅಲ್ಯುಮಿನಿಯಂ) ನಾರುಗಳಿಂದ ಬಲಪಡಿಸಲ್ಪಟ್ಟ ಲೋಹ ಗರ್ಭಿಕೃತ ಸಮ್ಮಿಶ್ರ ವಸ್ತುವಿನ ಪ್ರಾಯೋಗಿಕ ಮತ್ತು ಪರಿಮಿತ ಅಂಶಗಳ ಅಧ್ಯಯನ ಎಂಬ ವಿಷಯದ ಕುರಿತು ಮಂಡಿಸಿದ ಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಯಾಂತ್ರಿಕ ವಿಭಾಗದ ಪ್ರಾಧ್ಯಾಪಕ ಡಾ. ನರಸಿಂಹ ಮರಕಾಲ ಅವರ ಮಾರ್ಗದರ್ಶನದಲ್ಲಿ ಸೋಮಯಾಜಿ […]

ಕರಂಬಳ್ಳಿ ದೇಗುಲದ ತಂತ್ರಿ ಪಾಡಿಗಾರು ವಾಸುದೇವ ತಂತ್ರಿ ಮತ್ತು ಪಾಕತಜ್ಞ ಗುರುರಾಜ ಭಟ್ಟರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ

ಉಡುಪಿ: ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧರ್ಮಸಭೆಯಲ್ಲಿ ದೇವಳದ ತಂತ್ರಿಗಳಾದ ಪಾಡಿಗಾರು ವಾಸುದೇವ ತಂತ್ರಿ ಮತ್ತು ಪಾಕತಜ್ಞ ಗುರುರಾಜ ಭಟ್ಟರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸನ್ಮಾನಿಸಿದರು. ಪಲಿಮಾರು ಶ್ರೀ ವಿದ್ಯಾಧೀಶತೀರ್ಥರು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು, ಸ್ಪೀಕರ್ ವಿಶ್ವೇಶ್ವರ ಹೆಗೆಡೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ ರಘುಪತಿ ಭಟ್, ಮಾಜಿ ಶಾಸಕ ಎಚ್.ಎನ್ ಜೀವರಾಜ್ ಉಪಸ್ಥಿತರಿದ್ದರು.

ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪಶುಸಂಗೋಪನೆ ಸಚಿವರ ಭೇಟಿ

ಉಡುಪಿ: ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಂಗಳವಾರ ಪಶುಸಂಗೋಪನೆ ಸಚಿವ ಪ್ರಭು ಚೌಹಾ ಭೇಟಿ ನೀಡಿ ದೇವರ ದರ್ಶನ ಪಡೆದರು.‌ ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ಅವರು ಸಚಿವರನ್ನು ಬರಮಾಡಿಕೊಂಡರು. ಪಾಡಿಗಾರು ವಾಸುದೇವ ತಂತ್ರಿ ಅರ್ಚಕ ಗೋವಿಂದ ಐತಾಳ್ ದೇವರ ಪ್ರಸಾದ ನೀಡಿ ಗೌರವಿಸಿದರು. ಅರ್ಚಕ ವರ್ಗದವರು ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಕಾರ್ಕಳ ಕಾಂಗ್ರೆಸ್ ನಲ್ಲಿ ಭುಗಿಲೆಂದ ಅಸಮಾಧಾನ: ಮಾಜಿ ಸಚಿವರ ಎದುರಿನಲ್ಲೇ ಆಕ್ರೋಶ ಹೊರಹಾಕಿದ ಕಾರ್ಯಕರ್ತರು

ಕಾರ್ಕಳ: ತಾಲ್ಲೂಕಿನಲ್ಲಿ ಪಕ್ಷವನ್ನು ಸಮರ್ಥವಾಗಿ‌ ಮುನ್ನಡೆಸುವ ನಾಯಕರಿಲ್ಲದೆ ಸೊರಗುತ್ತಿರುವ ಕಾರ್ಕಳ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾ ಕಾಂಗ್ರೆಸ್ ನಾಯಕರ ವಿರುದ್ಧವೇ ಸ್ಥಳೀಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಹೌದು, ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ಇಂದು ಆಯೋಜಿಸಿದ್ದ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ‌ ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ನಾಯಕತ್ವದ ವಿರುದ್ಧ ಕೆಲಸ ನಾಯಕರು ಆಕ್ರೋಶ ಹೊರಹಾಕಿದರು. ಕಾರ್ಯಕ್ರಮದ ಮಧ್ಯೆ ಮಾತನಾಡಿದ ಮಿಯ್ಯಾರು ಗ್ರಾಪಂ ಸದಸ್ಯ ಡೇನಿಯಲ್‌ ರೇಂಜರ್‌ ಅವರು, […]

ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ: ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಿಎಂಗೆ ಮನವಿ

ಉಡುಪಿ: ರಾಜ್ಯದಾದ್ಯಂತ ಇರುವ ಬಿಲ್ಲವ, ಈಡಿಗ, ನಾಮಧಾರಿ ಇನ್ನಿತರ ಉಪಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ನೀಡಲು ಈ ಬಾರಿಯ ಬಜೆಟ್ ನಲ್ಲಿ ₹50 ಕೋಟಿ ಮೀಸಲಿಡುವಂತೆ ಕೋರಿ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿತು. ಸಚಿವರು ಹಾಗೂ ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಾರಿಯ ಬಜೆಟ್‌ನಲ್ಲಿ ರಾಜ್ಯದಾದ್ಯಂತ ಇರುವ ಬಿಲ್ಲವ ಈಡಿಗ ನಾಮದಾರಿ ಇನ್ನಿತರ ಉಪ ಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ […]