ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್; ವ್ಯಾಪಕ ಖಂಡನೆ

ಉಡುಪಿ: ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ವ್ಯಾಪಕ ಖಂಡನೆ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘವು ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಅಲ್ಲದೆ, ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸಂಘದ ಸದಸ್ಯರು ಕೋಟ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ […]

ಉಡುಪಿ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಉಡುಪಿ: ವಿಶ್ವಕರ್ಮ ಸೇವಾ ಸಂಘ ಮತ್ತು ಕಾಳಿಕಾಂಬಾ ಮಹಿಳಾ ಮಂಡಳಿಯ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಉಡುಪಿ ಚಿಟ್ಪಾಡಿಯ ವಿಶ್ವಕರ್ಮ ಸೇವಾ ಸಂಘದ ಕಟ್ಟಡದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ವಕೀಲ ಮಾಧವ ಆಚಾರ್ಯ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಹಿರಿಯರು ನಡೆಸಿಕೊಂಡು ಬಂದಂತಹ ಆಚಾರ ವಿಚಾರಗಳನ್ನು ನಾವೂ ಮುಂದುವರೆಸಿಕೊಂಡು ಹೋಗಬೇಕು. ಅದು ನಮಗೆ ಶ್ರೀರಕ್ಷೆಯಾಗಿ ನಮ್ಮನ್ನು ಕಾಪಾಡುತ್ತದೆ ಎಂದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ […]

ಉಡುಪಿ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ; ಅರ್ಜಿ ಆಹ್ವಾನ

udupixpress

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಉದ್ಧೇಶಿತ ಆಯವ್ಯಯದಡಿ ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರ ಮಹಿಳೆಯರು ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ₹ 15 ಸಾವಿರ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ […]

ದೈವಸ್ಥಾನಗಳ ಹುಂಡಿಗೆ ಕಾಂಡೋಮ್, ಅವಹೇಳನಕಾರಿ ಬರಹ

ಮಂಗಳೂರು: ದೈವಸ್ಥಾನಗಳ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಹಾಗೂ ಅವಹೇಳನಕಾರಿ ಬರಹ ಬರೆದು ಹಾಕಿರುವ ಘಟನೆ ಉಳ್ಳಾಲದ ಕೇಂದ್ರ ಬಸ್‌ ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದಲ್ಲಿ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಇನ್ನಿತರ ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ಅವಹೇಳನಕಾರಿ ಬರಹಗಳನ್ನು ಬರೆದು ಹುಂಡಿಗೆ ಹಾಕಿದ್ದಾರೆ. ಉಳ್ಳಾಲದ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಪ್ರತಿ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯಲಾಗುತ್ತದೆ. ಈ ಕಾಣಿಗೆ ಹಣ ತೆಗೆಯುವಾಗ ತಡವಾಗಿತ್ತು. […]

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ನೇಮಕ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಾಸಕ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್‌ ಹೈಕಮಾಂಡ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಸಲೀಂ ಅಹಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ರಾಮಲಿಂಗಾ ರೆಡ್ಡಿ ಹಾಗೂ ಧ್ರುವನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.