ಕಾಂಗ್ರೆಸ್ ನಿಂದ ರಾಜಭವನ ಚಲೋ: ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರೋಧಿಸಿ ಮತ್ತು ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಂಡಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾಯಕರಾದ ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ಪರಮೇಶ್ವರ್, ಸಲೀಂ ಅಹ್ಮದ್ ಮತ್ತು ಶಾಸಕರು, ಸಂಸದರು, ಮಾಜಿ […]

ಕಾರ್ಕಳ: ಬೈಕ್-ಸ್ಕೂಟರ್ ಡಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಕಾರ್ಕಳ: ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ಮಣ್‌ ಗ್ರಾಮದ ನೀಚಾಲು ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಉಚ್ಚಿಲ ತೆಂಕ ಎರ್ಮಾಳ್‌ ಮೂಲದ ಶ್ರೀಕಾಂತ್‌ (37) ಮೃತ ದುರ್ದೈವಿ.‌ ಇವರು ಸ್ನೇಹಿತ ರವೀಂದ್ರ ಪೂಜಾರಿಯೊಂದಿಗೆ ಬೆಳ್ಮಣ್‌ ನಿಂದ ಸಾಂತೂರು ಕಡೆ ಹೋಗುತ್ತಿದ್ದರು. ಈ ವೇಳೆ ಪಡುಬಿದ್ರಿ ಕಡೆಯಿಂದ ಕಾರ್ಕಳ ಬರುತ್ತಿದ್ದ ಬೈಕ್‌ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಶ್ರೀಕಾಂತ್‌ ತಲೆಗೆ ಗಂಭೀರಗಾಯೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ […]

ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿದರೆ 6 ವರ್ಷ ಜೈಲು, ₹10 ಲಕ್ಷ ದಂಡ

ಉಡುಪಿ: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಜಾರಿಗೆ ಬಂದಿದ್ದು, ಈ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಕಾಯ್ದೆಯ ಉಲ್ಲಂಘನೆ ನಡೆಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಬಿ. ಚಾವ್ಹಾಣ್ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂತನ […]

ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಇದೇ ಜನವರಿ 30 ರಂದು ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿರುವ 17 ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬೈಲೂರಿನ ಶ್ರೀ ಮಾರಿಯಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷ ಡಾ. ಜೆ.ದಿನೇಶ್ಚಂದ್ರ ಹೆಗ್ಡೆ ಮಾತನಾಡಿ, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಮ್ಮ ಬೈಲೂರಿನ ಹೆಮ್ಮೆಯ ಸರಕಾರಿ ಪದವಿ ಪೂರ್ವ ಕಾಲೇಜಿನ […]