ಹೆಬ್ರಿ ತಾಲೂಕು: ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪ್ರಕಟ
ಉಡುಪಿ: ಹೆಬ್ರಿ ತಾಲೂಕಿನ ವ್ಯಾಪ್ತಿಯ 9 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪ್ರಕಟಗೊಂಡಿದ್ದು, ಈ ಕೆಳಗಿನಂತಿದೆ.
ಕಾರ್ಕಳ ತಾಲೂಕು: ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪ್ರಕಟ
ಉಡುಪಿ: ಕಾರ್ಕಳ ತಾಲೂಕಿನ ವ್ಯಾಪ್ತಿಯ 27 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪ್ರಕಟಗೊಂಡಿದ್ದು, ಈ ಕೆಳಗಿನಂತಿದೆ.
ಹಿರ್ಗಾನ ಕುಂದೇಶ್ವರ ಕ್ಷೇತ್ರದ ವರ್ಷಾವಧಿ ಉತ್ಸವ ಇಂದು
ಕಾರ್ಕಳ: ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದ ವರ್ಷಾವಧಿ ಮಹೋತ್ಸವ ಶುಕ್ರವಾರ ನಡೆಯಲಿದೆ. ಜ. 23ರಂದು ರಾತ್ರಿ 9 ಗಂಟೆಗೆ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಈ ಬಾರಿ ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರಿಗೆ ನೀಡಲಾಗುವುದು. ಸೌಕೂರು ಮೇಳದವರಿಂದ ರಾತ್ರಿ 8 ಗಂಟೆಯಿಂದ ಪುಷ್ಪ ಚಂದನ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ. ಶ್ರೀಕ್ಷೇತ್ರದಲ್ಲಿ ಇಂದು ಮಹೋತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಭೂತ ಬಲಿ, ಕಟ್ಟೆಪೂಜೆ, ನೇಮೋತ್ಸವ, ಜ.23ರಂದು ಸಂಪ್ರೋಕ್ಷಣೆ ನಡೆಯಲಿದೆ.
ಶಿವಮೊಗ್ಗ: ಜಲ್ಲಿಕ್ರಷರ್ ನಲ್ಲಿದ್ದ ಡೈನಾಮೈಟ್ ಸ್ಫೋಟ: 8 ಕಾರ್ಮಿಕರ ದುರ್ಮರಣ
ಶಿವಮೊಗ್ಗ: ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 8 ಕಾರ್ಮಿಕರು ಮೃತಪಟ್ಟಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೊಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ. ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ […]