ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸಚಿವ ಕೋಟ ದಿಢೀರ್ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆ (ವೆನ್ಲಾಕ್) ಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಿಢೀರ್ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಸಚಿವರಿಗೆ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಹಾಗೂ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಸಾಥ್ ನೀಡಿದರು. ಆಸ್ಪತ್ರೆಯ ಒಳರೋಗಿಗಳ ವಿಭಾಗದಲ್ಲಿ ದಾಖಲಾಗಿರುವ ರೋಗಿಗಳನ್ನು ಸಂದರ್ಶಿಸಿದರು. ಬಳಿಕ ವೈದ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವರು, ರೋಗಿಗಳ ಬಗ್ಗೆ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ನೀಡಿದರು.
ಉಡುಪಿ: ಗಣರಾಜ್ಯೋತ್ಸವ ದಿನಾಚರಣೆ; ಸಚಿವ ಎಸ್. ಅಂಗಾರರಿಂದ ಧ್ವಜಾರೋಹಣ

ಉಡುಪಿ: ಜಿಲ್ಲೆಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 72ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು, ಗೌರವ ವಂದನೆ ಸ್ವೀಕರಿಸಿದರು. ಆ ನಂತರ ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ ದಳ, ಸಶಸ್ತ್ರ ಪೊಲೀಸ್ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳ ಎನ್.ಸಿ.ಸಿ. ಮತ್ತು ರೆಡ್ ಕ್ರಾಸ್ ತಂಡಗಳ ಪಥ ಸಂಚಲನ ವೀಕ್ಷಿಸಿದರು. ಶಾಸಕ ಕೆ. ರಘುಪತಿ ಭಟ್, ಜಿ.ಪಂ. […]
ಕೆಂಪುಕೋಟೆಗೆ ರೈತರ ಮುತ್ತಿಗೆ: ಇತಿಹಾಸದಲ್ಲೇ ಇದು ಮೊದಲು

ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯು ಇಂದು ತೀವ್ರಸ್ವರೂಪ ಪಡೆದುಕೊಂಡಿತು. ಪ್ರತಿಭಟನಾ ನಿರತ ರೈತರು ದೆಹಲಿ ಕೆಂಪುಕೋಟೆ ಆವರಣವನ್ನು ಪ್ರವೇಶಿಸಿ, ರೈತಧ್ವಜವನ್ನು ಹಾರಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾ ನಿರತ ರೈತರು ಕೆಂಪುಕೋಟೆಗೆ ನುಗ್ಗಿದ್ದಾರೆ. ಸಾವಿರಾರು ರೈತರು ಧ್ವಜಾರೋಹಣ ಸ್ಥಳಕ್ಕೆ ಪ್ರವೇಶಿಸಿದ್ದು, ಧ್ವಜಸ್ತಂಭ ಏರಿ ಎರಡು ಬಾವುಟಗಳನ್ನು ಹಾರಿಸಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೆಂಪುಕೋಟೆಗೆ ರೈತರು ಮುತ್ತಿಗೆ ಹಾಕಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಭಯೋತ್ಪಾದಕರು: ಕೃಷಿ ಸಚಿವ ಬಿ.ಸಿ. ಪಾಟೀಲ್

ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಭಯೋತ್ಪಾದಕರು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರೈತರು ಸಂಪೂರ್ಣ ಭಯೋತ್ಪಾದಕರು. ಧರಣಿ ನಿರತ ರೈತರಿಗೆ ಬೇರೆ ಬೇರೆ ದೇಶಗಳ ಬೆಂಬಲವಿದೆ. ಹಾಗೆ ಕಾಂಗ್ರೆಸ್ ಕೂಡ ಬೆಂಬಲವಾಗಿ ನಿಂತಿದೆ. ವಿದೆ ಎಂದು ಆರೋಪಿಸಿದರು. ರೈತರು ಎಂದಿಗೂ ಕಾನೂನು ಕೈಗೆ ತೆಗೆದುಕೊಂಡವರಲ್ಲ. ಆದರೆ, ದೆಹಲಿ ರೈತ ಪ್ರತಿಭಟನಾಕಾರರು ಕೆಂಪುಕೋಟೆ ಬಳಿ ಹೋಗಿ ಬಾವುಟ ಹಾರಿಸಿದ್ದಾರೆ. ಇದನ್ನು […]
ದೆಹಲಿ: ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ; ಓರ್ವ ರೈತನ ಮೃತ್ಯು

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರು ಗಣರಾಜ್ಯೋತ್ಸವ ದಿನವಾದ ಮಂಗಳವಾರ ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ರೈತರು – ಪೊಲೀಸರು ನಡುವೆ ಘರ್ಷಣೆ ನಡೆದು ಪರಿಸ್ಥಿತಿ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿಪ್ರಹಾರ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ರೈತ ಮೃತಪಟ್ಟಿದ್ದಾರೆ. ದೆಹಲಿಯ ಮುಕಾರ್ಬಾ ಚೌಕ್ ನಲ್ಲಿ ಬ್ಯಾರಿಕೇಡ್ ಗಳನ್ನು ಮುರಿಯಲು ಯತ್ನಿಸಿದ […]