ಉತ್ತಮ ಆಡಳಿತ ಕೊಡುವ ಮನಸಿದ್ದರೆ ಖಾತೆ ಸಮಸ್ಯೆ ಬರಲ್ಲ: ಸಚಿವ ಅಂಗಾರ
ಉಡುಪಿ: ನನ್ನನ್ನು ಕ್ಷೇತ್ರದ ಜನತೆ ಆರು ಬಾರಿ ಗೆಲ್ಲಿಸಿದ್ದಾರೆ. ಆದರೆ ನಾನು ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಇದು ನನಗೆ ಸಂಘ ಕಲಿಸಿದ ಪಾಠ. ಹಾಗಾಗಿ ಖಾತೆ ಹಂಚಿಕೆಯಿಂದ ಉಂಟಾಗಿರುವ ಸಮಸ್ಯೆಯನ್ನು ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ ಹೇಳಿದರು. ಉಡುಪಿ ಜಿಲ್ಲೆಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಸಚಿವ ಸಂಪುಟದಲ್ಲಿ […]
ಡಾ. ಬಿ.ಎಂ. ಹೆಗ್ಡೆಗೆ ಪದ್ಮವಿಭೂಷಣ
ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ. ಬೆಳ್ಳೆ ಮೋನಪ್ಪ ಹೆಗ್ಡೆ (ಡಾ.ಬಿ.ಎಂ.ಹೆಗ್ಡೆ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. 1938ರ ಆಗಸ್ಟ್ 18ರಂದು ಜನಿಸಿದ ಹೆಗ್ಡೆ, ಹಿರಿಯಡಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಇಂಟರ್‌ಮೀಡಿಯೆಟ್ ಹಾಗೂ ಮದ್ರಾಸ್ ವಿಶ್ವವಿದ್ಯಾಲಯದಿಂದ ವೈದ್ಯ (ಎಂಬಿಬಿಎಸ್) ಪದವಿಯನ್ನು(1960) ಪಡೆದಿದ್ದಾರೆ. ಲಖನೌ ವಿಶ್ವವಿದ್ಯಾಲಯದಲ್ಲಿ ಎಂ.ಡಿ. ಪದವಿ ಬಳಿಕ ಉನ್ನತ ಶಿಕ್ಷಣಕ್ಕಾಗಿ ಲಂಡನ್‌ಗೆ ತೆರಳಿದರು. ನೊಬೆಲ್ ಪುರಸ್ಕೃತ ಪ್ರೊ. ಬರ್ನಾರ್ಡ್ ಲೋವ್ನ್ ಜೊತೆ ಕೆಲಸ ಮಾಡಿದರು. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಂಶುಪಾಲ […]
ಡಾ. ಬಿ.ಎಂ. ಹೆಗ್ಡೆ, ಎಸ್ ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ ಪ್ರಶಸ್ತಿ
ನವದೆಹಲಿ: ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ, ರಾಜ್ಯದ ಹೃದ್ರೋಗ ತಜ್ಞ ಡಾ. ಬಿ.ಎಂ.ಹೆಗ್ಡೆ ಸೇರಿದಂತೆ ಏಳು ಮಂದಿ ಈ ಸಾಲಿನ ಪದ್ಮ ವಿಭೂಷಣ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಸಾಹಿತಿ ಚಂದ್ರಶೇಖರ ಕಂಬಾರ ಸೇರಿ ಹತ್ತು ಮಂದಿ ಪದ್ಮ ಭೂಷಣ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪದ್ಮಶ್ರೀ ಪುರಸ್ಕಾರಕ್ಕೆ ಕಲಾ ವಿಭಾಗದಲ್ಲಿ ರಾಜ್ಯದ ಹಿರಿಯ ನೃತ್ಯ ಕಲಾವಿದೆ ಮಂಜಮ್ಮ ಜೋಗತಿ, ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ರಂಗಸಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಮತ್ತು ಕ್ರೀಡಾ ವಿಭಾಗದಲ್ಲಿ ಕೆ.ವೈ.ವೆಂಕಟೇಶ್ ಅವರನ್ನು ಆಯ್ಕೆ ಮಾಡಲಾಗಿದೆ.