ದೀಪಾಂಜಲಿ’: ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ: ಬಿಜೆಪಿ ಉಡುಪಿ ನಗರ ಮತ್ತು ಮುಕ್ತವಾಹಿನಿ ಜಂಟಿ ಆಶ್ರಯದಲ್ಲಿ ಕಳೆದ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಿದ ದೀಪಾವಳಿ ಕುಟುಂಬ ಆಚರಣೆಯ ಛಾಯಾಚಿತ್ರ ಸ್ಪರ್ಧೆ ‘ದೀಪಾಂಜಲಿ’ ಯ ಸ್ಪರ್ಧಾ ವಿಜೇತರಿಗೆ ಬುಧವಾರ ಉಡುಪಿ ನಗರ ಬಿಜೆಪಿ ಕಚೇರಿಯಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ಸಂಜೀವ ರಾವ್ ಕಲ್ಯಾಣಪುರ, ಸಿಂಧು ಗುಂಡಿಬೈಲು ಮತ್ತು ಶ್ರೀನಿವಾಸ್ ಶೆಟ್ಟಿಗಾರ್ ಬಡಗುಬೆಟ್ಟು ಕುಟುಂಬದ ಸದಸ್ಯರು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಗಳಿಸಿದ್ದರು. ಶಾಸಕ ಕೆ. ರಘುಪತಿ ಭಟ್ ವಿಜೇತರಿಗೆ ಬಹುಮಾನ ವಿತರಿಸಿದರು. ನಗರ […]

ಅತ್ತೂರು ವಾರ್ಷಿಕ ಮಹೋತ್ಸವದ ಹತ್ತನೇ ದಿನ: ಒಳಿತನ್ನು ಮಾಡಲು ಧರ್ಮ, ದೇಶ, ಜನಾಂಗಗಳ ಗಡಿ ಮೀರಿ ಸಾಗೋಣ: ಬಿಷಪ್ ಜೆರಾಲ್ಡ್ ಲೋಬೊ

ಅತ್ತೂರು: ನಾವು ಬಡವರಿಗೆ ಮಾಡಿದ ಒಳಿತಿನ ಪ್ರತಿಫಲವನ್ನು ದೇವರು ನಮಗೆ ನೂರ್ಮಡಿಯಾಗಿ ಹಿಂದಿರುಗಿಸುತ್ತಾರೆ. ನಮ್ಮ ಸಹೋದರ ಸಹೋದರಿಯರಿಗೆ ಒಳಿತನ್ನು ಮಾಡುವ ಯಾವುದೇ ಅವಕಾಶವನ್ನು ನಾವು ತಪ್ಪಿಸಿಕೊಳ್ಳಬಾರದು. ಈ ಲೋಕದ ಅಸಂಖ್ಯಾತ ಜನರು ನಮ್ಮ ಸಹಾಯಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವದಲ್ಲಿ ದಿನದ ಪ್ರಮುಖ ಪೂಜೆಯನ್ನು ನೆರವೇರಿಸಿ ಮಾತನಾಡಿದರು. ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಹತ್ತನೇ ದಿನವಾದ ಬುಧವಾರ ಭಕ್ತಾದಿಗಳ ಉಪಸ್ಥಿತಿಯಲ್ಲಿ ಬಲಿಪೂಜೆಗಳು […]

ಮಣಿಪಾಲ: ಇಂದು ‘ಸಲಾಂ ಕಲಾಂ’ ಕಾರ್ಯಕ್ರಮ

ಮಣಿಪಾಲ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಡಾ. ಪಳ್ಳತ್ತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ ಮಣಿಪಾಲ ಇವರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಸಲಾಂ ಕಲಾಂ’ (ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ನೆನಪು) ಕಾರ್ಯಕ್ರಮವನ್ನು ಮಣಿಪಾಲದ ನಿರ್ಮಿತಿ ಕೇಂದ್ರದಲ್ಲಿ ಇಂದು (ಜ. 28) ಸಂಜೆ 5.30ಕ್ಕೆ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಡಾ. ಅಬ್ದುಲ್ ಕಲಾಂ ಅವರ ಶಿಷ್ಟಾಚಾರ ಹಾಗೂ ಸಮನ್ವಯ ಅಧಿಕಾರಿಯಾಗಿದ್ದ ಜಯಪ್ರಕಾಶ್ ರಾವ್ ಕೆ. ಅವರ ‘ಹಮಾರಾ PRO’ ಪುಸ್ತಕ […]

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ

ವಿಜಯಪುರ: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ಬಾರಿ ಶಾಸಕರಾಗಿದ್ದ ಅವರು, ಎರಡು ಬಾರಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಅವರು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1994ರಲ್ಲಿ ಮೊದಲ ಬಾರಿಗೆ […]