ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ

ದೆಹಲಿ: ದೆಹಲಿಯ ಔರಂಗಜೇಬ್ ರಸ್ತೆಯಲ್ಲಿ ಇರುವ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಇಂದು ಸಂಜೆ 5.45 ಸುಮಾರಿಗೆ ಸ್ಫೋಟ ನಡೆದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದೊಂದು ಕಡಿಮೆ ಸಾಮರ್ಥ್ಯದ ಐಇಡಿ ಸ್ಫೋಟ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಯಭಾರಿ ಕಚೇರಿಯ 50 ಮೀಟರ್ ದೂರದಲ್ಲೇ ಈ ವಿಧ್ವಂಸಕ ಕೃತ್ಯ ನಡೆದಿದೆ. ಘಟನೆಯಲ್ಲಿ ಐದರಿಂದ ಆರು ವಾಹನಗಳು ಜಖಂಗೊಂಡಿದೆ. ಬಾಂಬ್ ನಿಷ್ಕ್ರಿಯ ದಳದಿಂದ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದೆ. ಘಟನೆಯಲ್ಲಿ ಯಾವುದೇ ಸಾವು […]

ಉಡುಪಿ: ಮರುವಾಯಿ ತೆಗೆಯಲು ನದಿಗೆ ಇಳಿದಿದ್ದ ಕುಂಚ ಕಲಾವಿದ ನೀರಿನಲ್ಲಿ ಮುಳುಗಿ ಮೃತ್ಯು

ಉಡುಪಿ: ಪ್ರಸಿದ್ಧ ಚಿತ್ರಕಾರ, ನಾಟಕ ಕಲಾವಿದ ಉದ್ಯಾವರದ ಸಂಪಿಗೆ ನಗರ ನಿವಾಸಿ ಆಸ್ಟಿನ್ ಮಚಾದೋ (42) ಅವರು ನದಿಯಲ್ಲಿ ಮರುವಾಯಿ ಹೆಕ್ಕಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗುರುವಾರ ಉದ್ಯಾವರ ಸಂಪಿಗೆನಗರದ ಬಬ್ಬರ್ಯಗುಡ್ಡದ ನದಿಯಲ್ಲಿ ಮರುವಾಯಿ ಹೆಕ್ಕಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಮುಳುಗಿ ಆಸ್ಟಿನ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.  

ಪಕ್ಷದ ಸಂಘಟನಾತ್ಮಕ ಯೋಜನೆಗಳನ್ನು ಕಾರ್ಯಗತಗೊಳಿಸಿ ಪಕ್ಷ ಸಂಘಟನೆಗೆ ವೇಗ ನೀಡಿ: ಕುಯಿಲಾಡಿ

ಉಡುಪಿ: ಜಿಲ್ಲಾ ಮಟ್ಟದಿಂದ ಬೂತ್ ಮಟ್ಟದವರೆಗೆ ವಿವಿಧ ಸ್ತರಗಳ ಸಹಿತ ಪಕ್ಷದ ಮೋರ್ಚಾಗಳು ಮತ್ತು ಪ್ರಕೋಷ್ಠಗಳು ನಿಗದಿತ ಸಮಯದಲ್ಲಿ ಅಗತ್ಯ ಸಭೆಗಳನ್ನು ನಡೆಸಿ ಪಕ್ಷದ ಸಂಘಟನಾತ್ಮಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಮೂಲಕ ಜಿಲ್ಲೆಯಾದ್ಯಂತ ಪಕ್ಷ ಸಂಘಟನಾ ಚಟುವಟಿಕೆಯ ವೇಗವನ್ನು ಹೆಚ್ಚಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷದ ವಿವಿಧ ಸ್ತರಗಳ ಪ್ರತಿಯೊಬ್ಬ ಪದಾಧಿಕಾರಿಯೂ ಪ್ರತಿ ವಾರದಲ್ಲಿ […]

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ.24 ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ‌ ನೀಡಿದರು. ಮೇ.24ರಂದು ಭೌತಶಾಸ್ತ್ರ ಮತ್ತು ಇತಿಹಾಸ, ಮೇ 25ರಂದು ಮೈನಾರಿಟಿ ಲ್ಯಾಂಗ್ವೇಜಸ್, ಮೇ. 26 ಬೇಸಿಕ್ ಮ್ಯಾತ್ಸ್ ಮತ್ತು ಲಾಜಿಕ್ ಹೋಮ್ ಸೈನ್ಸ್, ಮೇ.27 ಗಣಿತ, ಐಚ್ಛಿಕ ಕನ್ನಡ, ಅಕೌಂಟೆನ್ಸಿ ಮೇ. 28 ಉರ್ದು, ಮೇ. 29 ರಾಜ್ಯ ಶಾಸ್ತ್ರ, ಮೇ 31 ರಸಾಯನ ಶಾಸ್ತ್ರ ಪರೀಕ್ಷೆಗಳು […]

ಜ. 31ಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಸಭೆಯು ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜನವರಿ 31ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಸಭೆಯಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್‍ ಭಾಗವಹಿಸಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.