ಉಡುಪಿ: ರಸ್ತೆ ಅಪಘಾತ; ಯುವಕ ಸ್ಥಳದಲ್ಲೇ ಮೃತ್ಯು
ಉಡುಪಿ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಯುವಕನೊಬ್ಬ ಮೃತಪಟ್ಟ ಘಟನೆ ರಾಪ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ ಸೇತುವೆ ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಕೊಳಲಗಿರಿಯ ನಿವಾಸಿ ಆಸೀಫ್(19) ಎಂಬಾತ ಮೃತ ಯುವಕ. ಈತ ನಿನ್ನೆ ರಾತ್ರಿ ಉಡುಪಿಯಿಂದ ಕೊಳಲಗಿರಿಗೆ ಹೊಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದು, ಈ ವೇಳೆ ಸಂತೆಕಟ್ಟೆ ಸೇತುವೆ ಬಳಿ ಸ್ಕೂಟರ್ ಏಕಾಏಕಿಯಾಗಿ ಸ್ಕೀಡ್ ಆಗಿದೆ. ಇದರ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಆಸೀಫ್ ನ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಬ್ರಹ್ಮಾವರ ಪೊಲೀಸ್ […]
ಹಳೆಯ ವಾಹನಗಳ ವಿಲೇವಾರಿಗೆ ಹೊಸ ನೀತಿ ಘೋಷಣೆ
ನವದೆಹಲಿ: ಹಳೆಯ ವಾಹನಗಳ ವಿಲೇವಾರಿಗೆ ಬಜೆಟ್‌ನಲ್ಲಿ ಸ್ಕ್ರ್ಯಾಪಿಂಗ್ ಪಾಲಿಸಿ (ಹಳೆಯ ವಾಹನಗಳನ್ನು ಗುಜರಿಗೆ ನೀಡಲು ನೀತಿ) ಹೊಸ ನೀತಿ ಘೋಷಿಸಲಾಗಿದೆ. ಅದರಂತೆ ವೈಯಕ್ತಿಕ ವಾಹನಗಳಿಗೆ 20 ವರ್ಷಗಳ ಬಳಿಕ ಹಾಗೂ ವಾಣಿಜ್ಯ ವಾಹನಗಳಿಗೆ 15 ವರ್ಷಗಳ ಬಳಿಕ ಕ್ಷಮತಾ ಪರೀಕ್ಷೆ ನಡೆಸಲಾಗುತ್ತದೆ. ಮಾಲಿನ್ಯ ಕಡಿಮೆ ಮಾಡುವ, ತೈಲ ಆಮದು ಹೊರೆ ತಗ್ಗಿಸುವ ನಿಟ್ಟಿನಲ್ಲಿ ಹಾಗೂ ಪರಿಸರಸ್ನೇಹಿ ವಾಹನಗಳನ್ನು ಉತ್ತೇಜಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ […]
ಆರೋಗ್ಯ ಕ್ಷೇತ್ರಕ್ಕೆ ₹ 2.23 ಲಕ್ಷ ಕೋಟಿ ಮೀಸಲು: ನಿರ್ಮಲಾ ಸೀತಾರಾಮನ್
ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಪ್ರಥಮವಾಗಿ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್ ಯೋಜನೆಯನ್ನು ಉಲ್ಲೇಖಿಸಿದರು. ದೇಶದ ಆರೋಗ್ಯ ಕ್ಷೇತ್ರವನ್ನು ಸುಸ್ಥಿರ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಈ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್ ಯೋಜನೆ ಪ್ರಾರಂಭಿಸಿದ್ದು, ಇದಕ್ಕಾಗಿ ಮುಂದಿನ ಆರುವರ್ಷಗಳನ್ನು ಗಮನದಲ್ಲಿಟ್ಟುಕೊಂಡು 64,180 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು. ಬಜೆಟ್ 2021 ಆರು ಸ್ತಂಭಗಳ ಮೇಲೆ ನಿಂತಿದೆ. ಅವುಗಳೆಂದರೆ ಆರೋಗ್ಯ ಮತ್ತು ಯೋಗಕ್ಷೇಮ, ಭೌತಿಕ […]
ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಹೈನುಗಾರರ ವಿವಿಧೋದ್ದೇಶ ಸಹಕಾರಿ ಸಂಘವನ್ನಾಗಿ ಪರಿವರ್ತಿಸಿ: ಬೋಳ ಸದಾಶಿವ ಶೆಟ್ಟಿ ಆಗ್ರಹ
ಉಡುಪಿ: ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಹಕಾರಿ ಸಂಘಗಳು ಸ್ವಂತ ಕಟ್ಟಡ ದಲ್ಲಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದ್ದು, ಉಗ್ರಾನ ವ್ಯವಸ್ಥೆಯನ್ನು ಹೊಂದಿರುತ್ತದೆ. ಇಂತಹ ಸಂಘಗಳನ್ನು ವಿವಿಧೋದ್ದೇಶ ಸಹಕಾರಿ ಸಂಘವಾಗಿ ಪರಿವರ್ತಿಸಬೇಕು ಎಂದು ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಆಗ್ರಹಿಸಿದ್ದಾರೆ. ಅದರ ಮೂಲಕ ಪಡಿತರ ವ್ಯವಸ್ಥೆಯನ್ನು ನೀಡಬೇಕು. ಈ ಬಗ್ಗೆ ಈಗಾಗಲೇ ರಾಷ್ಟ್ರೀಯ ಹೈನು ಅಭಿವೃದ್ಧಿ ನಿಗಮ (NDDB) ಅನುಮತಿಯನ್ನು ಸಹ ನೀಡಿರುತ್ತಾರೆ. ಅಲ್ಲದೆ ದಿನ ಬಳಕೆಯ ಅಗತ್ಯ ವಸ್ತುಗಳ ಗ್ರಾಹಕರ ಅಂಗಡಿಯನ್ನು ತೆರೆಯಲು […]
ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ
ಕಾರ್ಕಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ರಸ್ತೆ ಬದಿಯ ತೋಡಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಆನೆಕೆರೆ ಮಸೀದಿ ಬಳಿ ಇಂದು ಮುಂಜಾನೆ ನಡೆದಿದೆ. ಕಾರು ಚಾಲಕನನ್ನು ಫಾದರ್ ಮುಲ್ಲರ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ತೋಡಿಗೆ ಬಿದ್ದ ಪರಿಣಾಮ ಕಾರಿನ ಮುಂಭಾಗ ಜಖಂ ಆಗಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.