ಆಗುಂಬೆ ಘಾಟಿ: ಪ್ರಾಣಿಗಳಿಗೆ ಆಹಾರ ತಿನಿಸುವವರು, ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ

ಉಡುಪಿ: ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ತಿನಿಸುವವರು ಮತ್ತು ರಸ್ತೆ ಬದಿ ಆಹಾರ ಪೊಟ್ಟಣಗಳನ್ನು ಎಸೆಯುವವರ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗವು ವಾರಾಂತ್ಯದಲ್ಲಿ ಕಾರ್ಯಾಚರಣೆಗೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಇಂದು ಸೋಮೇಶ್ವರದಿಂದ ಆಗುಂಬೆವರೆಗಿನ 10ಕಿ.ಮೀ. ರಸ್ತೆಯುದ್ದಕ್ಕೂ ಹೆಬ್ರಿ, ಕಾರ್ಕಳ, ಅಮಾಸೆಬೈಲು ಮತ್ತು ಸಿದ್ಧಾಪುರ ವನ್ಯ ಜೀವಿ ವಿಭಾಗದ ಸುಮಾರು 40 ಮಂದಿ ಸಿಬ್ಬಂದಿಗಳು ನಿಂತು, ಪ್ರಾಣಿಗಳಿಗೆ ಆಹಾರ ತಿನಿಸುವ ಮತ್ತು ರಸ್ತೆ ಬದಿ ಆಹಾರ ಪೊಟ್ಟಣ, ಪ್ಲಾಸ್ಟಿಕ್ […]

ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ವಿದ್ಯಾರ್ಹತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರಲ್ಲಿ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಇಚ್ಚಿಸುವವರನ್ನು ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡುವ ಸಂದರ್ಭಗಳಲ್ಲಿ ಅವಕಾಶ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುರ್ನವಸತಿ ಯೋಜನೆಯ ಫಲಾನುಭವಿಗಳ ಆಯ್ಕೆ, ದಮನಿತ ಮಹಿಳೆಯರ ಸಲಹಾ ಸಮಿತಿ ಹಾಗೂ ತರಬೇತಿ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಿಂಗತ್ವ ಅಲ್ಪ ಸಂಖ್ಯಾತರ […]

ಮಂಗಳೂರು: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳಮುಖಿ ಆಯ್ಕೆ

ಮಂಗಳೂರು: ಜಿಲ್ಲೆಯ ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಅಲಂಕರಿಸಿದ್ದಾರೆ. ಬ್ಯೂಟಿಷಿಯನ್ ಆಗಿರುವ ‘ಪರಿವರ್ತನ್ ಟ್ರಾನ್ಸ್ ಕ್ವೀನ್ 2018’ ಪ್ರಶಸ್ತಿಯನ್ನು ಗೆದ್ದಿರುವ ಸಂಜನಾ ಚಲವಾದಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಜನವರಿ 10, 11 ಮತ್ತು 12ರಂದು ನಡೆದ ಯುವ ಕಾಂಗ್ರೆಸ್‌ ನ ಆನ್ ಲೈನ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಶಿವ ಅವರು ಅಧ್ಯಕ್ಷರನ್ನಾಗಿ ಆಯ್ಕೆಯಾಗಿದ್ದಾರೆ. ಸೋಹನ್ ಮತ್ತು ದೀಕ್ಷಿತ್ ಪೂಜಾರಿ ಉಪಾಧ್ಯಕ್ಷರಾಗಿದ್ದಾರೆ. ಸಂಜನಾ ಚಲವಾಡಿ ದಕ್ಷಿಣ ಬ್ಲಾಕ್‌ ಪ್ರಧಾನ […]

ಜಗದೀಶ್ ಅಧಿಕಾರಿ ವಿರುದ್ಧ ನಾವು ತಾಂಟಲು ಸಿದ್ಧ: ಪ್ರತಿಭಾ ಕುಳಾಯಿ

ಮಂಗಳೂರು: ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಬಗ್ಗೆ ಮತ್ತು ಬಿಲ್ಲವ ಸಮಾಜದ ಕುರಿತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಜಗದೀಶ್ ಅಧಿಕಾರಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಜಗದೀಶ್ ಅಧಿಕಾರಿ ನಮ್ಮ ಗರಡಿಗೆ ಬಂದು ತಪ್ಪು ಕಾಣಿಕೆ ಹಾಕಿ ಸಮಾಜದ ಮುಂದೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅಧಿಕಾರಿ ವಿರುದ್ಧ […]

ಹಿರಿಯಡಕ: ನಿಯಂತ್ರಣ ತಪ್ಪಿ ರಸ್ತೆಬದಿಯ ಮನೆಗೆ ನುಗ್ಗಿದ ಕಾರು; ಚಾಲಕ ಗಂಭೀರ

ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಹಿರಿಯಡಕದ ಕೊಂಡಾಡಿಯ ಭಜನೆಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ಸುಮಾರಿಗೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಚಾಲಕ ಹಾಗೂ ಕೂಲಿ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ. ಕಾರು ಚಾಲಕ ಹರಿಣ್ ಶೆಟ್ಟಿ ಎಂಬುವವರು ಕಾರ್ಕಳದಿಂದ ಉಡುಪಿ ಕಡೆಗೆ ಬರುತ್ತಿದ್ದು, ಈ ವೇಳೆ ಹಿರಿಯಡಕದ ಕೊಂಡಾಡಿಯ ಭಜನೆಕಟ್ಟೆ ಸಮೀಪಿಸುತ್ತಿದ್ದಂತೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿರುವ ಪುತ್ತು ನಾಯಕ್ ಎಂಬುವವರ ಮನೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಕಾರು ಡಿಕ್ಕಿ […]