ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್: ಅಭಿನಂದನಾ ಸಮಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ವತಿಯಿಂದ ಮೀನುಗಾರಿಕೆ ಮತ್ತು ಬಂದರು ಸಚಿವ ಅಂಗಾರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಅಭಿನಂದನಾ ಸಮಾರಂಭ ಆಯೋಜಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ […]
ಶಿರ್ವ ಸಂತ ಮೇರಿ ಕಾಲೇಜು: ಫೆ. 11ಕ್ಕೆ ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಫೆಬ್ರವರಿ 11ರಂದು ಮಂಗಳೂರಿನ ಪ್ರತಿಷ್ಟಿತ ದಿಯಾ ಸಿಸ್ಟಮ್ ಸಂಸ್ಥೆ (ಗ್ಲೋ ಟಚ್ ಟೆಕ್ನಾಲಾಜಿಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲಿದೆ. ಈಗಾಗಲೇ ಬಿ.ಸಿ.ಎ. (ಸಿ.ಎಸ್.), ಬಿ.ಎಸ್.ಸಿ (ಸಿ.ಎಸ್.), ಬಿ.ಇ. (ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಡಿಪ್ಲೊಮಾ (ಸಿಎಸ್), ಎಂ.ಎಸ್.ಸಿ, ಎಂ.ಸಿ.ಎ. ಸ್ನಾತಕೋತ್ತರ ಪದವಿ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಅಂದು ಬೆಳಿಗ್ಗೆ 9.30ರಿಂದ ಕಾಲೇಜಿನ ಫಾ. ಹೆನ್ರಿ ಕ್ಯಾಸ್ತಲಿನೊ ಆಡಿಟೋರಿಯಂನಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ […]
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಕಾರು ಅಪಘಾತ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಕಾರು ಶನಿವಾರ ಬೆಳಗಿನ ಜಾವ ನಂತೂರು ಬಳಿ ಅಪಘಾತಗೊಂಡಿದ್ದು, ಅಪಘಾತದಲ್ಲಿ ದಯಾನಂದ ಅವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮುಂಜಾನೆ 5:15ರ ಸುಮಾರಿಗೆ ಕತ್ತಲ್ ಸಾರ್ ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದು, ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿ ಮತ್ತು ಇವರ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಈ ವೇಳೆ ಕತ್ತಲ್ ಸಾರ್ ಅವರಿಗೆ ಸಣ್ಣ ಪುಟ್ಟ […]