ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನಕ್ಕೆ ಚಾಲನೆ

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಟಿತ ದಿಯಾ ಸಿಸ್ಟಮ್ ಸಂಸ್ಥೆ (ಗ್ಲೋ ಟಚ್ ಟೆಕ್ನಾಲಾಜಿಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ಗುರುವಾರ ಆಯೋಜಿಸಿತು. ಈಗಾಗಲೇ ಬಿ.ಸಿ.ಎ., ಡಿಪ್ಲೊಮಾ(ಸಿ.ಎಸ್.), ಬಿ.ಎಸ್ಸಿ (ಸಿ.ಎಸ್.), ಬಿ.ಎಸ್ಸಿ (ಐ.ಟಿ) ಬಿ.ಇ. ಎಂ.ಎಸ್ಸಿ, ಎಂ.ಸಿ.ಎ. ಸ್ನಾತಕೋತ್ತರ ಪದವಿ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಬೆಳಿಗ್ಗೆ 9.30ರಿಂದ ಕಾಲೇಜಿನ ಹೆನ್ರಿ ಕ್ಯಾಸ್ತಲೀನೊ ಆಡಿಟೋರಿಯಂನಲ್ಲಿ ಮಂಗಳೂರಿನ ದಿಯಾ ಸಿಸ್ಟಮ್‍ನವರು ಕ್ಯಾಂಪಸ್ ಸಂದರ್ಶನವನ್ನು ನಡೆಸಿಕೊಟ್ಟರು. ಕಾರ್ಯಕ್ರಮವನ್ನು […]

ಫೆ. 16-17: ಬೈಲೂರು ಶ್ರೀ ಉಚ್ಛಂಗಿ ಮಾರಿಯಮ್ಮ ದೇವರ ರಾಶಿ ಮಾರಿಪೂಜೆ

ಬೈಲೂರು: ಕೋವಿಡ್ 19ನಿಂದಾಗಿ ಮುಂದೂಡಲ್ಪಟ್ಟಿದ್ದ ಕೌಡೂರು ಬೈಲೂರು ಶ್ರೀ ಉಚ್ಛಂಗಿ ಮಾರಿಯಮ್ಮ ದೇವರ ಕಾಲಾವಧಿ ರಾಶಿ ಮಾರಿಪೂಜೆಯು ಫೆಬ್ರವರಿ 16 ಮತ್ತು 17ರಂದು ಎರಡು ದಿನಗಳ ಕಾಲ ದೇವಿಯ ಸನ್ನಿಧಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇಗುಲದ ಆಡಳಿತ ಮಂಡಳಿ ಕೋರಿದೆ.

ಡಿವೈಡರ್ ಗೆ ಬೈಕ್ ಡಿಕ್ಕಿ‌: ಬಾಲಕ ಸ್ಥಳದಲ್ಲೇ ಮೃತ್ಯು

ಶಿರೂರು: ಡಿವೈಡರ್ ಗೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಅಳ್ವೆಗದ್ದೆ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಹಡವಿನಕೋಣೆ ನಿವಾಸಿ ಅರಾತ್ (15) ಮೃತ ದುರ್ದೈವಿ. ಈತ ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಹೋಗಿದ್ದು, ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಡಿದಿದ್ದಾನೆ. ಇದರ ಪರಿಣಾಮ ಈತ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ತೀವ್ರಗಾಯಗೊಂಡಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲದೆ, ಈತ ಅಪ್ರಾಪ್ತನಾಗಿದ್ದು, ಯಾವುದೇ […]

ಐದು ತಿಂಗಳ ಟೀರಾಗೆ ಬೇಕಿರುವ ‘ಜೀವೌಷಧಿ’ ಮೇಲಿನ ₹6 ಕೋಟಿ ಜಿಎಸ್ ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ!

ಮುಂಬೈ: ಅಪರೂಪದ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು, ಇದರಿಂದ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ. ಟೀರಾ ಕಾಮತ್ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು, ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ ಮನ್ನಾ ಮಾಡಿದ್ದಾರೆ. ಮುಂಬೈ ನಿವಾಸಿಗಳಾದ ಪ್ರಿಯಾಂಕಾ ಮತ್ತು ಮಿಹಿರ್ ಕಾಮತ್ ಅವರು […]

ಅತ್ತೂರು ಪರ್ಪಲೆ ಗಿರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಅತ್ತೂರು: ಅತ್ತೂರು ಪರ್ಪಲೆ ಗಿರಿಯಲ್ಲಿ ಬುಧವಾರ ಬೆಳಗ್ಗಿನಿಂದ ರಾತ್ರಿಯವರೆಗೆ ಕೇಂಜ ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ಅಘೋರ ಹೋಮ, ಉಚ್ಚಾಟನೆ, ಸುದರ್ಶನ ಹೋಮ ಹಾಗೂ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟಿನ ಸದಸ್ಯರು, ಸ್ಥಳೀಯ ಭಗವದ್ಭಕ್ತರು ಈ ಪುಣ್ಯ ಕಾರ್ಯದಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದರು.