ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಜನಾಕ್ರೋಶದ ಬೆನ್ನಲ್ಲೇ ಯೂಟರ್ನ್ ಹೊಡೆದ ಸಚಿವ ಕತ್ತಿ

ಬೆಂಗಳೂರು: ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಜ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ.

ಬ್ರಹ್ಮಾವರ: ಅನೈತಿಕ ಸಂಬಂಧ ಪ್ರಶ್ನಿಸಿದ ವ್ಯಕ್ತಿಯ ಕೊಲೆ; ಆರು ಮಂದಿಯ ಬಂಧನ

ಉಡುಪಿ: ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದ ಉದ್ದಳ್ಕ ಎಂಬಲ್ಲಿ ಭಾನುವಾರ (ಫೆ.14) ರಾತ್ರಿ ನಡೆದ ನವೀನ್ ನಾಯ್ಕ್ (ಗುಂಡ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಇಂದು ಬಂಧಿಸಿದ್ದಾರೆ. ಮಲ್ಪೆ ನಿವಾಸಿಗಳಾದ ಗೌತಮ್ ( 27 ), ಮನೋಜ್ ಭಂಡಾರಿ (30), ಧನುಷ್ (27), ಚೇತನ್ ಕುಮಾರ್ (24) ತಿಲಕ ರಾಜ್ (36) ಹಾಗೂ ಕದಿಕೆಯ ಸಿದ್ದಾರ್ಥ್( 23 )ಬಂಧಿತ ಆರೋಪಿಗಳು. ಬಂಧಿತ ಆರೋಪಿತಗಳಿಂದ ಕೃತ್ಯಕ್ಕೆ ಬಳಸಿದ ಮಾರುತಿ ರಿಟ್ಜ್ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. […]

ಬೊಮ್ಮರಬೆಟ್ಟು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ: ಜಿಲ್ಲಾಧ್ಯಕ್ಷರ ಸ್ವಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ

ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಸ್ವಕ್ಷೇತ್ರವಾದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್‌ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದು, ಬಿಜೆಪಿಗೆ ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. 21 ಸದಸ್ಯ ಬಲ ಹೊಂದಿರುವ ಹಿರಿಯಡಕ ಬೊಮ್ಮರಬೆಟ್ಟು ಗ್ರಾಪಂನಲ್ಲಿ ಬಿಜೆಪಿ 11 ಹಾಗೂ ಕಾಂಗ್ರೆಸ್ 10 ಸದಸ್ಯರು ಗೆಲುವು ಸಾಧಿಸಿದ್ದರು. ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮುಂಡುಜೆ ಸುರೇಶ್ ನಾಯಕ್ ಅವರು 10 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಹರೀಶ್ ಸಾಲಿಯಾನ್ […]

ಮಣಿಪಾಲ: ಕೆಎಂಸಿ ಆಸ್ಪತ್ರೆಯಲ್ಲಿ ಅಂತರಾಷ್ಟೀಯ ಬಾಲ್ಯ ಕ್ಯಾನ್ಸರ್ ದಿನ ಆಚರಣೆ

ಮಣಿಪಾಲ: ಅಂತರಾಷ್ಟೀಯ ಬಾಲ್ಯ ಕ್ಯಾನ್ಸರ್ ದಿನವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ಮತ್ತು ರಕ್ತಶಾಸ್ತ್ರ ವಿಭಾಗವು ಇಂದು ಆಚರಿಸಿತು. ಕೆಎಂಸಿ ಡೀನ್ ಡಾ. ಶರತ್ ಕೆ ರಾವ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಜಂಟಿಯಾಗಿ ಕ್ಯಾನ್ಸರ್ ನಿಂದ ಮುಕ್ತರಾದ ಮಕ್ಕಳೊಂದಿಗೆ ಸೇರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಶರತ್ ರಾವ್ ಅವರು, ಪ್ರತೀ ವರ್ಷ ಜಗತ್ತಿನಾದ್ಯಂತ ಸುಮಾರು ಮೂರು ಲಕ್ಷ ಮಕ್ಕಳು ಹೊಸದಾಗಿ ಕ್ಯಾನ್ಸರ್ ಗೆ ತುತ್ತಾಗುತ್ತಾರೆ. ಭಾರತದಲ್ಲಿ ಇದರ […]

ಯೋಗದಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ: ಯೋಗಗುರು ರಂಜಿತ್ ಪುನರೂರು

ಶಿರ್ವ: ಮಾನವ ಶರೀರವೇ ನಿಜವಾದ ಯೋಗ. ಅದನ್ನು ಸಮರ್ಪಕವಾದ ರೀತಿಯಲ್ಲಿ ಕಾಪಾಡಿಕೊಳ್ಳಬೇಕಾದುದು ಅತೀ ಅಗತ್ಯ. ಜೀವನ ಶೈಲಿಯಲ್ಲಿ ಉತ್ತಮ ಆಹಾರದೊಂದಿಗೆ ವ್ಯಾಯಾಮವನ್ನು ದಿನ ನಿತ್ಯ ರೂಢಿಸಿಕೊಂಡರೆ ದೇಹ ಸ್ವಸ್ಥವಾಗಿ ರೋಗದಿಂದ ಮುಕ್ತವಾಗಲು ಸಾಧ್ಯ ಎಂದು ಯೋಗಗುರು ರಂಜಿತ್ ಪುನರೂರು ಹೇಳಿದರು. ಶಿರ್ವ ಸಂತ ಮೇರಿ ಕಾಲೇಜಿನ ದೈಹಿಕ ಸಾಮರ್ಥ್ಯ ಮತ್ತು ಯೋಗ ಕೋಶ-ಎನ್.ಸಿ.ಸಿ.ಯ ನೇತೃತ್ವದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಉತ್ತಮ ಸಮಾಜ ಸೇವಕ ರಾಜ್ಯ ಪ್ರಶಸ್ತಿ […]