ಉದ್ಯಾವರ ಗ್ರಾಪಂ: ಅಧ್ಯಕ್ಷ ಸ್ಥಾನ ಬಿಜೆಪಿ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು

ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಅಧ್ಯಕ್ಷ ಸ್ಥಾನ ಬಿಜೆಪಿ ದಕ್ಕಿದರೆ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಆ ಮೂಲಕ ಉದ್ಯಾವರ ಗ್ರಾಪಂನಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿಯ ಹಿರಿಯ ಸದಸ್ಯ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ಬಹುಮತ ಇದ್ದರೂ ಮೀಸಲಾತಿಯಿಂದಾಗಿ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿ ಕಳೆದುಕೊಂಡಿತು. ಕಾಂಗ್ರೆಸ್ ಬೆಂಬಲಿತ ಮಧುಲತಾ ಶಶಿಧರ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಧಕೃಷ್ಣ ಶ್ರೀಯಾನ್ 17 […]

ಉಡುಪಿ: ನಾಳೆ ನಿವೇಶನದಾರರಿಂದ ಪ್ರತಿಭಟನೆ

udupixpress

ಉಡುಪಿ: ಉಡುಪಿ ನಗರಸಭೆ ಹಾಗೂ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮಗಳಲ್ಲಿ ಹಲವಾರು ಕೃಷಿ ಭೂಮಿ ಹಿಡುವಳಿಗಳನ್ನು ಖರೀದಿಸಿ ಭೂ ಪರಿವರ್ತನೆ ಮಾಡಿ ವಸತಿ ಬಡಾವಣೆಗಳನ್ನು ಮಾರ್ಪಡಿಸಿದ್ದರು. ಇದರಿಂದ ಸುಮಾರು 20 ಸಾವಿರಕ್ಕೂ ಅಧಿಕ ಸಂತ್ರಸ್ತರು ಕಳೆದ ವರ್ಷಗಳಿಂದ ಒಂದಲ್ಲ ಒಂದು ಕಾನೂನು ತೊಡಕಿನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಖರೀದಿಸಿ ಜಾಗದಲ್ಲಿ ಮನೆ ಕಟ್ಟಲು ಅಥವಾ ಮಾರಾಟ ಮಾಡಲು ಅಸಾಧ್ಯವಾಗಿದ್ದು, ಇದನ್ನು ಪರಿಹರಿಸುವಂತೆ ಆಗ್ರಹಿಸಿ ಸಂತ್ರಸ್ತರು ಮಂಗಳವಾರ (ಫೆ.16) ಬೆಳಿಗ್ಗೆ 10.30ಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ಪ್ರಕಟಣೆ […]

ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು: ಉಮೇಶ್ ಕತ್ತಿ

ಬೆಳಗಾವಿ: ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಡ್ ನ್ನು ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು. ಈ ಕುರಿತಂತೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇಂತಹ ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್‌ಗಳನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೂ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು […]

ಬ್ರಹ್ಮಾವರ: ಮಹಿಳೆಯ ಅನೈತಿಕ ಸಂಬಂಧ ಪ್ರಶ್ನಿಸಿದ ವ್ಯಕ್ತಿಯ ಬರ್ಬರ ಹತ್ಯೆ

ಬ್ರಹ್ಮಾವರ: ನೆರೆಮನೆಯ ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರ ಕರ್ಜೆ ಗುಡ್ಡೆಯಂಗಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತನನ್ನು ಕರ್ಜೆ ನವೀನ್ ನಾಯ್ಕ್ ಎಂದು ಗುರುತಿಸಲಾಗಿದೆ. ನವೀನ್ ನ ನೆರೆಮನೆಯ ಮಹಿಳೆಯ ಮನೆಗೆ ವ್ಯಕ್ತಿಯೊಬ್ಬ ಆಗಾಗ ಬರುತ್ತಿದ್ದು, ಅದನ್ನು ಈತ ಪ್ರಶ್ನಿಸಿದ್ದನು. ಇದರಿಂದ ಸಿಟ್ಟಿಗೆದ್ದ ಯುವಕ ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಬಂದು ನವೀನ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ನವೀನ್ ಮನೆಯವರು ಸಮಾರಂಭಕ್ಕೆ ತೆರಳಿದ್ದರು. ಇದೇ […]