ಮರ್ಣೆ ಗ್ರಾಪಂ: ಅಧ್ಯಕ್ಷರಾಗಿ ಜ್ಯೋತಿ ಪೂಜಾರಿ, ಉಪಾಧ್ಯಕ್ಷರಾಗಿ ಕುರುಂಬಿಲ ಹೆರ್ಮುಂಡೆ ಆಯ್ಕೆ
ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿಯ ಪ್ರಥಮ ಎರಡುವರೆ ವರ್ಷದ ಅವಧಿಗೆ ಅಧ್ಯಕ್ಷರಾಗಿ ಜ್ಯೋತಿ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಕುರುಂಬಿಲ ಹೆರ್ಮುಂಡೆ ಅವರು ಅವಿರೋಧವಾಗಿ ಆಯ್ಕೆಯಾದರು.
ಸರ್ಕಾರಿ, ಖಾಸಗಿ ಬಸ್ ಗಳ ದರ ಏಕಕಾಲದಲ್ಲಿ ಪರಿಷ್ಕರಿಸಿ: ರಾಜ್ಯ ಬಸ್ ಮಾಲೀಕರ ಒಕ್ಕೂಟ ಆಗ್ರಹ
ಉಡುಪಿ: ಡಿಸೇಲ್ ದರ ನಿರಂತರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಹಾಗೂ ಖಾಸಗಿ ಬಸ್ ಗಳ ದರ ಪರಿಷ್ಕರಣೆ ಏಕಕಾಲದಲ್ಲಿ ಮಾಡುವಂತೆ ರಾಜ್ಯ ಸರಕಾರಕ್ಕೆ ಕರ್ನಾಟಕ ರಾಜ್ಯ ಬಸ್ ಮಾಲೀಕರ ಒಕ್ಕೂಟ ಆಗ್ರಹಿಸಿದೆ. ಸರ್ಕಾರಿ ಸೌಮ್ಯದ ಬಿಎಂಟಿಸಿ, ಕೆಎಸ್ಆರ್ ಟಿಸಿ, ಎನ್ ಡಬ್ಲೂಕೆಆರ್ ಟಿಸಿ, ಎನ್ ಇಕೆಆರ್ ಟಿಸಿ ಬಸ್ ದರವನ್ನು ಶೇ. 20ರಷ್ಟು ಹೆಚ್ಚಳ ಮಾಡಬೇಕೆಂದು ಮನವಿಯನ್ನು ಸಲ್ಲಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಸ್ ಮಾಲೀಕರ ಒಕ್ಕೂಟವು ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಸಾರಿಗೆ ಸಚಿವರ ಮತ್ತು ಅಧಿಕಾರಿಗಳ […]
ಸಿದ್ದರಾಮಯ್ಯನವರ ದೇಶನಿಷ್ಠೆಯ ಬಗ್ಗೆ ಅನುಮಾನವಿದೆ: ಪೇಜಾವರ ಶ್ರೀ
ಉಡುಪಿ: ವಿವಾದಿತ ಸ್ಥಳದಲ್ಲಿ ನಿರ್ಮಾಣ ಆಗುತ್ತಿರುವ ರಾಮಮಂದಿರಕ್ಕೆ ನಾನು ದೇಣಿಗೆ ನೀಡುವುದಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಉಡುಪಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಪೇಜಾವರ ಮಠ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಸಿದ್ದರಾಮಯ್ಯನವರ ದೇಶನಿಷ್ಠೆಯ ಬಗ್ಗೆ ಅನುಮಾನವಿದೆ ಎಂದು ಹೇಳಿದ್ದಾರೆ. ನಾವು ಯಾರಿಗೂ ದೇಣಿಗೆ ನೀಡಿ ಎಂದು ಒತ್ತಾಯ ಮಾಡಿಲ್ಲ. ವಿಶ್ವದಾದ್ಯಂತ ದೇಣಿಗೆ ಕೊಡುವವರು ಸಂತೋಷದಿಂದ ಕೊಡುತ್ತಿದ್ದಾರೆ. ನೀವು ವಿವಾದಿತ ಸ್ಥಳ ಎನ್ನುತ್ತಿದ್ದೀರಿ. ಹಾಗಾದ್ರೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಒಪ್ಪುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಮಾಜಿ […]
ಉಡುಪಿ XPRESS “ದುರ್ಗಾ ಭಗವತೀ” ವಿಶೇಷ ಸಂಚಿಕೆ ಅನಾವರಣ
ಉಡುಪಿ: ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ ನೀಲಾವರದ ಬ್ರಹ್ಮಕಲಶೋತ್ಸವ ಸಂಭ್ರಮದ ಕುರಿತು ಉಡುಪಿ ಮೀಡಿಯಾ ನೆಟ್ವರ್ಕ್ ಉಡುಪಿXPRESS ಜಾಲತಾಣ ಪ್ರಕಟಿಸಿರುವ “ದುರ್ಗಾ ಭಗವತೀ” ವಿಶೇಷ ಸಂಚಿಕೆಯನ್ನು ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಮಂಗಳವಾರ ಅನಾವರಣಗೊಳಿಸಲಾಯಿತು. ಮಹಿಷಮರ್ದಿನಿ ದೇವಸ್ಥಾನ ನೀಲಾವರದ ಅಧ್ಯಕ್ಷರಾದ ರಘುರಾಮ ಮಧ್ಯಸ್ಥ,ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ ಸಂಚಿಕೆಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಸಂಪಾದಕರಾದ ಪ್ರಸಾದ್ ಶೆಣೈ, ವ್ಯವಸ್ಥಾಪಕ ಸಂಪಾದಕರಾದ ಜೀವೇಂದ್ರ ಶೆಟ್ಟಿ ಗರ್ಡಾಡಿ, ಮಾರುಕಟ್ಟೆ ವಿಭಾಗದ ಸ್ವರೂಪ್ ಶ್ರೀಯನ್, ಅಶೋಕ್ ಆಚಾರ್ಯ ಕೊಂಡಾಡಿ ಉಪಸ್ಥಿತರಿದ್ದರು.
ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ: ಭಾಗೀರತಿ ಮುಳ್ಳೇರಿಯ
ಉಡುಪಿ: ಹಿರಿಯರ ತ್ಯಾಗ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ವಿಶ್ವದ ಅತೀ ದೊಡ್ಡ ಯಶಸ್ವಿ ರಾಜಕೀಯ ಪಕ್ಷವೆನಿಸಿದೆ. ರಾಜ್ಯದಿಂದ ಕಾಲ ಕಾಲಕ್ಕೆ ಬರುವ ನಿರ್ದೇಶನದಂತೆ ಪಕ್ಷದ ಸಂಘಟನಾತ್ಮಕ ವಿಚಾರಗಳನ್ನು ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಮೂಲಕ ಕಟ್ಟ ಕಡೆಯ ಕಾರ್ಯಕರ್ತರಿಗೂ ತಲುಪಿಸುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಜಿಲ್ಲಾ ಮಹಿಳಾ ಮೋರ್ಚಾದ ಪ್ರಭಾರಿ ಭಾಗೀರತಿ ಮುಳ್ಳೇರಿಯ ಹೇಳಿದರು. ಬಿಜೆಪಿ ಉಡುಪಿ ಜಿಲ್ಲಾ […]