ಕೆರಾಡಿ ಗ್ರಾಪಂ: ಕಾಂಗ್ರೆಸ್‌ಗೆ ಒಲಿದ ಅಧ್ಯಕ್ಷ ಪಟ್ಟ

ಕುಂದಾಪುರ: ಕೆರಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಸಮಾನ ಮತ ಬಿದ್ದ ಹಿನ್ನೆಲೆಯಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುದರ್ಶನ್ ಬಿ.ಆರ್. ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ. 14 ಸದಸ್ಯ ಬಲದ ಕೆರಾಡಿ ಗ್ರಾಪಂನಲ್ಲಿ 8 ಬಿಜೆಪಿ ಹಾಗೂ 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಮತದಾನದ ವೇಳೆ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರು ಕಾಂಗ್ರೆಸ್‌ಗೆ […]

ಕಾಡೂರು ಗ್ರಾಪಂ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಟೈ: ಪಾಂಡುರಂಗ ಶೆಟ್ಟಿ-ಅಮಿತಾಗೆ ಒಲಿದ ಅದೃಷ್ಟ

ಬ್ರಹ್ಮಾವರ: ಕಾಡೂರು-ನಡೂರು ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಮಾನ ಮತಗಳು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಪಾಂಡುರಂಗ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಪಕ್ಷೇತರ ಸದಸ್ಯೆ ಅಮಿತಾ ರಾಜೇಶ್ ಆಯ್ಕೆಯಾದರು. ಇವರಿಬ್ಬರೂ ನಡೂರು ಎರಡನೇ ವಾರ್ಡಿನ ಸದಸ್ಯರಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಪಾಂಡುರಂಗ ಶೆಟ್ಟಿ ಮತ್ತು ರಘುರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮಿತಾ ಮತ್ತು ಪ್ರಭಾವತಿ ನಾಮಪತ್ರ ಸಲ್ಲಿಸಿದ್ದರು.

ವಿಶ್ವಹಿಂದೂ ಪರಿಷತ್‌ ಪುಂಡ ಪೋಕರಿಗಳ ಸಂಸ್ಥೆಯಲ್ಲ: ಪೇಜಾವರ ಶ್ರೀ

ಉಡುಪಿ: ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧಿಕೃತವಾಗಿ ನೋಂದಣಿ ಆಗಿರುವ ಸಂಸ್ಥೆ. ಅದು ಬೇನಾಮಿ ಸಂಸ್ಥೆಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಆಧಾರ ರಹಿತ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಬುಧವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಶ್ವಹಿಂದೂ ಪರಿಷತ್‌ ಪುಂಡ ಪೋಕರಿಗಳ ಸಂಸ್ಥೆಯಲ್ಲ. ವಿಶ್ವ ಹಿಂದೂ ಪರಿಷತ್‌ಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹದ ಜವಾಬ್ದಾರಿ ನೀಡಲಾಗಿದೆ. ಹಿರಿಯ ಮುಂದಾಳುಗಳ […]

ಕೊಕ್ಕರ್ಣೆ: ಫೆ. 21ರಂದು ಉಚಿತ ವೈದ್ಯಕೀಯ ತಪಾಸಣೆ

ಉಡುಪಿ: ಕೊಕ್ಕರ್ಣೆ ನಿರಂತರ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳ ಆರೋಗ್ಯ ಕ್ಷೇತ್ರದ ಯೋಜನೆಯ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸಲಕರಣೆ ಹಾಗೂ ಉಚಿತ ಶಸ್ತ್ರಚಿಕಿತ್ಸೆಯು ಕೊಕ್ಕರ್ಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಫೆ. 21ರಂದು ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ನಡೆಯಲಿದೆ ಎಂದು ಟ್ರಸ್ಟ್ ಸ್ಥಾಪಕಾಧ್ಯಕ್ಷ ನಿರಂಜನ್ ಶೆಟ್ಟಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬೆಳಗ್ಗೆ 10ಕ್ಕೆ ಬಾರ್ಕೂರಿನ ಭಂಡಾರಕೇರಿ ಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು ಉದ್ಘಾಟಿಸಿವರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ […]

ಸಿದ್ದರಾಮಯ್ಯ, ಎಚ್ ಡಿಕೆಗೆ ಶ್ರೀರಾಮನೇ ಬುದ್ಧಿ ಕೊಡಲಿ: ಸಚಿವ ಕೋಟ

ಉಡುಪಿ: ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಶ್ರೀರಾಮನೇ ಬುದ್ಧಿ ಕೊಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕೋಟದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹದ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು. ಸುಪ್ರೀಂ ಕೋರ್ಟ್ ರಾಮಮಂದಿರ ನಿರ್ಮಾಣಕ್ಕೆ ಅಸ್ತು ಎಂದಿದೆ. ಅದರ ಹೊರತಾಗಿಯೂ ಜವಾಬ್ದಾರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆ […]