ಉಡುಪಿ: ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ

ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮುಂಡ್ಲಿ ಡ್ಯಾಮ್ನಿಂದ ಹೂಳೆತ್ತುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಸ್ಯಾಂಡ್ ಆ್ಯಪ್ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಮರಳು ಪಡೆದುಕೊಳ್ಳಲು ಇಚ್ಚಿಸುವವವರು ಉಡುಪಿ ಇ-ಸ್ಯಾಂಡ್ ಆ್ಯಪ್ ಮುಖಾಂತರ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಅಥವಾ ದೂರವಾಣಿ ಸಂಖ್ಯೆ 0820 2572 333 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ: ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಸದ್ಯ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಕೊರೊನಾ ಎರಡನೇ ಅಲೆ ತಟ್ಟಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೊನಾ ಎರಡನೇ ಅಲೆ ಹರಡುವ ಮುನ್ಸೂಚನೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸಂಭವವಿದೆ ಎನ್ನಲಾಗುತ್ತಿತ್ತು. ಆದರೆ ಅದಕ್ಕೆ ಸಚಿವ […]
ಉಡುಪಿ: ಬೋಟ್ ಮಗುಚಿ ಓರ್ವ ಮೀನುಗಾರ ಮೃತ್ಯು

ಉಡುಪಿ: ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆ ಬಂದರಿನಿಂದ 26 ನಾಟಿಕಲ್ ಮೈಲು ದೂರದಲ್ಲಿ ಸಂಭವಿಸಿದೆ. ಕಲ್ಯಾಣಪುರ ನಿವಾಸಿ ವಿಶ್ವನಾಥ್ (48) ಮೃತ ದುರ್ದೈವಿ. ಇವರು ಫೆ. 16ರಂದು ಸಂಜೆ ಮಲ್ಪೆ ಬಂದರಿನಿಂದ ಮಹಾಬಲೇಶ್ವರ ಬೋಟ್ ನಲ್ಲಿ ಇತರ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು. ಫೆ.17ರಂದು ಬೆಳಿಗ್ಗೆ 4.15 ಸುಮಾರಿಗೆ ಮಲ್ಪೆ ಬಂದರಿನಿಂದ 26 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೈತ್ಯಾಕಾರದ ಅಲೆ ಬಡಿದು ಬೋಟ್ ಮಗುಚಿದ್ದು, ಈ […]
ಉಡುಪಿ: ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅವನು ಹೆಣ್ಣಾಗಬೇಕು’ ಕೃತಿ ಬಿಡುಗಡೆ ಇಂದು

ಉಡುಪಿ: ಸಾಹಿತಿ ಹಾಗೂ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಕವನ ಸಂಕಲನ ‘ಅವನು ಹೆಣ್ಣಾಗಬೇಕು’ ಕೃತಿ ಬಿಡುಗಡೆ ಸಮಾರಂಭ ಉಡುಪಿ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಇಂದು (ಫೆ. 20) ಸಂಜೆ 5 ಗಂಟೆಗೆ ನಡೆಯಲಿದೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕನ್ನಡದ ಹಿರಿಯ ಸಾಹಿತಿ ನಾಟಕಗಾರ ಎಸ್.ಎನ್. ಸೇತುರಾಂ ಕೃತಿ ಬಿಡುಗಡೆ ಮಾಡಲಿದ್ದಾರೆ. ಚಲನಚಿತ್ರ ಹಾಗೂ ನಾಟಕ ನಿರ್ದೇಶಕ ಕಾಸರಗೋಡು ಚಿನ್ನಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ […]