ಕೆಥೊಲಿಕ್ ಸಭಾ ಸಾಸ್ತಾನ ಘಟಕ: ನೂತನ ಅಧ್ಯಕ್ಷರಾಗಿ ಸಿಂತಿಯಾ ಡಿಸೋಜಾ ಪುನರಾಯ್ಕೆ
ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಸಂತ ಅಂತೋನಿ ದೇವಾಲಯ ಸಾಸ್ತಾನ ಘಟಕದ 2021-22 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿಂತಿಯಾ ಡಿಸೋಜಾ ಅವರು ಪುನರಾಯ್ಕೆಯಾಗಿದ್ದಾರೆ. ಭಾನುವಾರ ಚರ್ಚಿನ ಪಾದ್ವಾ ಸಭಾಂಗಣದಲ್ಲಿ ಕೆಥೊಲಿಕ್ ಸಭಾದ ಸದಸ್ಯರ ಹಾಜರಾತಿಯೊಂದಿಗೆ ನೂತನ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆ ನಡೆಯಿತು. ಇತರ ಪಧಾದಿಕಾರಿಗಳಾಗಿ ಈ ಕೆಳಗಿನವರು ಆಯ್ಕೆಯಾದರು. ಆಧ್ಯಾತ್ಮಿಕ ನಿರ್ದೇಶಕ ಜಾನ್ ವಾಲ್ಟರ್ ಮೆಂಡೊನ್ಸಾ, ನಿಯೋಜಿತ ಅಧ್ಯಕ್ಷರಾಗಿ ಐವನ್ ಡಿ’ಆಲ್ಮೇಡಾ, ಉಪಾಧ್ಯಕ್ಷರಾಗಿ ಮೈಕಲ್ ರೊಡ್ರಿಗಸ್, ಕಾರ್ಯದರ್ಶಿಯಾಗಿ ಜಾನೆಟ್ ಬಾಂಜ್, ಸಹಕಾರ್ಯದರ್ಶಿಯಾಗಿ ಜೆನವಿವ್ […]
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿನಿವಾಸ ನಿರ್ಮಾಣಕ್ಕೆ ಭೂಮಿ ಒದಗಿಸಲು ಯೋಗಿ ಆದಿತ್ಯನಾಥರಿಗೆ ಸಚಿವ ಕೋಟ ಮನವಿ
ಉಡುಪಿ: ಕೇರಳದ ಕಾಸರಗೋಡಿಗೆ ಚುನಾವಣೆಯ ಪ್ರಚಾರ ನಿಮಿತ್ತ ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರಕ್ಕೆ ಭೇಟಿ ನೀಡುವ ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿನಿವಾಸ ಒಂದನ್ನು ನಿರ್ಮಾಣ ಮಾಡಲು ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. […]
ನಾಳೆ ಮಾಜಿ ಸಿಎಂ ಸಿದ್ದರಾಮಯ್ಯ ಉಡುಪಿಗೆ ಭೇಟಿ
ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಫೆ.22) ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪಡುಬಿದ್ರಿ ಪೇಟೆಯಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಹಮ್ಮಿಕೊಂಡಿರುವ ‘ಜನಧ್ವನಿ ಪಾದಯಾತ್ರೆ’ಯ ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸುವರು. ಬಳಿಕ ಪರ್ಕಳ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಪವರ್ ಲಿಫ್ಟಿಂಗ್ ಚಾಂಪಿಯನ್: ಪ್ರದೀಪ್ ಕುಮಾರ್ ಗೆ ಒಂದು ಚಿನ್ನ ಸಹಿತ ಮೂರು ಪದಕ
ಮಂಗಳೂರು: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಫೆ. 17ರಿಂದ 21ರ ವರೆಗೆ ನಡೆದ ಸೀನಿಯರ್ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್-2021ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ ಅವರು 83 ಕೆಜಿ ದೇಹತೂಕ ವಿಭಾಗದಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕವನ್ನು ಗಳಿಸಿದ್ದಾರೆ. ಇವರು ಸ್ಕ್ವಾಟ್ ವಿಭಾಗದಲ್ಲಿ 312.5 ಕೆ.ಜಿ., ಬೆಂಚ್ ಪ್ರೆಸ್ ವಿಭಾಗದಲ್ಲಿ 220 ಕೆ.ಜಿ., ಡೆಡ್ ಲಿಫ್ಟ್ ವಿಭಾಗದಲ್ಲಿ 275 ಕೆ.ಜಿ. ಸೇರಿ ಒಟ್ಟು 807 ಕೆ.ಜಿ. ಭಾರ […]
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧೆಗೆ ಮಲ್ಪೆಯ ರೋಶಿನಿ ಆಯ್ಕೆ
ಉಡುಪಿ: ಜೀ ಕನ್ನಡ ವಾಹಿನಿಯಲ್ಲಿ ನಡೆಯುತ್ತಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋಗೆ ಮಲ್ಪೆಯ ರೋಶಿನಿ ಸ್ಪರ್ಧಿಯಾಗಿ ಆಯ್ಕೆಯಾಗಿದ್ದಾರೆ. ಇವರು ಮಲ್ಪೆ ಬೈಲಕೆರೆಯ ಉಷಾ ಹಾಗೂ ಯುವರಾಜ್ ದಂಪತಿಯ ಪುತ್ರಿ. ಬೆಂಗಳೂರು ಮಲ್ಲೇಶ್ವರಂನ ವಿದ್ಯಾ ಮಂದಿರ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯಾಗಿರುವ ಇವರು, ಸುಮಾರು ಐದು ವರ್ಷಗಳಿಂದ ನಾಟ್ಯಶ್ವರ ನೃತ್ಯ ಸಂಘದ ಮಾಸ್ಟರ್ ಕೆ.ಪಿ.ಸತೀಶ್ ಬಾಬು ಅವರಲ್ಲಿ ಭರತ ನಾಟ್ಯವನ್ನು ಮತ್ತು ಸುಮಾರು ಒಂದೂವರೆ ವರ್ಷಗಳಿಂದ ಪಾಶ್ಚಾತ್ಯ ನೃತ್ಯದ ವಿವಿಧ ಪ್ರಕಾರಗಳನ್ನು ಗಾಯತ್ರಿನಗರದ ರಾಕ್ ಬ್ರೇಕರ್ಸ್ ಡ್ಯಾನ್ಸ್ ಅಕಾಡೆಮಿ […]