ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ: ಸಿಎಂ ಸ್ಥಾನಕ್ಕೆ ವಿ.ನಾರಾಯಣಸ್ವಾಮಿ ರಾಜೀನಾಮೆ
ಪುದುಚೇರಿ: ಇಬ್ಬರು ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದಿದ್ದ ಸಿಎಂ ನಾರಾಯಣ ಸ್ವಾಮಿ ನೇತೃತ್ವದ ಪುದುಚೇರಿ ಕಾಂಗ್ರೆಸ್ ಸರ್ಕಾರ ವಿಶ್ವಾಸಮತಯಾಚನೆಯಲ್ಲಿ ಬಹುಮತ ಸಾಬೀತುಪಡಿಸಲು ವಿಫಲವಾಗಿದ್ದು, ಇದರಿಂದ ಸರ್ಕಾರ ಪತನಗೊಂಡಿದೆ. ಕಾಂಗ್ರೆಸ್ ಶಾಸಕ ಲಕ್ಷ್ಮೀನಾರಾಯಣನ್ ಮತ್ತು ಡಿಎಂಕೆ ಶಾಸಕ ವೆಂಕಟೇಶನ್ ಅವರ ರಾಜೀನಾಮೆ ಬಳಿಕ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಎಂ ನಾರಾಯಣ ಸ್ವಾಮಿ ವಿಶ್ವಾಸ ಮತಯಾಚನೆ ಮಾಡಬೇಕಿತ್ತು. ಆದರೆ ಬಹುಮತ ಸಾಬೀತುಪಡಿಸುವಲ್ಲಿ ನಾರಾಯಣ ಸ್ವಾಮಿ ವಿಫಲರಾದರು. ಸರ್ಕಾರ ಉಳಿಸಿಕೊಳ್ಳುವ ನಾರಾಯಣ ಸ್ವಾಮಿ ಪ್ರಯತ್ನ ಕಡೆಗೂ ಫಲ ನೀಡಲಿಲ್ಲ. […]
ಉದ್ಯಾವರ, ಕಡೆಕಾರು, ಅಲೆವೂರು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ
ಉದ್ಯಾವರ: ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ 46ನೇ ಕಾರ್ಯಕ್ರಮವಾದ ಕ್ರೀಡಾ ಕೂಟದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ, ಉಪಾಧ್ಯಕ್ಷೆ ಮಧುಲತಾ ಶಶಿಧರ್, ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ನವೀನ್ ಶೆಟ್ಟಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷ ಸುಧಾಕರ ಪೂಜಾರಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಮಾತಾನಾಡಿ, ಐಸಿವೈಎಂ […]
ಕಾಪು: ಟ್ಯೂಬ್‌ನಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು
ಕಾಪು: ಟ್ಯೂಬ್‌ನ ಸಹಾಯದಿಂದ ಬಲೆ ಹಾಕಿ ಮೀನುಗಾರಿಕೆ ಮಾಡಲು ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಸಮುದ್ರದ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಾಪು ತಾಲೂಕಿನ ಪೊಲಿಪು ಪಡುಗ್ರಾಮ ಎಂಬಲ್ಲಿ ನಡೆದಿದೆ. ಮೃತರನ್ನು ಪೊಲಿಪು ಪಡುಗ್ರಾಮದ ಲಕ್ಷ್ಮೀನಾರಾಯಣ ಭಜನಾ ಮಂದಿರ ಬಳಿಯ ನಿವಾಸಿ ಮನೋಜ್ (45) ಎಂದು ಗುರುತಿಸಲಾಗಿದೆ. ಇವರು ಫೆ. 20ರಂದು ಮಧ್ಯಾಹ್ನ 2.45ಕ್ಕೆ ಸುಮಾರಿಗೆ ಮನೆಯಿಂದ ಟ್ಯೂಬ್‌ನಲ್ಲಿ ಬಲೆ ಕಟ್ಟಿಕೊಂಡು ಮೀನುಗಾರಿಕೆಗೆ ಹೋಗಿದ್ದರು. ಕಾಪು ಲೈಟ್ ಹೌಸ್‌ನ ಹತ್ತಿರ ಸಮುದ್ರಕ್ಕೆ ಇಳಿದವರು ಮತ್ತೆ ವಾಪಾಸ್ ಬಂದಿರಲಿಲ್ಲ. ಮರುದಿನ […]