ಯಕ್ಷಕಲಾ ರಂಗ ಕಡ್ತಲ: ಬಡಗುತಿಟ್ಟಿನ ಯಕ್ಷಗಾನ ತರಬೇತಿ ಕಾರ್ಯಕ್ರಮ

ಕಾರ್ಕಳ: ಯಕ್ಷಕಲಾ ರಂಗ ಕಡ್ತಲ ಇದರ ವತಿಯಿಂದ ವಿಷ್ಣು ತೆಂಡೂಲ್ಕರ್ ಕಾಜರಗುತ್ತು, ರಮೇಶ್ ನಾಯಕ್ ಮತ್ತು ಜಗದೀಶ್ ನಾಯಕ್ ಅವರ ನಿರ್ದೇಶನದಲ್ಲಿ ಬಡಗುತಿಟ್ಟಿನ ಯಕ್ಷಗಾನ ತರಬೇತಿ ಕಾರ್ಯಕ್ರಮವು ಈಚೆಗೆ ಕಡ್ತಲ ಸಿರಿಬೈಲು ಬರ್ಭರೇಶ್ವರ ಸಭಾಂಗಣದಲ್ಲಿ ನಡೆಯಿತು . ಹಿರಿಯ ನಿವೃತ್ತ ಉಪನ್ಯಾಸಕ ಕರುಣಾಕರ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಕ್ಷಗಾನ ಕಲೆಗೆ ತರಬೇತಿ ನೀಡಿ ಕಲೆಯನ್ನು ಉಳಿಸುವ ಕಾರ್ಯ ಶ್ಲಾಘನೀಯವಾದುದು ಎಂದರು. ಮಾಜಿ ಗ್ರಾಪಂ ಅಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಕಡ್ತಲ ಕರಾವಳಿ ಪ್ರಾಧಿಕಾರದ ಸದಸ್ಯ ಸಂಜೀವ […]

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಾಬೀತು

ಉಡುಪಿ: ಐದು ವರ್ಷಗಳ ಹಿಂದೆ ಕುಂದಾಪುರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ‌ ಮೇಲಿನ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬೆದರಿಕೆ ಹಾಕಿದ್ದ ಪ್ರಕರಣ ಸಾವೀತು ಆದ ಹಿನ್ನೆಲೆಯಲ್ಲಿ ಆರೋಪಿ ಕೇಶವ್ ಎಂಬಾತ ಅಪರಾಧಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶ ಯಾದವ್ ವನಮಾಲಾ ಆನಂದರಾವ್ ಆದೇಶಿಸಿದ್ದಾರೆ. 2016ರಲ್ಲಿ ಉಡುಪಿ ಜಿಲ್ಲೆಯ ಶಿರಿಯಾರ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. 15 ವರ್ಷ ಪ್ರಾಯದ ಬಾಲಕಿ‌ ಅನಾರೋಗ್ಯದ […]

ಕಾಡುಹೊಳೆ ಮಧುವನದಲ್ಲಿ ಕಲಾ ಕಲರವ ಸಮಾರೋಪ ಸಮಾರಂಭ

ಕಾರ್ಕಳ: ಕಲೆ ಬದುಕಿನಲ್ಲಿ ಸೌಂದರ್ಯ ಪ್ರಜ್ಞೆಯನ್ನು ಹೆಚ್ಚಿಸುತ್ತದೆ. ಚಿತ್ರಗಳು-ಬಣ್ಣಗಳು ಮನಸ್ಸನ್ನು ಪ್ರಶಾಂತಗೊಳಿಸುವುದು ಮಾತ್ರವಲ್ಲದೆ, ನಮ್ಮೊಳಗಿನ ಅಂತಃಶಕ್ತಿಯನ್ನು ಜಾಗೃತಗೊಳಿಸಿ ಕಷ್ಟಗಳನ್ನು ಎದುರಿಸುವ ಧೈರ್ಯವನ್ನು ನೀಡುತ್ತದೆ ಎಂದು ಮುನಿಯಾಲು ಕಾಡುಹೊಳೆ ಜನಪ್ರಿಯ ರೈಸ್ ಕಾರ್ಪರೇಷನ್ ಪಾಲುದಾರ ಕೆ.ಮಂಜುನಾಥ್ ಹೇಳಿದರು. ಜನಪ್ರಿಯ ರೈಸ್ ಕಾರ್ಪರೇಷನ್ ಪ್ರಾಯೋಜಕತ್ವದಲ್ಲಿ ಕಾಡುಹೊಳೆ ಮಧುವನದಲ್ಲಿ ನಡೆದ 25 ದಿನಗಳ, ಸ್ಥಳೀಯ ಬಡ ವಿದ್ಯಾರ್ಥಿಗಳಿಗೆ ಉಚಿತ ಚಿತ್ರಕಲೆ ಮತ್ತು ಬೌದ್ಧಿಕ ಸಾಮರ್ಥ್ಯ ವೃದ್ಧಿ ತರಗತಿಯ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಇನ್ನೋರ್ವ ಪಾಲುದಾರರಾದ […]

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ರೇಂಜರ್- ರೋವರ್ ವಿದ್ಯಾರ್ಥಿಗಳಿಂದ ಅನಾಥಾಶ್ರಮಕ್ಕೆ ಭೇಟಿ: ಹಣ್ಣು ಹಂಪಲು ವಿತರಣೆ

ಉಡುಪಿ: ವಿಶ್ವ ಚಿಂತನಾ, ವಿಶ್ವ ಭಾತೃತ್ವ ಹಾಗೂ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ರೇಂಜರ್ ಮತ್ತು ರೋವರ್ ಘಟಕದ 60 ವಿದ್ಯಾರ್ಥಿಗಳು ಬ್ರಹ್ಮಾವರದ ‘ಅಪ್ಪ ಅಮ್ಮ’ ಅನಾಥಾಲಯಕ್ಕೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದರು. ಹಾಗೆ, ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿ, ಹಣ್ಣು ಹಂಪಲು ಹಾಗೂ ದಿನಸಿ ವಸ್ತುಗಳನ್ನು ಆಶ್ರಮಕ್ಕೆ ವಿತರಿಸಿದರು. ಈ ದೇಣಿಗೆಗೆ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ಜತೆಗೆ ಕಾಲೇಜಿನ ಇತರ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕೈಜೋಡಿಸಿದರು. ಈ ಸಂದರ್ಭದಲ್ಲಿ […]

‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ: ಪೇಜಾವರ ಶ್ರೀ ಖಂಡನೆ

ಉಡುಪಿ: ನಂದಕಿಶೋರ್ ನಿರ್ದೇಶನದ ‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವುದಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಚಿತ್ರದ ಅನೇಕ ದೃಶ್ಯಗಳಲ್ಲಿ ಬ್ರಾಹ್ಮಣರನ್ನು ತೀರಾ ಅವಮಾನಿಸಲಾಗಿದ್ದು, ಇದರಿಂದ ಬ್ರಾಹ್ಮಣರ ಭಾವನೆಗಳಿಗೆ ತೀರಾ ನೋವಾಗಿದೆ. ಇಂಥಹ ಬೆಳವಣಿಗೆಗಳು ಅಸಹನೀಯವಾಗಿದೆ. ಕೇವಲ ಬ್ರಾಹ್ಮಣರನ್ನು ಮಾತ್ರವಲ್ಲ, ಯಾವುದೇ ಜಾತಿ ಸಮುದಾಯಗಳನ್ನು ನಿಂದಿಸುವ ಅವಮಾನಿಸುವ ಪ್ರವೃತ್ತಿ ಸಲ್ಲದು. ಈ ಮೂಲಕ ಮನೋರಂಜನೆ ನೀಡುತ್ತೇವೆ ಅನ್ನೋ ಭ್ರಮೆಯಿಂದ ಚಿತ್ರರಂಗ ಹೊರಬರಬೇಕು ಎಂದರು. ತಕ್ಷಣವೇ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮಾಜವನ್ನು ನಿಂದಿಸುವ ದೃಶ್ಯಗಳನ್ನು […]