ಉಡುಪಿ: ವಾಹನ ಪಾರ್ಕಿಂಗ್‌ಗೆ ಮೀಸಲಿರಿಸಿದ ಸ್ಥಳದಲ್ಲಿರುವ ವಾಣಿಜ್ಯ ಅಂಗಡಿಗಳನ್ನು ತೆರವುಗೊಳಿಸಲು ಸೂಚನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಬಹುಮಹಡಿ ಕಟ್ಟಡ ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಅನುಮೋದಿತ ನಕ್ಷೆಯಲ್ಲಿರುವಂತೆ ವಾಹನ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸಬೇಕಾಗಿರುತ್ತದೆ. ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಬಹುಮಹಡಿ ಕಟ್ಟಡ ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ವಾಹನ ಪಾರ್ಕಿಂಗ್‌ಗಾಗಿ ಮೀಸಲಿರಿಸಿದ ಸ್ಥಳಗಳಲ್ಲಿರುವ ವಾಣಿಜ್ಯ ಅಂಗಡಿಗಳನ್ನು ತೆರವುಗೊಳಿಸುವಂತೆ ನಗರಸಭೆ ಪೌರಾಯುಕ್ತರು ಸೂಚನೆ ನೀಡಿದ್ದಾರೆ. ತಪ್ಪಿದ್ದಲ್ಲಿ ಸದರಿ ಸಮುಚ್ಛಯಗಳಿಗೆ ನೀಡಲಾದ ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸಲಾಗುವುದು. ಹಾಗೆ ತಪ್ಪು ಮಾಹಿತಿ ನೀಡಿ ಪಡೆಯಲಾದ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ಅಕ್ರಮವಾಗಿ ಪಾರ್ಕಿಂಗ್ ಜಾಗದಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು […]
ಉಡುಪಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ
ಉಡುಪಿ: ಬಿಜೆಪಿ ಉಡುಪಿ ನಗರ ಹಾಗೂ ನಗರ ಬಿಜೆಪಿಯ ಎಲ್ಲಾ ಮೋರ್ಚಾಗಳ ಸಹಭಾಗಿತ್ವದಲ್ಲಿ ಶಾಸಕ ಕೆ.ರಘುಪತಿ ಭಟ್ ಅವರ ಜನ್ಮದಿನದ ಪ್ರಯುಕ್ತ ಇಂದು ಕೆಎಂಸಿ ಆಸ್ಪತ್ರೆಯಲ್ಲಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಪಂ ಅಧ್ಯಕ್ಷ ದಿನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಜಿಲ್ಲಾ ಮಹಿಳಾ […]
ಹೆಬ್ರಿ: ಲಾರಿಯೊಂದಿಗೆ ಚಾಲಕ ನಾಪತ್ತೆ
ಹೆಬ್ರಿ: ಸರಕು ಸಾಗಾಟದ ಲಾರಿಯೊಂದಿಗೆ ಚಾಲಕನೊಬ್ಬ ನಾಪತ್ತೆಯಾದ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯನ್ನು ಧಾರವಾಡ ಜಿಲ್ಲೆಯ ಆದರ್ಶ ನಗರ ಚಿಕ್ಕಮಲ್ಲಿಗವಾಡ ರಸ್ತೆಯ ನಿವಾಸಿ ಬಸವರಾಜ್ ಶಿವಪ್ಪ ಬದ್ರಶೆಟ್ಟಿ (27) ಎಂದು ಗುರುತಿಸಲಾಗಿದೆ. ಇವರು ಒಂದು ತಿಂಗಳಿಂದ ಧಾರವಾಡ ಜಿಲ್ಲೆಯ ಕರಡಿಕೊಪ್ಪ ನಿವಾಸಿ ಶಿವಾನಂದ ಮಾಲೀಕತ್ವದ (KA-26-A-0761) ನೋಂದಣಿ ಸಂಖ್ಯೆಯ ಟಾಟಾ1109 ಲಾರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಫೆ. 19ರಂದು ಲಾರಿಯಲ್ಲಿ ಧಾರವಾಡದ ಬೇಲೂರು ಇಂಡಸ್ಟೀಸ್ ಏರಿಯದ ಸೌರ್ತನ್ ಪೆರೋ ಸ್ಟೀಲ್ ಲಿಮಿಟೆಡ್ […]
ಮಾದಕ ವ್ಯಸನ ಸಮಾಜಕ್ಕೆ ಮಾರಕ: ಆಪ್ತ ಸಮಾಲೋಚಕ ಲೋಹಿತ್ ಕೆ.
ಉಡುಪಿ: ಮಾದಕ ವಸ್ತುಗಳ ಸೇವನೆ ಎನ್ನುವುದು ವ್ಯಕ್ತಿಗೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮಾರಕವಾಗಿದೆ. ಇಂದು ಸಮಾಜದಲ್ಲಿ ಅತ್ಯಾಚಾರ, ಕೊಲೆ ಹಾಗೂ ವಿವಾಹ ವಿಚ್ಛೇದನದಂತಹ ಪ್ರಕರಣಗಳು ಹೆಚ್ಚಾಗಲು ಇದೇ ಕಾರಣ. ಹದಿಹರೆಯದ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿ ಸಮಾಜ ಘಾತಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ ಎಂದು ದೊಡ್ಡಣಗುಡ್ಡೆ ಡಾ. ಎ.ವಿ. ಬಾಳಿಗಾ ಆಸ್ಪತ್ರೆಯ ಮನೋರೋಗ ವಿಭಾಗದ ಆಪ್ತ ಸಮಾಲೋಚಕ ಲೋಹಿತ್ ಕೆ. ಕಳವಳ ವ್ಯಕ್ತಪಡಿಸಿದರು. ಶಿರ್ವ ಸಂತಮೇರಿ ಕಾಲೇಜಿನ ವ್ಯಸನಮುಕ್ತ ಕೋಶ ಮತ್ತು ಐಕ್ಯೂಎಸಿ ಇದರ ನೇತೃತ್ವದಲ್ಲಿ ಕಾಲೇಜಿನಲ್ಲಿ ಮಂಗಳವಾರ […]
ನಟ ಜಗ್ಗೇಶ್ ಕ್ಷಮೆಯಾಚಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು: ನಟ ಜಗ್ಗೇಶ್ ಅವರಿಗೆ ನನ್ನ ಅಭಿಮಾನಿಗಳು ಮುತ್ತಿಗೆ ಹಾಕಿದ್ದು ಗೊತ್ತಿರಲಿಲ್ಲ. ನನ್ನ ಅಭಿಮಾನಿಗಳಿಂದ ಜಗ್ಗೇಶ್ ಸರ್ ಗೆ ಬೇಜಾರಾಗಿದ್ದಾರೆ ಕ್ಷಮೆಯಾಚಿಸುತ್ತೇನೆ. ಅವರು ನಮ್ಮ ಹಿರಿಯರು, ಅವರು ಮುಂದೆ ಇರಬೇಕು ಎನ್ನುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟ ಜಗ್ಗೇಶ್ ಜತೆ ಅಭಿಮಾನಿಗಳ ಸಂಘರ್ಷ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಕನ್ನಡದ ಖಾಸಗಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ದರ್ಶನ್ ಅವರು ಜಗ್ಗೇಶ್ ಅವರ ಕ್ಷಮೆಯಾಚಿಸಿದ್ದಾರೆ. ಈ ಗಲಾಟೆ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಬಂದಿದ್ದರೆ ಅವತ್ತೇ ಜಗ್ಗೇಶ್ […]