ಕ್ರೀಡೆಯಿಂದ ಆತ್ಮವಿಶ್ವಾಸ ವೃದ್ಧಿ- ದಿನಕರ ಬಾಬು
ಉಡುಪಿ: ಕ್ರೀಡೆಯಲ್ಲಿ ಸೋಲು ಗೆಲುವುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಿಂದ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅವರು ಸೋಮವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್ ಇವರ […]
ಕಾಂಗ್ರೆಸ್ ಮುಖಂಡ ರಮೇಶ್ ಶೆಟ್ಟಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಕಾಂಗ್ರೆಸ್ ಆಗ್ರಹ
ಉಡುಪಿ: ಕಾಂಗ್ರೆಸ್ ಮುಖಂಡ, ಗ್ರಾಪಂ ಹಾಲಿ ಸದಸ್ಯ ಎನ್. ರಮೇಶ್ ಶೆಟ್ಟಿ ಕುಕ್ಕೆಹಳ್ಳಿ ಅವರಿಗೆ ಜೀವ ಬೆದರಿಕೆ ಹಾಕಿ ಮನೆ, ಕಾರಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ವಿಷ್ಣುವರ್ಧನ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ರಮೇಶ್ ಶೆಟ್ಟಿಗೆ ಬೆದರಿಕೆ ಮತ್ತು ಕಾರು, ಮನೆಗೆ ಹಾನಿ ಮಾಡಿರುವ ಆರೋಪಿಗಳನ್ನು ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕೈ ನಾಯಕರು ಒತ್ತಾಯಿಸಿದರು. ಈ ವೇಳೆ ಜಿಲ್ಲಾ ಪಂಚಾಯಿತಿ […]
ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಆರೋಗ್ಯವಾಗಿದ್ದಾರೆ; ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ
ಮಣಿಪಾಲ: ಹೊನ್ನಾವರ ಹಡಿಬಾಳದ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಖ್ಯಾತ ಯಕ್ಷಗಾನ ಕಲಾವಿದ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ. ಸುಬ್ರಹ್ಮಣ್ಯ ಚಿಟ್ಟಾಣಿಯವರ ಅಭಿಮಾನಿಗಳು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಉದ್ಯಾವರ: ಮೀನಿನ ಹುಡಿ ಸಂಗ್ರಹ ಗೋದಾಮು ಸ್ಥಾಪನೆಗೆ ಗ್ರಾಮಸ್ಥರ ವಿರೋಧ
ಉಡುಪಿ: ಉದ್ಯಾವರ ಗ್ರಾಮದಲ್ಲಿ ಪರಿಸರಕ್ಕೆ ಮಾರಕವಾಗಿರುವ ಮೀನಿನ ಹುಡಿ ಸಂಗ್ರಹ ಗೋದಾಮು ರಚನೆ ಹಾಗೂ ಇನ್ನಿತರ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಗ್ರಾಮಸ್ಥರು ಸೋಮವಾರ ಪಾದಯಾತ್ರೆ ಮೂಲಕ ಗ್ರಾಮ ಪಂಚಾಯಿತಿಗೆ ಆಗಮಿಸಿ ಗ್ರಾಪಂ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್ ಅವರಿಗೆ ಮನವಿ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಪಿತ್ರೋಡಿ, ಕಲಾಯಿಬೈಲ್, ಸಂಪಿಗೆ ನಗರದ ಗ್ರಾಮಸ್ಥರು ಭಾಗವಹಿಸಿದ್ದರು. ಕೈಯಲ್ಲಿ ಪರಿಸರ ರಕ್ಷಣೆ, ಆರೋಗ್ಯ ಪಾಲನೆ ಕಾಪಾಡುವಂತೆ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪಾದಯಾತ್ರೆ ನಡೆಸಿದರು. ಜನವಸತಿ ಪ್ರದೇಶದಲ್ಲಿ ಕಾನೂನಿಗೆ ವಿರುದ್ಧವಾಗಿರುವ ಕೈಗಾರಿಕೆಗಳಿಗೆ ಅನುಮತಿಯನ್ನು ನೀಡದೆ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ‘ಮಿನಿ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಾಗಾರಕ್ಕೆ ಚಾಲನೆ
ಶಿರ್ವ: ಪದವಿ ವ್ಯಾಸಂಗ ಮಾಡುವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜತೆಗೆ ಉಚಿತ ತರಬೇತಿಗಳನ್ನು ನೀಡಿ, ಸೂಕ್ತ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಬಂಟಕಲ್ಲು ಶ್ರೀ ಮಧ್ವವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಹಾಗೂ ಶಿರ್ವ ಸಂತ ಮೇರಿ ಕಾಲೇಜು ಪರಸ್ಪರ ಒಡಂಬಡಿಕೆಯೊಂದಿಗೆ ಇಂದಿನಿಂದ ಎರಡು ದಿನಗಳ ಮಿನಿ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಾಗಾರವನ್ನು ಶಿರ್ವ ಕಾಲೇಜಿನ ಹೆನ್ರಿ ಕ್ಯಾಸ್ತಲೀನೊ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಂಟಕಲ್ಲು ಕಾಲೇಜಿನ ಪ್ರಾಧ್ಯಾಪಕ ಡಾ. ರಾಘವೇಂದ್ರ ಎಸ್ ಮಾತನಾಡಿ, […]