ಎಲ್ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ₹ 25 ಏರಿಕೆ
ಬೆಂಗಳೂರು: ಎಲ್ಪಿಜಿ ಸಿಲಿಂಡರ್ ದರ ಸೋಮವಾರ ಮತ್ತೆ ₹ 25ರಷ್ಟು ಏರಿಕೆಕಂಡಿದ್ದು, ಆ ಮೂಲಕ ತಿಂಗಳ ಆರಂಭದಲ್ಲಿ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿತಟ್ಟಿದೆ. 14.2 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ ಈಗ ₹ 822ಕ್ಕೆ ತಲುಪಿದೆ. ಫೆಬ್ರುವರಿಯಲ್ಲಿ ಮೂರು ಬಾರಿ ದರ ಏರಿಕೆ ಮಾಡಿದ್ದರಿಂದ ಎಲ್ಪಿಜಿ ಬೆಲೆ ಒಟ್ಟು ₹ 100ರಷ್ಟು ಏರಿಕೆ ಆಗಿತ್ತು. ಇದೀಗ ಸೋಮವಾರದ ದರ ಹೆಚ್ಚಳವನ್ನೂ ಸೇರಿಸಿದರೆ 14.2 ಕೆ.ಜಿ ತೂಕದ ಒಂದು ಸಿಲಿಂಡರ್ ಬೆಲೆ ₹ 125ರಷ್ಟು ಏರಿಕೆಯಾಗಿದೆ. […]
ನನ್ನ ಆರ್ಥಿಕ ಪತನಕ್ಕೆ ನಾನು ಕಾರಣವಲ್ಲ; ನಾನೊಬ್ಬ ಬಲಿಪಶು ಅಷ್ಟೇ: ಉದ್ಯಮಿ ಬಿ.ಆರ್. ಶೆಟ್ಟಿ
ಉಡುಪಿ: ನಾನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ನಿಜ. ಆದರೆ ಅದಕ್ಕೆ ನಾನು ಕಾರಣ ಅಲ್ಲ, ನಾನೊಬ್ಬ ಬಲಿಪಶು ಅಷ್ಟೇ. ಹಾಗಂತ ನಾನು ಎಲ್ಲಿಗೂ ಓಡಿ ಹೋಗಿಲ್ಲ. ಹೋಗುವುದು ಕೂಡ ಇಲ್ಲ ಎಂದು ಉದ್ಯಮಿ ಬಿ.ಆರ್. ಶೆಟ್ಟಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಸ್ಮಾರಕ ಸರಕಾರಿ ಆಸ್ಪತ್ರೆಯಲ್ಲಿ ಹತ್ತು ಸಾವಿರನೇ ಮಗುವಿನ ಜನನ ಸಂದರ್ಭದ ಪ್ರಯುಕ್ತ ಆಸ್ಪತ್ರೆಯಲ್ಲಿ ಇಂದು ಅಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಧ್ಯಮದವರು […]
ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಬ್ ಶೆಟ್ಟಿಗೆ ಗಾಯ
ಹಾಸನ: ಹೀರೋ ಸಿನಿಮಾದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿ ಗಾಯವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂದಲೆಳೆ ಅಂತರದಿಂದ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ರಿಷಬ್ ಶೆಟ್ಟಿ ಹಾಗೂ ನಟಿ ಗಾನವಿ ಸಾಹಸ ದೃಶ್ಯ ಚಿತ್ರೀಕರಣವೊಂದಕ್ಕೆ ಪೆಟ್ರೋಲ್ ಬಾಂಬ್ ಬಳಸಲಾಗಿತ್ತು. ಮೊದಲ ಬಾಂಬ್ ಸಿಡಿಸುವಾಗ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದರೆ, ಎರಡನೇ ಬಾಂಬ್ ಸ್ಪೋಟಗೊಂಡಾಗ […]
ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರೊಂದಿಗೆ ಕೂತು ಮಾತಾಡುವ ಕಾರ್ಯಕ್ರಮ
ಉಡುಪಿ: ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರೊಂದಿಗೆ ಕೂತು ಮಾತಾಡುವ ಕಾರ್ಯಕ್ರಮ ಭಾನುವಾರ ಉಡುಪಿ ಕುಂಜಿಬೆಟ್ಟುವಿನ ಅಂಶು ಮನೆಯಲ್ಲಿ ನಡೆಯಿತು. ಸಂಸ್ಕೃತಿ ವಿಶ್ವಪ್ರತಿಷ್ಠಾನ ಉಡುಪಿ ಬೀಯಿಂಗ್ ಸೋಶಿಯಲ್ ಉಡುಪಿ ಸಹಯೋಗದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ ಅವರು ನಾಗೇಂದ್ರ ಪ್ರಸಾದ್ ದಂಪತಿಗಳನ್ನು ಗೌರವಿಸಿದರು. ಸಮಾರಂಭದಲ್ಲಿ ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು, ಉರಗ ತಜ್ಞ ಗುರುರಾಜ್ ಸನಿಲ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಸದಸ್ಯರಾದ ನಂದಾ ಪೇಟ್ಕರ್, […]
ರಸ್ತೆ ಅಪಘಾತ: ಖ್ಯಾತ ಯಕ್ಷಗಾನ ಕಲಾವಿದನಿಗೆ ಗಂಭೀರ ಗಾಯ
ಹೊನ್ನಾವರ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಖ್ಯಾತ ಯಕ್ಷಗಾನ ಕಲಾವಿದ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರ ಹಡಿಬಾಳದ ಸಮೀಪ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಸುಬ್ರಹ್ಮಣ್ಯ ಚಿಟ್ಟಾಣಿ ಅವರಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.