ಉಡುಪಿ ಜಿಲ್ಲಾ ಕಸಾಪಕ್ಕೆ ಹೊಸ ನೇತೃತ್ವ ಬೇಕು: ವಾಸುದೇವ ಭಟ್ ಪೆರಂಪಳ್ಳಿ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಸಾಪಕ್ಕೆ ಹೊಸ ನೇತೃತ್ವದ ಅಗತ್ಯವಿದೆ ಎಂದು ಕಸಾಪ ಸಾಮಾನ್ಯ ಸದಸ್ಯ, ಸಾಮಾಜಿಕ ಕಾರ್ಯಕರ್ತ ಜಿ. ವಾಸುದೇವ ಭಟ್ ಪೆರಂಪಳ್ಳಿ ಅಭಿಪ್ರಾಯಪಟ್ಟಿದ್ದಾರೆ. ಹಾಲಿ ಅಧ್ಯಕ್ಷರು ಮತ್ತು ಅವರ ತಂಡ ಎರಡು ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಆ ಬಗ್ಗೆ ಯಾವುದೇ ಸಂದೇಹವೇ ಇಲ್ಲ. ಆದರೆ ಯಾವುದೇ ಸಂಘ ಸಂಸ್ಥೆಯಲ್ಲಿ ಚಲನಶೀಲತೆ ಮತ್ತು ಹೊಸ ಚಿಂತನೆ, ಹೊಸ ಉತ್ಸಾಹ, ಹೊಸ ಯೋಚನೆಗಳು ನಿರಂತರವಾಗಿ ಮೂಡಿಬರಬೇಕು. […]
ಪ್ರೀತಿಗೆ ಮನೆಯವರ ವಿರೋಧ: ಮನನೊಂದ ಯುವತಿ ನೇಣಿಗೆ ಶರಣು
ಕಡಬ: ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಮನೆಯವರು ಒಪ್ಪದ ಕಾರಣಕ್ಕಾಗಿ ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ಬರೆತ್ತಡಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಪುತ್ತಿಲ ಬರೆತ್ತಡಿ ನಿವಾಸಿ ಕೊರಗಪ್ಪ ಗೌಡ ಎಂಬವರ ಪುತ್ರಿ ರಮ್ಯ (23) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಪಕ್ಕದ ಮನೆಯ ಮಹೇಶ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ರಮ್ಯ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. […]
ಬ್ರಹ್ಮಾವರ ಎಸ್ಎಂಎಸ್ ಕಾಲೇಜಿನ ಎನ್ಎಸ್ಎಸ್ ಘಟಕಗಳ ಉದ್ಘಾಟನೆ
ಬ್ರಹ್ಮಾವರ: ಇಲ್ಲಿನ ಪ್ರತಿಷ್ಠಿತ ಎಸ್ಎಂಎಸ್ ಕಾಲೇಜು ಬ್ರಹ್ಮಾವರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಮಿನಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ, ಉತ್ತಮ ಉಪನ್ಯಾಸಕ ರಾಜ್ಯಪ್ರಶಸ್ತಿ ವಿಜೇತೆ ಸವಿತಾ ಎರ್ಮಾಳ್ ಮಾತನಾಡಿ, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಎನ್ ಎಸ್ ಎಸ್ ಪೂರಕವಾಗಿದೆ ಎಂದರು. ಎನ್ ಎಸ್ಎಸ್ ಘಟಕಗಳ ಯೋಜನಾಧಿಕಾರಿಗಳಾದ ವಿದ್ಯಾಲತಾ, ರಘುರಾಮ ಶೆಟ್ಟಿ, ಸಹ ಯೋಜನಾಧಿಕಾರಿಗಳಾದ ಪ್ರಶಾಂತ್ ದೇವಾಡಿಗ, ಜ್ಯೋತಿ, ಘಟಕಗಳ ನಾಯಕರಾದ […]