ಕಾರ್ಕಳ: ಫ್ಯಾನಿಗೆ ನೇಣುಬಿಗಿದುಕೊಂಡು ಕುಕ್ಕುಂದೂರು ನಿವಾಸಿ ಆತ್ಮಹತ್ಯೆ

ಕಾರ್ಕಳ: ಫ್ಯಾನಿಗೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಅಶ್ವತಪುರ ಎಂಬಲ್ಲಿ ಮಾ. 2ರಂದು ಬೆಳಕಿಗೆ ಬಂದಿದೆ. ಕುಕ್ಕುಂದೂರು ಗ್ರಾಮದ ಅಶ್ವತಪುರ ನಿವಾಸಿ ಚಂದ್ರಶೇಖರ್ ಎನ್. ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.‌ ವಿಪರೀತ ಕುಡಿತದ ಚಟ ಹೊಂದಿದ್ದ ಚಂದ್ರಶೇಖರ್, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಇದೇ ಖಿನ್ನತೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಹೆಬ್ರಿ: ಬೈಕ್ ಡಿಕ್ಕಿ ಹೊಡೆದು ಜಿಂಕೆ ಮೃತ್ಯು; ಸವಾರ ಗಂಭೀರ

ಹೆಬ್ರಿ: ಬೈಕ್ ಡಿಕ್ಕಿ ಹೊಡೆದು ಜಿಂಕೆಯೊಂದು ಮೃತಪಟ್ಟ ಘಟನೆ ಹೆಬ್ರಿಯ ರಾಷ್ಟ್ರೀಯ ಹೆದ್ದಾರಿ 169ರ ಕನ್ಯಾನ ಎಂಬಲ್ಲಿ ಬುಧವಾರ ನಡೆದಿದೆ. ಖಾಸಗಿ ಬಸ್‌ ಚಾಲಕ ಹರೀಶ್‌ ಎಂಬವರು ಇಂದು ಬೆಳಿಗ್ಗೆ 6.45ರ ಸುಮಾರಿಗೆ ಈ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ರಸ್ತೆಗೆ ಜಿಂಕೆಯೊಂದು ಅಡ್ಡ ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದ್ದು, ಹರೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಸ್ಥಳಕ್ಕೆ ಹೆಬ್ರಿ ವಲಯ ಅರಣ್ಯಾಧಿಕಾರಿ […]

ರಾಸಲೀಲೆ ಸಿಡಿ ಬಹಿರಂಗ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ತನ್ನದೆಂದು ಹೇಳಲಾಗುತ್ತಿರುವ ರಾಸಲೀಲೆ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ರಾಜೀನಾಮೆ ನೀಡಿದ್ದಾರೆ. ನನ್ನಿಂದ ಪಕ್ಷ ಹಾಗೂ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಬಾರದು. ಹಾಗೆ ಮುಂಬರುವ ಪಂಚ ರಾಜ್ಯ ಚುನಾವಣೆ ಹಾಗೂ ರಾಜ್ಯ ಉಪಚುನಾವಣೆಯಲ್ಲಿ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಬಾರದೆಂಬ ನಿಟ್ಟಿನಿಂದ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ್ದಾರೆ. ಬೆಳಿಗ್ಗೆ ಸಿಎಂ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರ: ವಿಷ ಸೇವಿಸಿ ಅಂಪಾರು ನಿವಾಸಿ ಆತ್ಮಹತ್ಯೆ

ಕುಂದಾಪುರ: ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಹಡಾಳಿ ಸರಕಾರಿ ಕಾಡಿನಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಹಡಾಳಿ ಅಚ್ಚೆಬೆಟ್ಟು ನಿವಾಸಿ ಪ್ರಭಾಕರ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಭಾಕರ ಶೆಟ್ಟಿ ವಿಪರೀತ ಮದ್ಯಪಾನದ ಮಾಡುವ ಚಟ ಹೊಂದಿದ್ದು, ಇದೇ ಖಿನ್ನತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಮಾರ್ಚ್ 1ರ ಸಂಜೆ 4ರಿಂದ ಮಾ. 2ರ ಬೆಳಿಗ್ಗೆ 10 ಗಂಟೆಯ ಮಧ್ಯದ ಅವಧಿಯಲ್ಲಿ ಹಡಾಳಿ ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಈ […]

ಇಂದಿರಾ ಗಾಂಧಿ ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿ ತಪ್ಪು ನಿರ್ಣಯವಾಗಿತ್ತು: ರಾಹುಲ್ ಗಾಂಧಿ

ನವದೆಹಲಿ: 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿ ಒಂದು ತಪ್ಪು ನಿರ್ಣಯ ಆಗಿತ್ತು. ಅದರೆ, ಕಾಂಗ್ರೆಸ್ ಯಾವುದೇ ಕಾರಣಕ್ಕೂ ದೇಶದ ಸಾಂವಿಧಾನಿಕ ಚೌಕಟ್ಟನ್ನು ವಶಪಡಿಸಲು ಪ್ರಯತ್ನಿಸಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಭಾರತದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ಅವರೊಂದಿಗಿನ ಸಂವಾದದಲ್ಲಿ ಅಭಿಪ್ರಾಯಪಟ್ಟರು. ತುರ್ತು ಪರಿಸ್ಥಿತಿ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಅದೊಂದು ತಪ್ಪು ನಿರ್ಧಾರವೆಂದು […]