ತಂತ್ರಜ್ಞಾನದ ಬಳಕೆಯ ಜತೆಗೆ ಸುರಕ್ಷತೆಗೂ ಒತ್ತು ನೀಡಿ- ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ದೈನಂದಿನ ಕಾರ್ಯಗಳಲ್ಲಿ ತಂತ್ರಜ್ಞಾನದ ಬಳಕೆಯ ಜೊತೆಗೆ ಅವುಗಳ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡುವುದು ಅವಶ್ಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಉಡುಪಿ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸೈಬರ್ ಸೆಕ್ಯೂರಿಟಿ ಮತ್ತು ಇ- ಆಡಳಿತ ವಿಷಯಗಳ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಾಹಿತಿ ತಂತ್ರಜ್ಞಾನದ ಬಳಕೆ ದೈನಂದಿನ ಜೀವನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಕೆಲವರು ಇದರ ದುರುಪಯೋಗ ಪಡಿಸಿಕೊಂಡು ದೇಶದ ಯಾವುದೋ ಮೂಲೆಯಲ್ಲಿ ಕುಳಿತು ಅಮಾಯಕರ ಬ್ಯಾಂಕ್ ಖಾತೆಗಳಿಗೆ ಖನ್ನಾ, ಇ-ಮೇಲ್ […]
ಹಾಸನದ ಐದು ತಿಂಗಳ ಮಗು ಕಾರ್ಕಳಕ್ಕೆ ಮಾರಾಟ: ಇಬ್ಬರು ಮಹಿಳೆಯರು ಸಹಿತ ಮೂವರ ಬಂಧನ
ಮಂಗಳೂರು: ಉಭಯ ಜಿಲ್ಲೆಗಳಲ್ಲಿ ಮಕ್ಕಳ ಮಾರಾಟ ಜಾಲದಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಸಹಿತ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲ್ಕಿ ನಿವಾಸಿ ರಾಯನ್, ಕಾರ್ಕಳದ ಕವಿತಾ ಮತ್ತು ಮರಿಯಮ್ಮ ಎಂದು ಗುರುತಿಸಲಾಗಿದೆ. ಆರೋಪಿ ರಾಯನ್ ನನ್ನು ಮಂಗಳೂರಿನ ಕದ್ರಿಯ ಹೋಟೆಲ್ ಒಂದರಲ್ಲಿ ಪೊಲೀಸರು ಬಂಧಿಸಿದ್ದಾರೆ. ರಾಯನ್ ನಿಂದ ಮಗು ಖರೀದಿಸಿ ಮಾರಾಟ ಮಾಡಿದ ಕವಿತಾ ಮತ್ತು ಕವಿತಾಳಿಂದ ಮಗು ಖರೀದಿಸಿದ ಮರಿಯಮ್ಮಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಯಾನ್ ಹಾಸನದಿಂದ ಸುಮಾರು ಐದು ತಿಂಗಳ ಮಗುವೊಂದನ್ನು ತಂದು ಕಾರ್ಕಳದ […]
ಬ್ರಹ್ಮಾವರ: ನಾಳೆ ‘ಸತ್ಯನಾಥ ಸ್ಟೋರ್ ್ಸ ನೂತನ ಬೃಹತ್ ಬಟ್ಟೆ ಮಳಿಗೆಯ ಉದ್ಘಾಟನೆ
ಬ್ರಹ್ಮಾವರ: ಕಳೆದ ಏಳು ದಶಕಗಳಿಂದ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಉಡುಪುಗಳನ್ನು ನೀಡುತ್ತಿರುವ, ಕರಾವಳಿ ಹಾಗೂ ಮಲೆನಾಡಿನಾದ್ಯಂತ ಸಾಕಷ್ಟು ಹೆಸರುವಾಸಿಯಾಗಿರುವ ‘ಸತ್ಯನಾಥ ಸ್ಟೋರ್ ್ಸ’ ನೂತನ ಬೃಹತ್ ಬಟ್ಟೆ ಮಳಿಗೆ ಬ್ರಹ್ಮಾವರ ಮಾರಿಗುಡಿ ರಸ್ತೆಯ ಹಳೆ ಪೊಲೀಸ್ ಸ್ಟೇಷನ್ ಮುಂಭಾಗದ ವಿಶಾಲವಾದ ಜಾಗ ನಿರ್ಮಾಣಗೊಂಡಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಮಾರ್ಚ್ 7ರಂದು ಬೆಳಿಗ್ಗೆ 9ಗಂಟೆಗೆ ಶುಭಾರಂಭಗೊಳ್ಳಲಿದೆ. 1949ರಲ್ಲಿ ಆರಂಭಗೊಂಡ ಈ ಮಳಿಗೆಯು ಜವಳಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಏಳು ದಶಕಗಳಿಂದ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸಿದ್ಧ […]
ಉಡುಪಿ: ಇಂದು ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ
ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಕುರಿತ ಫೋನ್ ಇನ್ ಕಾರ್ಯಕ್ರಮ ಇಂದು (ಮಾ. 5) ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿಯ ಸರಕಾರಿ ಪ್ರೌಢ ಶಾಲೆ (ಬೋರ್ಡ್) ಯಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ದೀಪಾ ಉಡುಪ ಮೊ.ನಂ: 86182 40682, ರಜನಿ ಉಡುಪ ಮೊ.ನಂ: 98807 84064, ವಿನೋದ ಮೊ.ನಂ: 97435 77651, ನವ್ಯಾ ಮೊ.ನಂ: 90084 […]
ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ಕೋವಿಡ್ ಗೆ ಬಲಿ
ದುಬೈ: ದುಬೈನಲ್ಲಿ ನೆಲೆಸಿರುವ ಚಿಕ್ಕಮಗಳೂರು ಕಳಸದ ಏಳು ತಿಂಗಳ ಗರ್ಭಿಣಿ ಶ್ರೇಯಾ ರೈ (ಸೌಮ್ಯ ರೈ) ಶುಕ್ರವಾರ ಕೋವಿಡ್–19 ಹಾಗೂ ನ್ಯುಮೋನಿಯಾದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಶ್ರೇಯಾ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ ಅವರನ್ನು ದುಬೈಯ ಪ್ರಸಿದ್ಧ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರ ಆರೋಗ್ಯ ದಿನ ಕಳೆದಂತೆ ಬಿಗಡಾಯಿಸಿದ್ದು, ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೂಲತಃ ಚಿಕ್ಕಮಗಳೂರು ಕಳಸದವರಾಗಿದ್ದ ಶ್ರೇಯಾ, ತಮ್ಮ ಪದವಿ ಮತ್ತು […]