ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶ

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಮತ್ತು 25 ರನ್‌ ಅಂತರದ ಗೆಲುವು ದಾಖಲಿಸುವ ಮೂಲಕ ವಿಶ್ವ ಟೆಸ್ಟ್‌ ಕ್ರಿಕೆಟ್‌ ಚಾಂಪಿಯನ್‌ಶಿಪ್‌ ಫೈನಲ್‌ ತಲುಪಿದೆ. ಹಾಗೆ, ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ. ಎರಡನೇ ಇನ್ನಿಂಗ್ಸ್‌ನ ಬೌಲಿಂಗ್‌ನಲ್ಲಿ ಅಕ್ಷರ್‌ ಪಟೇಲ್‌ ಮತ್ತು ರವಿಚಂದ್ರನ್‌ ಅಶ್ವಿನ್‌ ಮಿಂಚಿದರು. ಇಬ್ಬರೂ ತಲಾ ಐದೈದು ವಿಕೆಟ್‌ ಗಳಿಸಿ ಸಂಭ್ರಮಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಅಕ್ಷರ್‌ ಪಟೇಲ್‌ 4 ವಿಕೆಟ್‌ ಕಬಳಿಸಿದ್ದರು. ರಿಷಭ್‌ ಪಂತ್‌ […]

ಬ್ರಹ್ಮಾವರ: ಎಳ್ಳಂಪಳ್ಳಿ ನಿವಾಸಿ ನೇಣಿಗೆ ಶರಣು

ಬ್ರಹ್ಮಾವರ: ನೀಲಾವರ ಗ್ರಾಮದ, ಎಳ್ಳಂಪಳ್ಳಿ ನಿವಾಸಿಯಾದ ವೆಂಕಟರಮಣ (75) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 5ರಂದು ಸಂಜೆ ಬೆಳಕಿಗೆ ಬಂದಿದೆ. ಮಾಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೆಂಕಟರಮಣ ಅವರು, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಇದೇ ಖಿನ್ನತೆಯಲ್ಲಿ ಬಾವಿಯ ಕಬ್ಬಿಣದ ಸರಳಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಮಗ ಸತೀಶ್ ಅಡಿಗ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಡಾ. ಮೋಹನ್ ಆಳ್ವರಿಗೆ ‘ವಿಶ್ವ ಪ್ರಭಾ’ ಪುರಸ್ಕಾರ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯ ಸ್ಥಾಪಕ ಹಾಗೂ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ್ ಶೆಣೈ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಕೊಡಲ್ಪಡುವ ‘ವಿಶ್ವ ಪ್ರಭಾ’ ಪುರಸ್ಕಾರಕ್ಕೆ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ಆಯ್ಕೆಯಾಗಿದ್ದಾರೆ. ಅವರು ಕನ್ನಡ ನಾಡು-ನುಡಿ ಸಂಸ್ಕೃತಿಗೆ ಕೊಟ್ಟಂತಹ ಅಮೂಲ್ಯ ಸೇವೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವಿಶ್ವ ಪ್ರಭಾ ಪುರಸ್ಕಾರದ ಸಮಿತಿಯ ಸಂಚಾಲಕ ಮರವಂತೆ ನಾಗರಾಜ್ ಹೆಬ್ಬಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಪ್ರಶಸ್ತಿಯು […]

ಎಲ್ಲಿ ಜಾರಿತೋ ಮನವು ಎನ್ನುತ್ತಲೇ ಸಾವಿಗೆ ಜಾರಿದ ಕನ್ನಡದ ಖ್ಯಾತ ಸಾಹಿತಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು

ಬೆಂಗಳೂರು: ಎಲ್ಲಿ ಜಾರಿತೋ ಮನವು.. ಎಲ್ಲೆ ಮೀರಿತೋ ಎಂದು ಬರೆದ ಕನ್ನಡದ ಖ್ಯಾತ ಸಾಹಿತಿ, ಖ್ಯಾತ ಕವಿ, ಭಾವಗೀತೆ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಕವಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ ಅವರು ಕನ್ನಡ ಸಾಹಿತ್ಯ ಲೋಕವನ್ನು ಅಗಲಿದ್ದಾರೆ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ೧೯೩೬ ಅಕ್ಟೋಬರ ೨೯ ರಂದು ಶಿವಮೊಗ್ಗೆಯಲ್ಲಿ ಹುಟ್ಟಿದರು. ಎಂ.ಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ತನ್ನಂತರ ಕಾಲೇಜಿನಲ್ಲಿ ಅಧ್ಯಾಪಕರಾದರು.೧೯೯೦ ರಲ್ಲಿ ಆರ್ಟ ಫ್ಯಾಕಲ್ಟಿ ಡೀನ್ ಆದರು.ಭಾವಗೀತೆಯ ಲೋಕಕ್ಕೆ ಹೊಸ ಆಯಾಮ ನೀಡಿದ ಇವರ ಕವಿತೆಗಳು ಕನ್ನಡ […]