ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ ಇಲ್ಲ: ಆರ್. ಧ್ರುವನಾರಾಯಣ
ಉಡುಪಿ: ರಾಸಲೀಲೆ ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಪಕ್ಷದ ಯಾವುದೇ ಕೈವಾಡ ಇಲ್ಲ. ತಮ್ಮ ತಪ್ಪನ್ನು ಮರೆಮಾಚಲು ಬಿಜೆಪಿ ಪಕ್ಷವು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಅಶ್ಲೀಲ ಸಿಡಿ ಬಿಡುಗಡೆಯಿಂದ ರಾಜ್ಯದ ಜನತೆ ತಲೆ ತಗ್ಗಿಸುವ ವಾತಾವರಣ ನಿರ್ಮಾಣವಾಗಿದೆ. ಬಸವಣ್ಣ, ಕುವೆಂಪುರ ನಮ್ಮ ನಾಡಿನಲ್ಲಿ ಇಂತಹ ಮಂತ್ರಿಗಳಿರುವುದು ನಾಚಿಕೆಗೇಡು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಟೀಕಿಸಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರ ಜನರಿಗೆ ಉತ್ತಮ ನೀಡುವಲ್ಲಿ […]
ಜನೌಷಧ ಅತ್ಯಂತ ಉತ್ತಮ ಗುಣಮಟ್ಟ ಹೊಂದಿದೆ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ
ಉಡುಪಿ: ಪ್ರಧಾನಮಂತ್ರಿ ಜನೌಷಧ ಕೇಂದ್ರಗಳ ಮೂಲಕ ಅತ್ಯಂತ ಕಡಿಮೆ ಹಾಗೂ ಉತ್ತಮ ಗುಣಮಟ್ಟದ ಔಷಧಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನವನ್ನು ಪಡೆಯುವಂತಾಗಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ಜನಔಷಧಿ ದಿನಾಚರಣೆ ಅಂಗವಾಗಿ ಬ್ರಹ್ಮಾವರದಲ್ಲಿ ಇಂದು ಆಯೋಜಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೋ ಕಾನ್ಫರೆನ್ಸ್ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ದೇಶದಲ್ಲಿ 2015 ರಲ್ಲಿ ನಡೆದ ಸರ್ವೇಯಲ್ಲಿ, ದೇಶದ ನಾಗರಿಕರು ತಮ್ಮ ದುಡಿಮೆಯನ್ನು […]
ಬೈಂದೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು
ಬೈಂದೂರು: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 6ರಂದು ಸಂಜೆ ನಡೆದಿದೆ. ಮೃತರನ್ನು ಶ್ವೇತಾ(17) ಎಂದು ಗುರುತಿಸಲಾಗಿದೆ. ಈಕೆ ಉಪ್ಪುಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಶ್ವೇತಾ ಕಲಿಕೆಯಲ್ಲಿ ಹಿಂದುಳಿದಿದ್ದಳು. ಇದೇ ಖಿನ್ನತೆಯಲ್ಲಿದ್ದ ಈಕೆ ಮಾ. 6ರಂದು ಕಾಲೇಜಿಗೆ ಹೋಗಿ ಮಧ್ಯಾಹ್ನ ವಾಪಸ್ ಮನೆಗೆ ಬಂದಿದ್ದಳು. ತಾಯಿ ಹಾಲು ತರಲೆಂದು ಹೋದಾಗ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ನೂತನ ಗ್ರಾಪಂ ಸದಸ್ಯರಿಗೆ ಸನ್ಮಾನ
ಉಡುಪಿ: ಗ್ರಾಮ ಪಂಚಾಯಿತಿ ಸದಸ್ಯರು ಅಸಾಹಯಕರಿಗೆ ತಮ್ಮ ಸೇವೆಯಲ್ಲಿ ಮೊದಲ ಆದತ್ಯೆ ನೀಡುವಂತಾಗಬೇಕು. ಈ ಮೂಲಕ ಬಡವರ ಬಾಳಿಗೆ ಬೆಳಕಾಗಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಭಾನುವಾರ ಉಡುಪಿ ಶೋಕಮಾತಾ ಇಗರ್ಜಿಯ ಸಭಾಂಗಣದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಶ್ರಯದಲ್ಲಿ ಉಡುಪಿ ಧರ್ಮಪ್ರಾಂತ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಮತ್ತು ವಿಜೇತ ಕ್ರೈಸ್ತ ಅಭ್ಯರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಸೇವೆ ಎನ್ನುವುದು ಕ್ರೈಸ್ತ ಸಮುದಾಯದ ಪ್ರಮುಖ ಧ್ಯೇಯವಾಗಿದ್ದು, ಗ್ರಾಪಂ […]
ರಾಸಲೀಲೆ ಸಿಡಿ ಕೇಸ್: ದೂರು ಹಿಂಪಡೆದ ಕಲ್ಲಹಳ್ಳಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಸಿಡಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್ ಸಿಕ್ಕಿದೆ. ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ದೂರುದಾರ ದಿನೇಶ್ ಕಲ್ಲಹಳ್ಳಿ ಹಿಂಪಡೆದಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಅವರಿಗೆ ಪತ್ರ ಬರೆದಿರುವ ಅವರು, ‘ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿದ್ದ ಲೈಂಗಿಕ ದೌರ್ಜನ್ಯ ದೂರನ್ನು ಹಿಂಪಡೆಯುತ್ತಿದ್ದೇನೆ’ ಎಂದಿದ್ದಾರೆ.