ಮಣಿಪಾಲ: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳ ಬಂಧನ
ಮಣಿಪಾಲ: ಟ್ಯಾಪ್ಮಿ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಪೂರ್ಣಚಂದ್ರ ದಾಸ್ (23) ಹಾಗೂ ಕಮಲು ಎಂದು ಗುರುತಿಸಲಾಗಿದೆ. ಈ ಇಬ್ಬರು ಟ್ಯಾಪ್ಮಿಯಲ್ಲಿ ಕಳೆದ ಐದಾರು ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಬಂಧಿತರಿಂದ ₹ 70 ಸಾವಿರ ಮೌಲ್ಯದ 2.20 ಕಿ.ಲೋ. ತೂಕದ ಗಾಂಜಾ, 2 ಮೊಬೈಲ್ ಫೋನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಶಾಂತಿನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ […]
ಮಣಿಪಾಲ: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳ ಬಂಧನ
ಮಣಿಪಾಲ: ಟ್ಯಾಪ್ಮಿ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಪೂರ್ಣಚಂದ್ರ ದಾಸ್ (23) ಹಾಗೂ ಕಮಲು ಎಂದು ಗುರುತಿಸಲಾಗಿದೆ. ಈ ಇಬ್ಬರು ಟ್ಯಾಪ್ಮಿಯಲ್ಲಿ ಕಳೆದ ಐದಾರು ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಬಂಧಿತರಿಂದ ₹ 70 ಸಾವಿರ ಮೌಲ್ಯದ 2.20 ಕಿ.ಲೋ. ತೂಕದ ಗಾಂಜಾ, 2 ಮೊಬೈಲ್ ಫೋನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಶಾಂತಿನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ […]
ರಾಮತ್ವ ಜಾಗೃತಿಗೆ ರಾಮಲೀಲೋತ್ಸವ ವ್ಯಾಪಕವಾಗಿ ನಡೆಯಲಿ: ಪೇಜಾವರ ಶ್ರೀ ಕರೆ
ಉಡುಪಿ: ಕೃಷ್ಣಲೀಲೋತ್ಸವದ ಮಾದರಿಯಲ್ಲಿ ನಾಡಿನಾದ್ಯಂತ ರಾಮತ್ವದ ಜಾಗೃತಿ, ರಾಮಲೀಲೋತ್ಸವಗಳು ವ್ಯಾಪಕವಾಗಿ ನಡೆಯಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಎಂ. ಮೋಹನ ಆಳ್ವರ ನೇತೃತ್ವದಲ್ಲಿ ಮೂಡಬಿದಿರೆಯ ನೂತನ ಕನ್ನಡ ಭವನದಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ ಶ್ರೀಗಳು ಮಾರ್ಗದರ್ಶನ ನೀಡಿದರು. ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಎಲ್ಲೆಡೆ ಅತ್ಯಂತ ಸಂಭ್ರಮದ ಕೃಷ್ಣ ಲೀಲೋತ್ಸವ ಮುದ್ದುಕೃಷ್ಣ ಸ್ಪರ್ಧೆ, ಕೃಷ್ಣ ಸಂದೇಶಗಳ ರಸಪ್ರಶ್ನೆ, ಪ್ರವಚನ ಸಪ್ತಾಹಗಳೇ ಮೊದಲಾಗಿ ಕೃಷ್ಣ ಸಂದೇಶಗಳ ಜಾಗೃತಿಗಾಗಿ ಉತ್ಸವಗಳು […]
ಬ್ರಹ್ಮಾವರ: ಮೀನಿನ ಲಾರಿ ಪಲ್ಟಿ; ಚಾಲಕನಿಗೆ ಗಾಯ
ಬ್ರಹ್ಮಾವರ: ಮೀನು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿ ಬಿದ್ದ ರಭಸಕ್ಕೆ ಲಾರಿಯೊಳಗಿದ್ದ ಮೀನುಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಮೀನಿನ ಬಾಕ್ಸ್ ಗಳು ಕೂಡ ಅಲ್ಲಾಲ್ಲಿ ಬಿದ್ದುಕೊಂಡಿದೆ. ಲಾರಿ ಮುಂಭಾಗ ಜಖಂಗೊಂಡಿದ್ದು, ಚಾಲಕನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಹಿಳಾ ದಿನಾಚರಣೆ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಾಧಕರಿಗೆ ಸನ್ಮಾನ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉಡುಪಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ಪೂರ್ಣಿಮಾ ಸುರೇಶ್ ಮಹಿಳಾ ದಿನಾಚರಣೆ ಮಹತ್ವ ತಿಳಿಸಿದರು. ವೈದ್ಯ ಡಾ. ಕೋಮಲ್ ಆರೋಗ್ಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಾದ ವಿದ್ಯಾ ಪೈ, ಮಾಯ ಕಾಮತ್, […]