ಹಿರ್ಗಾನ: ಮನೆಯ ಬಾಗಿಲು ಮುರಿದು ₹7.80 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಕಾರ್ಕಳ: ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಕಪಾಟಿನಲ್ಲಿದ್ದ ₹ 7.80ಲಕ್ಷ ಮೌಲ್ಯದ ವಜ್ರ ಹಾಗೂ ಚಿನ್ನಾಭರಣ ಕಳವು ಮಾಡಿದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆಯ ಎಂಬಲ್ಲಿ ನಡೆದಿದೆ. ಕುಕ್ಕುದಕಟ್ಟೆಯ ನಿವಾಸಿ ವಿವೇಕ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ವಿವೇಕ್ ಮನೆಮಂದಿ ಮನೆಗೆ ಬೀಗ ಹಾಕಿ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು. ಈ ಸಂದರ್ಭವನ್ನು ಬಳಸಿಕೊಂಡ ಕಳ್ಳರು ಮಾ. 7ರಿಂದ 9ರ ಮಧ್ಯ ಅವಧಿಯಲ್ಲಿ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ […]