ಉಡುಪಿ: ಪೌರಕಾರ್ಮಿಕನ ಮೇಲೆ ಹಲ್ಲೆ ಖಂಡನೀಯ; ಹಿಂದುಗಳ ಮೇಲಿನ ದೌರ್ಜನ್ಯ ಸಹಿಸಲಾಗದು- ಶ್ರೀರಾಮಸೇನೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತದ ಕನಸಿಗೆ ಪೂರಕವಾಗಿ ಉಡುಪಿ ನಗರವನ್ನು ಸ್ವಚ್ಛವಾಗಿಡಲು ಅತೀ ಕಡಿಮೆ ವೇತನದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿರುವ ನಮ್ಮ ಪೌರ ಕಾರ್ಮಿಕರ ಮೇಲೆ ಇಂದು ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಆಸ್ಮಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ ಹಲ್ಲೆ ಮಾಡಿರುವುದನ್ನು ಉಡುಪಿ ಜಿಲ್ಲಾ ಶ್ರೀ ರಾಮಸೇನೆಯು ತೀವ್ರವಾಗಿ ಖಂಡಿಸುತ್ತದೆ. ಇದೊಂದು ಹಿಂದುಗಳ ಮೇಲೆ ನಡೆದ ಹಲ್ಲೆ. ಹಲ್ಲೆ ಮಾಡಿದ ವ್ಯಕ್ತಿ ಯಾರೇ ಆಗಲಿ. ಆತನನ್ಮು ಕೂಡಲೇ ಪೊಲೀಸರು ಬಂಧಿಸಬೇಕು ಎಂದು […]

ಪೌರಕಾರ್ಮಿಕರ ಮೇಲಿನ ಹಲ್ಲೆ ಖಂಡನೀಯ: ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿಯಲ್ಲಿ ಪೌರಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಪ್ರಕರಣ ನಿಜಕ್ಕೂ ಆಘಾತಕಾರಿಯಾಗಿದ್ದು, ಈ ಘಟನೆಯನ್ನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಶ್ರಮವನ್ನು ಗೌರವಿಸಿ ಅವರಿಗೆ ಬೇಕಾಗಿರುವ ಸಂಪೂರ್ಣ ಭದ್ರತೆಯನ್ನು ನೀಡುವಂತೆ ಮತ್ತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಉಡುಪಿ ನಗರಸಭೆಯ ಪೌರಕಾರ್ಮಿಕನಿಗೆ ಹಲ್ಲೆ: ಇಬ್ಬರ ಬಂಧನ

ಉಡುಪಿ: ಕಸದ ವಿಚಾರಕ್ಕೆ ಸಂಬಂಧಿಸಿ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರಿಗೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಇಲೆಕ್ಟ್ರಾನಿಕ್ಸ್ ಅಂಗಡಿಯವರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಗರದ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ. ಹಲ್ಲೆಗೊಳಗಾದ ಕಾರ್ಮಿಕನನ್ನು ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಮಾದರ್ (26) ಎಂದು ಗುರುತಿಸಲಾಗಿದೆ. ನೇಜಾರಿನ ಇಸ್ಮಾಯಿಲ್(55) ಹಾಗೂ ಹೂಡೆಯ ಸುಹೈಲ್ (28) ಎಂಬವರು ಹಲ್ಲೆ ನಡೆಸಿದ್ದು, ಇವರನ್ನು ಪೊಲೀಸರು ಬಂಧಿಸಿದ್ದಾರೆ. ಹಸಿ ಕಸ ಹಾಗೂ ಒಣ ಕಸವನ್ನು […]

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಎಂಬವರ ಪುತ್ರಿ ಯಶಸ್ವಿನಿ(13) ಗುರುತಿಸಲಾಗಿದೆ. ಈಕೆ ಎಲಿಮಲೆ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ವಾರದ ಹಿಂದೆ ಇಲಿಪಾಷಾಣ ಸೇವಿಸಿದ್ದಳು. ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ಮನೆಯವರು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಇಲಿ ಪಾಷಾಣ ಸೇವನೆಗೆ ಕಾರಣ ತಿಳಿದುಬಂದಿಲ್ಲ.

ಪ್ರಮೋದ್ ಮಧ್ವರಾಜ್ ವಿರುದ್ಧ ಆರೋಪ: ಕೇಂದ್ರ ಮಾಹಿತಿ ಆಯೋಗದಿಂದ ಟಿ. ಜೆ. ಅಬ್ರಾಹಂ ಅರ್ಜಿ ವಜಾ

ಉಡುಪಿ: ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಎಂಬವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ ಅವರು ಸಿಂಡಿಕೇಟ್ ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ಸಾಲ ಪಡೆದಿದ್ದಾರೆ. ಇದರಲ್ಲಿ ಬ್ಯಾಂಕ್‌ ಸಿಬ್ಬಂದಿ ಕೂಡ ಶಾಮೀಲಾಗಿದ್ದರೆ ಎಂದು ಆರೋಪಿಸಿ ಕೆಲವು ದಾಖಲೆಗಳನ್ನು ಕೋರಿ ಸಿಂಡಿಕೇಟ್ ಬ್ಯಾಂಕಿನ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯವರಿಗೆ(ಸಿಪಿಐಓ) ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ, ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯಡಿಯಲ್ಲಿ ಬರುವುದಿಲ್ಲ ಎಂಬುದಾಗಿ ತಿಳಿಸಿ ಖಾಸಗಿ ಮಾಹಿತಿಯನ್ನು ಕೇಳಿರುವುದರಿಂದ ದೂರು […]