ಉಡುಪಿ: ಅಮ್ಮುಂಜೆ ಸಾಲ್ಮಾರದ ನಿವಾಸಿ ನಾಪತ್ತೆ

ಉಡುಪಿ: ಉಡುಪಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ 4ನೇ ಅಡ್ಡ ರಸ್ತೆಯಲ್ಲಿರುವ ಮೆಡೊಸ್ ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಉಡುಪಿ ತೆಂಕಬೆಟ್ಟುವಿನ ಅಮ್ಮುಂಜೆ ಸಾಲ್ಮಾರದ ನಿವಾಸಿ ನವೀನ ಉದಯ ಗುಡಿಗಾರ್‌ (33) ಮಾ. 8ರಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಹೊಳೆಯಲ್ಲಿ ಮುಳುಗಿ ವೃದ್ಧೆ ಮೃತ್ಯು

ಬೈಂದೂರು: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರು ಗ್ರಾಮದ ತೋಗ್ತಿ ಎಂಬಲ್ಲಿ ಮಾ. 11ರಂದು ಬೆಳಕಿಗೆ ಬಂದಿದೆ. ಬೈಂದೂರು ಗ್ರಾಮದ ತೋಗ್ತಿ ನಿವಾಸಿ ಪುಟ್ಟಿ ಮರಾಠಿ (85) ಮೃತ ವೃದ್ಧೆ. ಇವರು 15 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಮಾ. 9ರ ಮಧ್ಯಾಹ್ನದಿಂದ ಮನೆಯಿಂದ ಕಾಣೆಯಾಗಿದ್ದರು. ಮನೆಯ ಸುತ್ತಮುತ್ತ ಹುಡುಕಾಡಿ ಸಂಬಂಧಿಕರಲ್ಲಿ ವಿಚಾರಿಸಿದರೂ ಪತ್ತೆಯಾಗಿರಲಿಲ್ಲ. ಮಾ. 11ರಂದು ಬೆಳಿಗ್ಗೆ ಮನೆಯ ಸಮೀಪದ ಹೊಳೆಯಲ್ಲಿ ಪುಟ್ಟಿ ಮರಾಠಿಯವರ ಮೃತದೇಹ ಪತ್ತೆಯಾಗಿತ್ತು. ಅವರು ಹೊಳೆ […]

ಮಾ. 14ಕ್ಕೆ ಕೆಮ್ತೂರು ದೊಡ್ಡಣ್ಣ ಶೆಟ್ರ ಸಂಸ್ಮರಣೆ

ಉಡುಪಿ: ತುಳುಕೂಟ ಉಡುಪಿ ವತಿಯಿಂದ ಸ್ವಾತಂತ್ರ ಹೋರಾಟಗಾರ, ಹಿರಿಯ ನಾಟಕಕಾರ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಅವರ ಸಂಸ್ಮರಣಾ ಕಾರ್ಯಕ್ರಮ ಮಾ.14ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿದೆ.ಇದರ ಅಂಗವಾಗಿ ತುಳು ನಾಟಕ ಪ್ರದರ್ಶನ, ತುಳು ನಾಟಕ ರಂಗಭೂಮಿ ಕುರಿತು ವಿಚಾರಸಂಕಿರಣ ಹಾಗೂ ಹಿರಿಯ ಕವಿ ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ತುಳು ಭಾವಗೀತೆ ಸ್ಪರ್ಧೆ ಜರುಗಲಿದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 14ರಂದು ಬೆಳಿಗ್ಗೆ 9ಕ್ಕೆ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ […]