ಮಾ.16ಕ್ಕೆ ಶ್ರೀಕ್ಷೇತ್ರ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಪೆರ್ಡೂರು: ಶ್ರೀಕ್ಷೇತ್ರ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಮಾರ್ಚ್ 12ರಿಂದ 19ರ ವರೆಗೆ ದೇವರ ಸನ್ನಿಧಿಯಲ್ಲಿ ನಡೆಯಲಿದೆ. ಶ್ರೀಕ್ಷೇತ್ರದ ತಂತ್ರಿಗಳಾದ ಕೊರಂಗ್ರಪಾಡಿ ಕೆ.ಜಿ. ವಿಟ್ಠಲ ತಂತ್ರಿಗಳ ನೇತೃತ್ವದಲ್ಲಿ ಇಂದಿನಿಂದ ಆರಂಭಗೊಂಡು ಮುಂದಿನ ಏಳು ದಿನಗಳ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರಗಲಿವೆ. ಮಾ. 13ರ ಶನಿವಾರದಂದು ಬೆಳಿಗ್ಗೆ ಧ್ವಜಾರೋಹಣ, ಅಗ್ನಿಜನನ, ಪ್ರಧಾನಹೋಮ, ಕಲಶಾಭಿಷೇಕ ಹಾಗೂ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ. ರಾತ್ರಿ ದೀವಟಿಗೆ ಸೇವೆ, ಉತ್ಸವ ಬಲಿ, ಪನ್ನಗೋತ್ಸವ, ಶೇಷವಾಹನ, ಓಲಗಮಂಟಪದಲ್ಲಿ ಪೂಜೆ, […]

ಪೌರಕಾರ್ಮಿಕರ ಮೇಲೆ ಹಲ್ಲೆ ಅಕ್ಷಮ್ಯ ಅಪರಾಧ: ವಾಸುದೇವ ಭಟ್

ಉಡುಪಿ: ಪ್ರಧಾನಿ ಮೋದಿಯವರ ಸ್ವಚ್ಛ ಭಾರತ್ ಕಲ್ಪನೆಯನ್ನು ಸಾಕಾರಗೊಳಿಸಲು ನಿತ್ಯ ಶ್ರಮಿಸುತ್ತಿರುವ ಪೌರಕಾರ್ಮಿಕರ ಮೇಲೆ ನಡೆದ ಹಲ್ಲೆ ಅತ್ಯಂತ ಅಕ್ಷಮ್ಯ ಎಂದು ಸಾಮಾಜಿಕ ಕಾರ್ಯಕರ್ತ ವಾಸುದೇವ ಭಟ್ ಪೆರಂಪಳ್ಳಿ ಹೇಳಿದ್ದಾರೆ. ಹಲ್ಲೆ ನಡೆಸಿದ ವಿಕೃತ ಮನಸ್ಥಿತಿಯ ವ್ಯಾಪಾರಿಗಳು ಸ್ವಚ್ಛ ಉಡುಪಿಗೆ ಮಾರಕವಾಗಿದ್ದಾರೆ. ಇಂಥವರ ಮೇಲೆ ನಿಷ್ಪಕ್ಷಪಾತ ಕಾನೂನು ಕ್ರಮ‌ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪ್ರಕರಣದ ಮಾಹಿತಿಯನ್ನು ಪ್ರಧಾನಿ ಮೋದಿಯವರ ಕಚೇರಿಗೂ ಕಳುಹಿಸಲಾಗುವುದು ಎಂದು ಭಟ್ ತಿಳಿಸಿದ್ದಾರೆ.

ಕೊಡವೂರು ದೇವಸ್ಥಾನದಲ್ಲಿ ಯೋಗ ಶಿವ ನಮಸ್ಕಾರ

ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆ ಇದರ ವತಿಯಿಂದ ಶಿವರಾತ್ರಿ ಪ್ರಯುಕ್ತ ಯೋಗ ಶಿವ ನಮಸ್ಕಾರ ಮತ್ತು ಅಷ್ಟೋತ್ತರ ಶತನಾಮಾವಳಿ ಪಠಣ, ಬಿಲ್ವಪತ್ರೆ ಮತ್ತು ಪುಷ್ಪಾರ್ಚನೆ ಕೊಡವೂರು ದೇವಳದ ವಠಾರದಲ್ಲಿ ನಡೆಯಿತು.   ಕಾರ್ಯಕ್ರಮವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಜಿ. ಕೊಡವೂರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಅಷ್ಟೋತ್ತರ ಶತನಾಮಾವಳಿ ಅರ್ಚನೆಯನ್ನು ವಾಸುದೇವ ಭಟ್ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಜನಾರ್ದನ್ […]