ನಾಳೆಯಿಂದ ಶಾಲಾ ಕಾಲೇಜುಗಳಿಗೆ ರಜೆ ಎಂಬ ಸುತ್ತೋಲೆ ಫೇಕ್: ಆಯುಕ್ತರ ಸ್ಪಷ್ಟನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸಹಿತ ಕೆಲ ಭಾಗಗಳಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಕಾಲೇಜು ಶಿಕ್ಷಣದ ಸುತ್ತೋಲೆ ವೈರಲ್ ಆಗಿದೆ. ಇದು ಸಂಪೂರ್ಣ ಫೇಕ್ (ಸುಳ್ಳು) ಎಂದು ಶಿಕ್ಷಣ ಇಲಾಖೆ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಕಾಲೇಜು ಶಿಕ್ಷಣ ನಿರ್ದೇಶಕರು ಮಾ.15ರಿಂದ 30ರವರೆಗೆ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ ಎಂಬ ಸುದ್ದಿ ಕೆಲ ಗಂಟೆಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ […]

ಪೌರಕಾರ್ಮಿಕನಿಗೆ ಹಲ್ಲೆ: ಆಸ್ಮಾ ಕ್ಯಾಸೆಟ್ ಕಾರ್ನರ್ ಅಂಗಡಿಯ ಪರವಾನಿಗೆ ರದ್ದು

ಉಡುಪಿ: ನಗರಸಭೆಯ ಪೌರಕಾರ್ಮಿಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಮಾ ಕ್ಯಾಸೆಟ್ ಕಾರ್ನರ್ ಅಂಗಡಿಯ ವ್ಯಾಪಾರ ಪರವಾನಿಗೆ ಅನ್ನು ಉಡುಪಿ ನಗರಸಭೆ ರದ್ದು ಮಾಡಿದೆ. ಇಂದು ಉಡುಪಿ ನಗರಸಭೆಯಲ್ಲಿ ನಡೆದ ತುರ್ತು ಖಂಡನಾ ನಿರ್ಣಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶಾಸಕ ರಘುಪತಿ ಭಟ್ ಮಾತನಾಡಿ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮೇಲೆ ಹಲ್ಲೆ, ದೌರ್ಜನ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಈ ವಿಷಯದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪೌರಕಾರ್ಮಿಕನಿಗೆ ಹಲ್ಲೆ ನಡೆಸಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, […]

ಸಾಣೂರು ಯುವಕ ಮಂಡಲ: ಮಳೆ ನೀರು ಕೊಯ್ಲು ಮಾಹಿತಿ ಕಾರ್ಯಾಗಾರ

ಸಾಣೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಪರಂಪರಾಗತ ಕೃಷಿ ವಿಕಾಸ ಯೋಜನೆ ಸಾಣೂರು ಮತ್ತು ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಳೆ ನೀರು ಕೊಯ್ಲು ಅಭಿಯಾನ ಮತ್ತು ಮಾಹಿತಿ ಕಾರ್ಯಾಗಾರವು ಸಾಣೂರು ಯುವಕ ಮಂಡಲದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ವಿಲ್ಫ್ರೇಡ್ ಡಿ ಸೋಜಾ ಮಾತನಾಡಿ, ಪ್ರಧಾನಿ […]

ಅಂಬಾನಿ ನಿವಾಸದ ಬಳಿ ಸ್ಪೋಟಕ ಪತ್ತೆ ಪ್ರಕರಣ: ಎನ್ ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆ ಬಂಧನ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಎನ್ ಕೌಂಟರ್ ಸ್ಪೆಷಲಿಸ್ಟ್ ಪೊಲೀಸ್ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಬಂಧಿಸಿದೆ. ಸತತ 12 ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದ ಬಳಿಕ ಸಚಿನ್ ವಾಜೆ ಅವರನ್ನು ಸುಮಾರು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಫೆ. 25ರಂದು ಮುಕೇಶ್ ಅಂಬಾನಿ ನಿವಾಸದ ಮುಂದೆ ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಮತ್ತು ಬೆದರಿಕೆ ಪತ್ರಗಳು ದೊರೆತಿದ್ದವು. ಈ […]

ಯಕ್ಷಗಾನ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ ಕುಟುಂಬಕ್ಕೆ ಯಕ್ಷಗಾನ ಕಲಾರಂಗದ ವತಿಯಿಂದ ಆರ್ಥಿಕ ನೆರವು

ಉಡುಪಿ: ಕಳೆದ ವರ್ಷ ನಿಧನ ಹೊಂದಿದ ಬಡಗತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ ಅವರ ಕುಟುಂಬಕ್ಕೆ ಯಕ್ಷಗಾನ ಕಲಾರಂಗದ ವತಿಯಿಂದ ₹ 25 ಸಾವಿರ ಮೊತ್ತದ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ನೇಜಾರಿನಲ್ಲಿರುವ ಅವರ ಮನೆಗೆ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ತೆರಳಿ ಅಧ್ಯಕ್ಷ ಎಂ. ಗಂಗಾಧರ ರಾವ್ ನೇತೃತ್ವದ ನಿಯೋಗದಿಂದ ಸುಬ್ರಹ್ಮಣ್ಯ ಆಚಾರ್ ಅವರ ಪತ್ನಿ ಸರಸ್ವತಿ ಆಚಾರ್ ಅವರಿಗೆ ನೆರವು ಹಸ್ತಾಂತರಿಸಿತು. ಅವರ ಪುತ್ರಿ ಸೀಮಾಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಭರಿಸುತ್ತಿದೆ. […]