ಅಕ್ರಮ ಗೋಮಾಂಸ ಸಾಗಾಟ: ಇಬ್ಬರ ಬಂಧನ
ಕುಂದಾಪುರ: ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದು, 40 ಸಾವಿರ ಮೌಲ್ಯದ 150 ಕೆ.ಜಿ. ದನದ ಮಾಂಸ ವಶಪಡಿಸಿಕೊಂಡಿದ್ದಾರೆ. ಭಟ್ಕಳದ ಶೌಕತ್ ಅಲಿ ಸ್ಟ್ರೀಟ್ ನಿವಾಸಿ ಸೈಯದ್ ಮೊಸ್ಸಿನ್ ಲಂಕಾ (52), ಭಟ್ಕಳದ ಜಾಲಿ ಅಜಾದ್ ನಗರ ನಿವಾಸಿ ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ (41) ಬಂಧಿತ ಆರೋಪಿಗಳು. ಬೈಂದೂರು ಸಮೀಪದ ಶಿರೂರು ಚೆಕ್ ಪೋಸ್ಟ್ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಮಾಡುವ […]
ನಿಟ್ಟೆ ಕಾಲೇಜು: ನಾರಿ ತತ್ವ ಕಾರ್ಯಕ್ರಮ
ನಿಟ್ಟೆ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ‘ನಾರಿ ತತ್ವ ಕಾರ್ಯಕ್ರಮ’ ನಿಟ್ಟೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕಿಯರಾದ ಶಾಂಭವಿ ಭಂಡಾರ್ಕರ್, ಡಾ. ಕಾಂತಿ ಹರೀಶ್, ಶಿಲ್ಪ ಹಳ್ಳಿಮನೆ ರೊಟ್ಟಿ ಅವರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲ ನಿರಂಜನ್ ಚಿಪ್ಲುನ್ಕರ್, ನಿಟ್ಟೆ ಹೈಸ್ಕೂಲ್ ಪ್ರಾಂಶುಪಾಲ ರಾಧಾ ಪ್ರಭು, ನಾಗೇಶ್ ಪ್ರಭು, ರಾಮಕೃಷ್ಣ ಬಿ, ಶಶಾಂಕ್ ಶೆಟ್ಟಿ ಉಪಸ್ಥಿತರಿದ್ದರು.