ಉಡುಪಿ ಸಂಸ್ಕೃತ ಕಾಲೇಜಿಗೆ ಮುಜರಾಯಿ ಇಲಾಖೆಯಿಂದ ₹ 25 ಲಕ್ಷ ದೇಣಿಗೆ ಮಂಜೂರು

ಉಡುಪಿ: ಉಡುಪಿ ಎಸ್ಎಂಎಸ್ ಪಿ ಸಂಸ್ಕೃತ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ರಾಜ್ಯ ಮುಜರಾಯಿ ಇಲಾಖೆಯಿಂದ ₹ 25 ಲಕ್ಷ ಅನುದಾನ ಮಂಜೂರಾಗಿದೆ. ಅನುದಾನ ಮಂಜೂರುಗೊಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಹಕರಿಸಿದ ಶಾಸಕ ಕೆ ರಘುಪತಿ ಭಟ್ ಅವರಿಗೆ ಶಿಕ್ಷಣ ಸಂಸ್ಥೆ ಧನ್ಯವಾದ ತಿಳಿಸಿದೆ.

ದ.ಕ‌‌. ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ: ಒಂದೇ ದಿನ 65 ಮಂದಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಜಿಲ್ಲೆಯಲ್ಲಿ 65 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇಂದು ಜಿಲ್ಲೆಯಲ್ಲಿ ಕೊರೊನಾದಿಂದ ಯಾರೂ ಮೃತಪಟ್ಟಿಲ್ಲ. ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 741ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಇಂದು 22 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 34,813 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಒಟ್ಟು 302 ಆಕ್ವೀವ್ ಕೇಸ್ ಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉಡುಪಿ: ಮಾ. 21ಕ್ಕೆ ಸುನಾಗ್ ಆರ್ಥೋಕೇರ್ ಆ್ಯಂಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಲ್ಲಿ ಉಚಿತ ಮೂಳೆ ಸಾಂದ್ರತೆ ಮತ್ತು ನೇತ್ರ ತಪಾಸಣೆ ಶಿಬಿರ

ಉಡುಪಿ: ಉಡುಪಿ ಸುನಾಗ್ ಆರ್ಥೋಕೇರ್ ಆ್ಯಂಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ಹಾಗೂ ಸುನಾಗ್ ನೇತ್ರ ಚಿಕಿತ್ಸಾಲಯ ಇವರ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಮಾರ್ಚ್ 21ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯವರೆಗೆ ಉಡುಪಿ ಎಂಜಿಎಂ ಕಾಲೇಜಿನ ಎದುರುಗಡೆ ರಸ್ತೆಯಲ್ಲಿ ಇರುವ ಸುನಾಗ್ ಆರ್ಥೋಕೇರ್ ಆ್ಯಂಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಲ್ಲಿ ನಡೆಯಲಿದೆ. ಭಾಗವಹಿಸುವ ತಜ್ಞರು: ಮೂಳೆ ತಜ್ಞ ಡಾ. ನರೇಂದ್ರ ಕುಮಾರ್ ಎಚ್.ಎಸ್., ಅರಿವಳಿಕೆ ಹಾಗೂ ಕುಟುಂಬ ತಜ್ಞೆ ಡಾ. […]

ಈ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೂ ಸರ್ಕಾರಿ ಉದ್ಯೋಗ, ವಾಶಿಂಗ್ ಮೆಶಿನ್, 2ಜಿಬಿ ಡೇಟಾ

ಚೆನ್ನೈ: ಏಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಎಐಎಡಿಎಂಕೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಜನಪ್ರಿಯ ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರ ಒಲೈಕೆಗೆ ಮುಂದಾಗಿದೆ. ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಏನಿದೆ.?: ಪ್ರತಿ ಕುಟುಂಬಕ್ಕೂ ಒಂದು ಸರ್ಕಾರಿ ಉದ್ಯೋಗ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವಾರ್ಷಿಕ 2G‌B ಡೇಟಾ ಹಾಗೆ ವಾರ್ಷಿಕವಾಗಿ 6 ಸಿಲಿಂಡರ್​ಗಳನ್ನು ಮನೆ ಬಳಕೆಗೆ ನೀಡುವುದಾಗಿಯೂ ಪಕ್ಷ ಘೋಷಿಸಿದೆ. ಸೋಲಾರ್ ಒಲೆ ಮತ್ತು ವಾಶಿಂಗ್​ಮಶಿನ್​ಗಳನ್ನು ಎಲ್ಲಾ ಮನೆಗೂ ಒದಗಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ. ಸಿಎಎ ವಿರುದ್ಧವೂ ಹೋರಾಟ ನಡೆಸುವುದಾಗಿ ಭರವಸೆ […]

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುವುದು ಸೂಕ್ತ

ಬೆಂಗಳೂರು: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕೊರೊನಾ ಎರಡನೇ ಅಲೆ ಜೋರಾಗ್ತಿದೆ. ಜನ ಎಚ್ಚರಿಕೆಯಿಂದ ಇರಬೇಕು. ಕಾರ್ಯಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಾನೂ ಕೂಡಾ ಪ್ರತಿದಿನ ಐದಾರು ನೂರು ಕಿ.ಮೀ ಪ್ರಯಾಣ ಮಾಡ್ತಿದ್ದೇನೆ. ನೂರಾರು ಜನರ ಸಂಪರ್ಕದಲ್ಲಿ ಇದ್ದೇನೆ. ದೇವರ ದಯೆಯಿಂದ ಏನೂ ಅನಾಹುತ ಆಗಿಲ್ಲ. ಆದರೂ ಜನ ಎಚ್ಚರಿಕೆಯಿಂದ ಇರೋದು ಸೂಕ್ತ ಎಂದು ಹೇಳಿಕೆ ನೀಡಿದ್ದಾರೆ.